Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂರು ಭಾಷೆಗಳಲ್ಲಿ ಸಲೀಸಾಗಿ ಉಲ್ಟಾ ಅಕ್ಷರ ಬರೆಯುವ ಅಪರೂಪದ ಕಲಾವಿದ
    ವಿಶೇಷ ವರದಿ

    ಮೂರು ಭಾಷೆಗಳಲ್ಲಿ ಸಲೀಸಾಗಿ ಉಲ್ಟಾ ಅಕ್ಷರ ಬರೆಯುವ ಅಪರೂಪದ ಕಲಾವಿದ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬಿ. ರಾಘವೇಂದ್ರ ಪೈ
    ಗಂಗೊಳ್ಳಿ : ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಪ್ರತಿಯೊಬ್ಬರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಅನೇಕ ಸಂಘ ಸಂಸ್ಥೆಗಳು ವಿವಿಧ ಇಲಾಖೆಗಳು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರೂ ಅನೇಕ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶ ದೊರೆಯುತ್ತಿಲ್ಲ. ಕಲಾವಿದ ಆರ್ಥಿಕ ಸ್ಥಿತಿವಂತನಾಗಿದ್ದರೆ ಮಾತ್ರ ಆತನ ಕಲೆಗೆ ಹೆಚ್ಚಿನ ಪ್ರೋತ್ಸಾಹ, ಸಹಕಾರ ದೊರೆಯುತ್ತಿರುತ್ತದೆ ಎಂಬ ಮಾತುಗಳಿಗೆ ಇಂಬು ನೀಡುವಂತಿದೆ ಗಂಗೊಳ್ಳಿ ಸಮೀಪದ ಗುಜ್ಜಾಡಿಯ ಕಲಾವಿದನೊಬ್ಬನ ಕಲಾ ಬದುಕು.

    Click Here

    Call us

    Click Here

    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಜ್ಜಾಡಿ ಎಂಬ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿರುವ ದಿ. ಚಂದ್ರ ಆಚಾರಿ ಮತ್ತು ಸುಶೀಲಾ ಆಚಾರಿ ದಂಪತಿಯ ಪುತ್ರ ಮಂಜುನಾಥ ಆಚಾರಿ (36) ಎಂಬಾತ ಕಲಿತದ್ದು 7ನೇ ತರಗತಿ ಮಾತ್ರ. ಆದರೆ ಈತನಲ್ಲಿರುವ ಪ್ರತಿಭೆ ಮಾತ್ರ ಅತ್ಯದ್ಬುತವಾದದ್ದು. ವಿವಿಧ ರೀತಿಯ ಕೈಚಳಕ, ಕಲೆಗಳನ್ನು ಕರಗತ ಮಾಡಿಕೊಂಡಿರುವ ಅದೆಷ್ಟೋ ಕಲಾವಿದರು ನಮ್ಮ ಮುಂದೆ ಇದ್ದರೂ ಕಡಿಮೆ ಶಿಕ್ಷಣ ಪಡೆದುಕೊಂಡ ಮಂಜುನಾಥನ ಕಲಾ ಸಾಧನೆ ಎಲ್ಲರನ್ನೂ ನಿಬ್ಬೆರಗಾಗುವಂತೆ ಮಾಡಿದೆ. ಈತ ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಅಕ್ಷರಗಳನ್ನು, ವಾಕ್ಯಗಳನ್ನು ಮತ್ತು ಶಬ್ದಗಳನ್ನು ಉಲ್ಟಾ ಬರೆಯುತ್ತಾನೆ. ಈತ ಬರೆದಿರುವ ಅಕ್ಷರಗಳನ್ನು ಕನ್ನಡಿಯ ಮುಂದೆ ಹಿಡಿದು ನೋಡಿದರೆ ಈತ ಬರೆದಿರುವುದು ನಮಗೆ ಸ್ಪಷ್ಟವಾಗಿ ತಿಳಿಯುತ್ತದೆ. ಯಾವುದೇ ಅಂಜಿಕೆ ಇಲ್ಲದೆ ಕೈಯಲ್ಲಿ ಪೆನ್ನು, ಪೆನ್ಸಿಲ್ ಹಿಡಿದು ಹೇಳಿದ ಯಾವುದೇ ಶಬ್ದ ಅಥವಾ ಹೆಸರುಗಳನ್ನು ಮೂರು ಭಾಷೆಗಳಲ್ಲಿ ನಿರರ್ಗಳವಾಗಿ ಉಲ್ಟಾ ಬರೆದು ತೋರಿಸುವ ಈತನ ಕಲೆಯನ್ನು ಈವರೆಗೆ ಯಾರೂ ಗುರುತಿಸಿಲ್ಲ ಎಂಬುದು ವಿಪರ್ಯಾಸದ ಸಂಗತಿ. (ಕುಂದಾಪ್ರ ಡಾಟ್ ಕಾಂ)

    ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡ ಈತನಿಗೆ ತಾಯಿ, ಓರ್ವ ಸಹೋದರ ಮತ್ತು ಇಬ್ಬರು ಸಹೋದರಿಯಿದ್ದಾರೆ. ಮನೆಯಲ್ಲಿನ ಕಿತ್ತು ತಿನ್ನುವ ಬಡತನ ಇವರ ಶಿಕ್ಷಣಕ್ಕೆ ಅಡ್ಡಿಯಾಯಿತು. ಇಲೆಕ್ಟ್ರಿಶಿನ್ ಸಹಾಯಕನಾಗಿ ಕೆಲಸ ಮಾಡುತ್ತಿರುವ ಈತನಲ್ಲಿ ಹುದುಗಿರುವ ಈ ಕಲೆಯನ್ನು ನೋಡಿ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಿತ್ತು ತಿನ್ನುವ ಬಡತನದ ಮಧ್ಯೆ ಇಂತಹ ಅದ್ಭುತ ಕಲಾವಿದ ಅರಳಿದ್ದರೂ ಈತನ ಈ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸುವವರ ಸಂಖ್ಯೆ ಬಹಳ ವಿರಳವಾಗಿದೆ. ಈತ ಬರೆಯುವುದನ್ನು ನೋಡಿ ಶಬ್ಬಾಸ್ ಎಂದು ಹೇಳಿದರಷ್ಟೇ ಸಾಲದು, ಈತನಲ್ಲಿರುವ ಕಲೆಯನ್ನು ಬೆಳೆಸಲು ಅಗತ್ಯವಿರುವ ಸಹಕಾರ ಪ್ರೋತ್ಸಾಹ ಬೇಕಾಗಿದೆ. (ಕುಂದಾಪ್ರ ಡಾಟ್ ಕಾಂ)

    ನನ್ನಲ್ಲಿ ಇಂತಹ ಕಲೆಯಿದೆ ಎಂದು ಎಲ್ಲಿಯೂ ಹೇಳಿಕೊಳ್ಳದ ಮಂಜುನಾಥ ಮಿತಭಾಷಿ. ಕೇಳಿದರೆ ಮಾತ್ರ ಹೇಳುವ ನಗುಮುಖದ ಸ್ವಭಾವ ಹೊಂದಿರುವ ಈತ ತನ್ನ ಕುಟುಂಬ ಸಂಸಾರದ ಬಂಡಿ ಸಾಗಿಸಲು ಕಷ್ಟಪಡುತ್ತಿದ್ದಾನೆ. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಈತ ತನ್ನ ಕಲೆಯನ್ನು ಇತರರಿಗೆ ತಿಳಿಸಿ ಆ ಕಲೆಯ ಮೂಲಕ ತಾನು ಏನನ್ನಾದರೂ ಸಾಧಿಸಬೇಕೆಂಬ ಛಲ ಹಂಬ ಹೊಂದಿದ್ದಾನೆ. ಈತನ ಆಸೆಗೆ ಒತ್ತಾಸೆಯಾಗುವ, ಈತನ ಕಲೆಯನ್ನು ಪ್ರೋತ್ಸಾಹಿಸುವ ಕಲಾವಿದರ, ದಾನಿಗಳ ಸಹಾಯ ಸಹಕಾರ ದೊರೆತರೆ ಈತನ ಮುಂದೊಂದು ದಿನ ಅದ್ಭುತ ಕಲಾವಿದನಾಗುವುದರಲ್ಲಿ ಎರಡು ಮಾತಿಲ್ಲ. (ಕುಂದಾಪ್ರ ಡಾಟ್ ಕಾಂ)

    Gangolli
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ

    21/04/2026

    ಗಂಗೊಳ್ಳಿ: ಅಂಗನವಾಡಿ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ

    20/04/2026

    ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಅರ್ಚಕ ಬಾಬಣ್ಣ ಭಟ್‌ ನಿಧನ

    15/04/2026
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.