Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳ ಸಂತೆ: ಆಟ-ಪಾಠದ ನಡುವಲ್ಲೊಂದು ವ್ಯಾವಹಾರಿಕ ನೋಟ
    ವಿಶೇಷ ವರದಿ

    ಮಕ್ಕಳ ಸಂತೆ: ಆಟ-ಪಾಠದ ನಡುವಲ್ಲೊಂದು ವ್ಯಾವಹಾರಿಕ ನೋಟ

    Updated:28/02/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು, ಅ.09: ಇಂದು ಬೈಂದೂರಿನ ಸಂತೆಯ ಗೌಜಿಗಿಂತ ತಗ್ಗರ್ಸೆ ಶಾಲಾ ಆವರಣದಲ್ಲಿನ ಸಂತೆಯ ಗೌಜು ಜೋರಾಗಿತ್ತು. ಟೊಮೆಟೋ 20ರೂಪಾಯ್, ಆಲೂಗೆ ಬರೀ 15ರೂಪಾರ್, ಫ್ರೇಶ್ ಮೀನ್ ಇತ್ತ್ ತಕನಿ, ಊರ್ ಕೋಳಿ ಬೇಕಾ 1,000 ಕೊಡಿ, ಬಟ್ಟಿಗೆ ಇವತ್ ಮಾತ್ರ ಫುಲ್ ಡಿಸ್ಕೌಂಟ್ ಇತ್ತ್ ಕಾಣಿ, ಬನ್ನಿ ಸರ್ 2ರೂಪಾಯಾಗ್ ನಿಮ್ ತೂಕ ಕಾಣ್ಲಾಕ್, ಹೊಯ್ ಒಂದು ಆಟ ಆಡಿ ಹೋಯ್ನಿ ಬರೀ ಹತ್ತೇ ರೂಪಾಯಿ… ಹೀಗೆ ಅಲ್ಲಿನ ವ್ಯಾಪಾರಿಗಳು ಕೂಗಿ ಕರೆಯುತ್ತಿದ್ದರೇ ಗ್ರಾಹಕರು ತಮಗೆ ಬೇಕಾದ್ದನ್ನು ಕೊಂಡು ತೆರಳುತ್ತಿದ್ದರು. ಅಸಲಿಗೆ ಅಲ್ಲಿದ್ದವರ್ಯಾರೂ ವ್ಯಾಪಾರಿಗಳೂ ಆಗಿರಲಿಲ್ಲ, ಕೊಳ್ಳಲು ಹೋದವರು ಅಲ್ಲಿನ ಗ್ರಾಹಕರೂ ಆಗಿರಲಿಲ್ಲ, ಅಷ್ಟೇ ಏಕೆ ಅದು ದಿನವೂ ಸಂತೆ ನಡೆಯುವ ಸ್ಥಳವೂ ಆಗಿರಲಿಲ್ಲ.

    Click Here

    Call us

    Click Here

    ಆದರೆ ಈ ದಿನದ ಮಟ್ಟಿಗೆ ತಗ್ಗರ್ಸೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗಿನಿಂದಲೇ ಒಂದು ವಿಶೇಷ ಸಡಗರ ಆರಂಭಗೊಂಡಿತ್ತು. ಅಲ್ಲಿ ಅಕ್ಷರಶಃ ಸಂತೆಯ ವಾತಾವರಣ ನಿರ್ಮಾಣಗೊಂಡಿತ್ತು. ಆ ಹೊತ್ತಿಗೆ ಶಾಲೆಯ ಮಕ್ಕಳೆಲ್ಲ ವ್ಯಾಪಾರಿಗಳಾಗಿದ್ದರು. ಪೋಷಕರು, ಊರವರೆಲ್ಲ ಗ್ರಾಹಕರಾಗಿದ್ದರು. ‘ಮಕ್ಕಳ ಸಂತೆ’ ಎಂಬ ಹೆಸರನ್ನೂ ಮೀರಿಸಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದರು.  (ಕುಂದಾಪ್ರ ಡಾಟ್ ಕಾಂ ವರದಿ)

    ಏನಿದು ಮಕ್ಕಳ ಸಂತೆ:
    ಮಕ್ಕಳಲ್ಲಿ ವ್ಯವಹಾರ ಕುಶಲತೆ, ಸಂವಹನ ಕಲೆ, ಸಾಮಾಜಿಕ ಬದುಕಿನೊಂದಿಗಿನ ಒಡನಾಟದ ಕೌಶಲ್ಯವನ್ನು ಕಲಿಸುವುದರೊಂದಿಗೆ, ಅವರಲ್ಲಿನ ಸೃಜನಶೀಲತೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡ ವಿಭಿನ್ನ ಕಾರ್ಯಕ್ರಮ ಮಕ್ಕಳ ಸಂತೆ. ಬೈಂದೂರು ವಲಯದಲ್ಲೇ ಪ್ರಥಮ ಭಾರಿಗೆಂಬಂತೆ ತಗ್ಗರ್ಸೆ ಶಾಲಾ ವಠಾರದಲ್ಲಿ ಮಕ್ಕಳ ಸಂತೆ ಅನಾವರಗೊಂಡಿತ್ತು. ಊರಿನ ಜನರೂ ಕೂಡ ಬೈಂದೂರು ಸಂತೆಗೆ ತೆರಳುವ ಬದಲಿಗೆ ಇಲ್ಲಿಯೇ ಬಂದು ತಮಗೆ ಬೇಕಾದ ವಸ್ತುಗಳನ್ನು ಕೊಂಡುಕೊಂಡರು.  (ಕುಂದಾಪ್ರ ಡಾಟ್ ಕಾಂ ವರದಿ)

    ಏನೇನಿತ್ತು ಮಕ್ಕಳ ಸಂತೆಯಲ್ಲಿ:
    ತರಕಾರಿ ಅಂಗಡಿ, ಪಾತ್ರದ ಅಂಗಡಿ, ಫ್ಯಾನ್ಸಿ ಸ್ಟೋರ್, ವಿವಿಧ ಹಣ್ಣು, ಪಾನೀಯದ ಅಂಗಡಿ, ಬುಕ್ ಸ್ಟಾಲ್, ಬಟ್ಟೆ ಅಂಗಡಿ, ಬಗೆಬಗೆಯ ತಿಂಡಿ ತಿನಿಸುಗಳ ಮಳಿಗೆ, ಮೀನು, ಕೋಳಿ ವ್ಯಾಪಾರ, ತೂಕ ನೊಡುವ ಯಂತ್ರ, ಮನೋರಂಜನೆಗಾಗಿ ಆಟ, ಐಸ್ ಕ್ರೀಮ್ ಹೀಗೆ ಹತ್ತಾರು ಅಂಗಡಿ ಮಳಿಗೆಗಳಲ್ಲಿ ಕುಳಿತು ಮಕ್ಕಳು ಗ್ರಾಹಕರನ್ನು ಕೂಗಿ ಕರೆದು ವ್ಯಾಪಾರ ನಡೆಸುತ್ತಿದ್ದರು.  (ಕುಂದಾಪ್ರ ಡಾಟ್ ಕಾಂ ವರದಿ)

    [quote bgcolor=”#ffffff” arrow=”yes” align=”right”]* ಮಕ್ಕಳಲ್ಲಿ ವ್ಯವಹಾರ ಕುಶಲತೆ, ತೂಕ-ಅಳತೆಗಳ ಬಗ್ಗೆ ಅರಿವು ಹಾಗೂ ಸಮಾಜದೊಂದಿಗೆ ಬೆರೆಯುವ ರೀತಿಯು ತಿಳಿಯಬೇಕೆಂಬ ಎಂಬ ಉದ್ದೇಶದಿಂದ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು. ಮಕ್ಕಳ ಪೋಷಕರು, ಊರಿನ ಜನ ನಿರೀಕ್ಷೆಗೂ ಮೀರಿ ಮಕ್ಕಳ ಸಂತೆಯಲ್ಲಿ ಪಾಲ್ಗೊಂಡು, ಕೊಂಡು ಹೋಗಿದ್ದಾರೆ. ಇದೊಂದು ವಿಭಿನ್ನ ಅನುಭವ ನೀಡಿದೆ. – ಜ್ಯೋತಿ ಎಚ್. ಪ್ರಭಾರ ಮುಖ್ಯ ಶಿಕ್ಷಕಿ[/quote]

    Click here

    Click here

    Click here

    Call us

    Call us

    ಸಂತೆಗೂ ಎಂಟ್ರಿ ಕೂಪನ್, ಅದೃಷ್ಟಶಾಲಿಗೆ ಚಿನ್ನದ ನಾಣ್ಯ:
    ತಗ್ಗರ್ಸೆ ಶಾಲೆಯ ಸಂತೆಯ ಆವರಣ ಪ್ರವೇಶಿಸಬೇಕಿದ್ದರೇ 5ರೂಪಾಯಿಯ ಒಂದು ಕೂಪನ್ ಖರೀದಿಸಬೇಕಿತ್ತು. ಅದರಲ್ಲಿನ ಅದೃಷ್ಟಶಾಲಿಗಳಿಗೆ ಚಿನ್ನದ ನಾಣ್ಯ ಗೆಲ್ಲುವ ಅವಕಾಶವಿತ್ತು. ಇದು ಆಯೋಜನೆಯೊಳಗಿನ ವ್ಯವಹಾರದ ಕುಶಲತೆಯನ್ನು ತೋರ್ಪಡಿಸುತ್ತದೆ.

    ಊರಿಗೆ ಸಂಭ್ರಮ, ಭರ್ಜರಿ ವ್ಯಾಪಾರ:
    ಪ್ರಥಮ ಭಾರಿಗೆ ಶಾಲೆಯಲ್ಲಿ ಇಂತಹದ್ದೊಂದು ಕಾರ್ಯಕ್ರಮ ನಡೆದುದ್ದರಿಂದ ಊರಿನ ಜನರಲ್ಲೂ ಹೇಗೆ ನಡೆಯುತ್ತದೆಂಬ ಕುತೂಹಲವಿತ್ತು. 2 ದಿನದ ಹಿಂದೆಯೇ ತಗ್ಗರ್ಸೆಯಲ್ಲಿ ಸಂತೆ ಅಂತೆ ಎಂಬ ಮಾತು ಕೇಳಿ ಬರುತ್ತಿತ್ತು. ಇಂದು ಬೆಳಿಗ್ಗೆಯೇ ಹತ್ತಾರು ಮಂದಿ ಮಕ್ಕಳ ಸಂತೆಗೆ ಬಂದು ಬೇಕಾದ ವಸ್ತುಗಳನ್ನು ಖರೀದಿಸಿದ್ದರು. ತಗ್ಗರ್ಸೆಯ ಉದ್ಯಮಿ ನಾರಾಯಣ ಹೆಗ್ಡೆ ಬೆಳಿಗ್ಗೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿ.ಪಂ ಸದಸ್ಯ ಬಾಬು ಶೆಟ್ಟಿ, ಶಿಕ್ಷಣ ಇಲಾಖೆಯ ರೂಪ್ಲಾ ಕಾಮತ್, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರದೀಪ್ ಕುಮಾರ್, ರಾಜು ಹುದಾರ್, ಪ್ರಭಾಕರ, ಶ್ರೀಧರ್ ಎಂ.ಪಿ, ದಿವಾಕರ ಮೊದಲಾದವರು ಸಮಾರಂಭದಲ್ಲಿದ್ದರು. ಸಂಜೆಯ ತನಕವೂ ನಡೆದ ಸಂತೆಯಲ್ಲಿ ವ್ಯಾಪಾರ ಮಾತ್ರ ಭರ್ಜರಿಯಾಗಿತ್ತು. ಮಧ್ಯಾಹ್ನದ ವೇಳೆಗಾಗಲೇ ಕೆಲವು ವಸ್ತುಗಳ ಖಾಲಿಯಾಗಿದ್ದವು. (ಕುಂದಾಪ್ರ ಡಾಟ್ ಕಾಂ ವರದಿ)

    ಒಟ್ಟಿನಲ್ಲಿ ಆಟ ಪಾಠಗಳಿಗಷ್ಟೇ ಸೀಮಿತವಾಗಿದ್ದ ಮಕ್ಕಳಲ್ಲಿನ ಸೃಜನಶೀಲತೆಯನ್ನು ಹೊರಹಾಕಲು ‘ಮಕ್ಕಳ ಸಂತೆ’ ಎಂಬ ವಿನೂತನ ಕಾರ್ಯಕ್ರಮವನ್ನು ಏರ್ಪಡಿಸುವ ಮೂಲಕ ವಿಭಿನ್ನ ಪ್ರಯತ್ನಕ್ಕೆ ಮುಂದಾದ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಎಚ್ ಹಾಗೂ ಇತರ ಶಿಕ್ಷಕಿಯರ ತಂಡವನ್ನು ಪ್ರಯತ್ನವನ್ನು ಮೆಚ್ಚಲೇಬೇಕು.

    -ಸುನಿಲ್ ಹೆಚ್. ಜಿ. ಬೈಂದೂರು

    _MG_1451 _MG_1455 _MG_1459 _MG_1461 _MG_1462 _MG_1465 _MG_1467 _MG_1470 _MG_1474 _MG_1473 _MG_1475 _MG_1476 _MG_1479 _MG_1480 _MG_1488 _MG_1482 _MG_1489 _MG_1492 _MG_1490 _MG_1493 _MG_1494 _MG_1504 _MG_1502 _MG_1501 _MG_1499 _MG_1497

    Byndoor Fair school ಮಕ್ಕಳ ಸಂತೆ
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ವೃದ್ಧೆ ನಾಪತ್ತೆ

    19/12/2025

    ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    15/12/2025

    ಡಿ.14ರಿಂದ 08 ದಿನಗಳ ಕಾಲ ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ: ಆನಂದ ಮದ್ದೋಡಿ

    12/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.