Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೂತನ ತಾಲೂಕು ರಚನೆ ಹಿನ್ನೆಲೆ, ಆಟೋರಿಕ್ಷಾ ಸಂಚಾರ ಮಾರ್ಪಾಡು ಅಧಿಸೂಚನೆ
    ಉಡುಪಿ ಜಿಲ್ಲೆ

    ನೂತನ ತಾಲೂಕು ರಚನೆ ಹಿನ್ನೆಲೆ, ಆಟೋರಿಕ್ಷಾ ಸಂಚಾರ ಮಾರ್ಪಾಡು ಅಧಿಸೂಚನೆ

    Updated:01/11/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ನ.1:
    ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ವ್ಯಾಪ್ತಿಯ ಪ್ರದೇಶಗಳು ಅಭಿವೃದ್ಧಿ ಹೊಂದಿ ಜನಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಕಾಪು, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕುಗಳು ರಚನೆಯಾಗಿರುವ ಹಿನ್ನೆಲೆ, ನಗರಗಳ ಜನಸಂಖ್ಯೆಗೆ ಅನುಗುಣವಾಗಿ ಆಟೋರಿಕ್ಷಾಗಳನ್ನು ಹೆಚ್ಚಿಸುವುದು, ರಿಕ್ಷಾ ನಿಲುಗಡೆಗೆ ಸ್ಥಳಾವಕಾಶದ ಕೊರತೆ, ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವುದು, ರಸ್ತೆ ಅಪಘಾತಗಳನ್ನು ತಡೆಯಲು, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವನ್ನು ನಿಯಂತ್ರಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತೀ ಅವಶ್ಯವೆಂದು ಪರಿಗಣಿಸಿ, 2012 ಏಪ್ರಿಲ್ 21 ರ ಅಧಿಸೂಚನೆಯಲ್ಲಿ ಹೊರಡಿಸಿರುವ ಆದೇಶವನ್ನು ಮಾರ್ಪಾಡು ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಈ ಕೆಳಗಿನಂತೆ ಆದೇಶ ಹೊರಡಿಸಿರುತ್ತಾರೆ.

    Click Here

    Call us

    Click Here

    2012 ಫೆಬ್ರವರಿ 1 ರಿಂದ 2022 ಜೂನ್ 30 ರ ವರೆಗೆ ಪ್ರಸ್ತುತ ಉಡುಪಿ ತಾಲೂಕಿನ ವಿಳಾಸ ಹೊಂದಿದ್ದು, ಉಡುಪಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಇವರಿಂದ ಪರವಾನಿಗೆ ಪಡೆದು ಸಂಚರಿಸುತ್ತಿರುವ ಎಲ್ಲಾ ಆಟೋರಿಕ್ಷಾಗಳು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಈ ಹಿಂದಿನ ಅಧಿಸೂಚನೆಯಲ್ಲಿ ನಿರ್ಭಂದಿಸಿದ ಸ್ಥಳಗಳನ್ನು ಸಡಿಲಿಸಿ, ನಗರಸಭಾ ವ್ಯಾಪ್ತಿಯಲ್ಲಿ ಸಂಚರಿಸಬಹುದಾಗಿದೆ. ಜಿಲ್ಲೆಯ ಸಾರಿಗೆ ಪ್ರಾಧಿಕಾರದಿಂದ ಪ್ರಸ್ತುತ ಸಾಲಿನ ಜುಲೈ 1 ರ ನಂತರ ಪರವಾನಿಗೆ ಪಡೆದ ಆಟೋರಿಕ್ಷಾಗಳು ಅಥವಾ ಇತರೆಡೆಯಿಂದ ವರ್ಗಾವಣೆ ಹೊಂದಿ ಬರುವ ಆಟೋರಿಕ್ಷಾಗಳು ಉಡುಪಿ ನಗರಸಬಾ ವ್ಯಾಪ್ತಿಯನ್ನು ಪ್ರವೇಶಿಸುವುದು ಹಾಗೂ ಸಂಚರಿಸುವುದನ್ನು ನಿಷೇಧಿಸಲಾಗಿದೆ.

    2022 ಸೆಪ್ಟಂಬರ್ 30 ರ ವರೆಗೆ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಪರವಾನಿಗೆ ಪಡೆದು ಸಂಚರಿಸುತ್ತಿರುವ ಎಲ್ಲಾ ಆಟೋ ರಿಕ್ಷಾಗಳು ಈ ಹಿಂದಿನಂತೆಯೇ ಪರವಾನಿಗೆಯಲ್ಲಿ ನಮೂದಿಸಿದ ಪ್ರದೇಶದಲ್ಲಿ ಅವಿಭಾಜಿತ ತಾಲೂಕಿನಾದ್ಯಂತ ಸಂಚರಿಸಬಹುದಾಗಿದೆ.

    2022 ಅಕ್ಟೋಬರ್ 1 ರ ನಂತರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಇವರಿಂದ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಪರವಾನಿಗೆ ಪಡೆದು ಸಂಚರಿಸುತ್ತಿರುವ ಎಲ್ಲಾ ಆಟೋ ರಿಕ್ಷಾಗಳು ನಿರ್ಭಂದಿತ ಪ್ರದೇಶಗಳನ್ನು ಹೊರತುಪಡಿಸಿ, ಆಯಾ ತಾಲೂಕಿನಾದ್ಯಂತ ಮಾತ್ರ ಸಂಚರಿಸಬೇಕು ಹಾಗೂ ಕಾಪು, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕು ಪರವಾನಿಗೆ ಪಡೆದು ಸಂಚರಿಸುತ್ತಿರುವ ಎಲ್ಲಾ ಆಟೋ ರಿಕ್ಷಾಗಳು ಆಯಾ ತಾಲೂಕಿನಾದ್ಯಂತ ಮಾತ್ರ ಸಂಚರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    twelve − five =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.