Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪನೆ ನಿರಾಕರಿಸಿದ ಸಚಿವ ಸುನಿಲ್ ಕುಮಾರ್ ನಡೆ ಖಂಡನೀಯ, ಹೋರಾಟದ ಎಚ್ಚರಿಕೆ
    ಊರ್ಮನೆ ಸಮಾಚಾರ

    ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪನೆ ನಿರಾಕರಿಸಿದ ಸಚಿವ ಸುನಿಲ್ ಕುಮಾರ್ ನಡೆ ಖಂಡನೀಯ, ಹೋರಾಟದ ಎಚ್ಚರಿಕೆ

    Updated:22/02/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರವು ಶುದ್ಧ ಕನ್ನಡದ ನೆಲ. ಕುಂದಾಪ್ರ ಕನ್ನಡ ಭಾಷೆಯ ಮೇಲೆ ಬೇರೆ ಭಾಷೆಯ ಪ್ರಭಾವವಿಲ್ಲ. ಕರ್ನಾಟಕ ರಾಜ್ಯದಲ್ಲಿ ವಿಭಿನ್ನ ರೀತಿಯಲ್ಲಿ ಕನ್ನಡದ ಉಚ್ಛಾರವಿದೆಯಾದರೂ ಕುಂದಾಪ್ರ ಕನ್ನಡದ ಪರಿಶುದ್ಧತೆ, ಜನಪದ ಸಾಹಿತ್ಯದಲ್ಲಿನ ವೈಶಿಷ್ಟ್ಯ, ಸಂಸ್ಕೃತಿ ಬೇರೆಲ್ಲೂ ಇಲ್ಲ. ಸಾವಿರಾರು ವರ್ಷಗಳಿಂದ ತನ್ನತನ ಉಳಿಸಿಕೊಂಡಿರುವ ಈ ಭಾಷೆಯ ವೈಶಿಷ್ಟ್ಯ ಮತ್ತು ಚೆಲುವಿಗೆ ಇನ್ನೊಂದರ ಹೋಲಿಕೆ ಸಾಧ್ಯವಿಲ್ಲ. ಇಂತಹ ಭಾಷೆಗೆ ಪ್ರತ್ಯೇಕ ಅಕಾಡೆಮಿಯ ಅಗತ್ಯವಿದ್ದು, ಸರಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಈ ಬಗ್ಗೆ ನೀರಾಸಕ್ತಿ ತೋರಿರುವುದು ಖಂಡನೀಯ ಎಂದು ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರದ ಖಾಸಗಿ ಹೋಟೆಲಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಐದು ಸಾವಿರಕ್ಕೂ ಹೆಚ್ಚು ಶಬ್ದಗಳನ್ನು ಹೊಂದಿರುವ ಕುಂದಾಪ್ರ ಕನ್ನಡ ಭಾಷೆಯಲ್ಲಿ ನಿಘಂಟು ಪ್ರಕಟವಾಗಿದೆ. ಸಾಹಿತ್ಯ, ಸಂಗೀತ, ಚಲನಚಿತ್ರ ರಂಗಭೂಮಿ ಹಾಗೂ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕುಂದ ಕನ್ನಡ ನಿರಂತರವಾಗಿ ಬಳಕೆಯಾಗುತ್ತಿದೆ.

    ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪಿಸುವ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಎತ್ತಲಾದ ಪ್ರಶ್ನೆಗೆ ಸಚಿವರು, ಯಾರೊಂದಿಗೂ ಸಮಾಲೋಚಿಸದೇ, ಅಧ್ಯಯನ ಮಾಡದೇ ಕರ್ನಾಟಕದಲ್ಲಿ ವಿವಿಧ ರೀತಿಯ ಕನ್ನಡ ಮಾತನಾಡುವುದು ಸಾಮಾನ್ಯ ಎಂಬಂತೆ ಉತ್ತರ ನೀಡಿರುವುದು ಬೇಸರ ತರಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು ಉಡುಪಿ ಜಿಲ್ಲೆಯವರಾಗಿದ್ದು, ಅವರ ವಿಧಾನ ಸಭಾ ಕ್ಷೇತ್ರದ ಬಹಳಷ್ಟು ಗ್ರಾಮಗಳಲ್ಲಿ ಕುಂದಾಪ್ರ ಕನ್ನಡ ಭಾಷೆಯ ಜನರೇ ಇದ್ದರೂ ಈ ರೀತಿಯಲ್ಲಿ ಅಸಡ್ಡೆಯ ಉತ್ತರ ನೀಡಿರುವುದು ಖಂಡನೀಯ. ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪನೆ ಹಾಗೂ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಂದಾಪ್ರ ಕನ್ನಡ ಪೀಠಕ್ಕೆ ಅನುದಾನ ಮಂಜೂರಾತಿ ಬಗ್ಗೆ ಸರಕಾರ ಹಿಂದೇಟು ಹಾಕಿದರೆ ಹೋರಾಟದ ಹಾದಿ ತುಳಿಯಲಾಗುವುದು ಎಂದರು.

    ಹಿರಿಯ ಪತ್ರಕರ್ತ ಯು.ಎಸ್. ಶೆಣೈ ಅವರು ಮಾತನಾಡಿ, ಅಕಾಡೆಮಿ ಹಾಗೂ ಅಧ್ಯಯನ ಪೀಠ ಆರಂಭಿಸುವಂತೆ ಸರಕಾರಕ್ಕೆ ಹಿಂದೆಯೂ ಮನವಿಯನ್ನು ನೀಡಲಾಗಿತ್ತು. ಈ ಬಗ್ಗೆ ವಿವಿಧ ವಿದ್ವಾಂಸರಿಂದ ಮಾಹಿತಿ ಸಂಗ್ರಹಿಸಿ ವಿಧಾನ ಪರಿಷತ್‌ನಲ್ಲಿ ಮಂಜುನಾಥ ಭಂಡಾರಿಯವರು ಪ್ರಸ್ತಾಪ ಮಾಡಿ ಸರಕಾರದಿಂದ ಉತ್ತರ ಬಯಸಿದ್ದರು. ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಅವರು ಈ ಬಗ್ಗೆ ನಿರಾಶಾದಾಯಕ ಉತ್ತರ ನೀಡಿ, ಕುಂದಾಪ್ರ ಕನ್ನಡ ಅಕಾಡೆಮಿಯ ಪ್ರಸ್ತಾಪವನ್ನು ತಳ್ಳಿ ಹಾಕಿದ್ದಾರೆ. ಕನ್ನಡ ಭಾಷಾ ಸಮಗ್ರತೆಯ ದೃಷ್ಠಿಯಿಂದ ಸೂಕ್ತವಲ್ಲ ಎಂಬ ಅಸಮರ್ಪಕ ಹೇಳಿಕೆಯನ್ನು ನೀಡಿರುವುದು ನಮಗೆ ಬೇಸರ ತರಿಸಿದೆ ಎಂದರು.

    ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ಪುತ್ರನ್ ಮಾತನಾಡಿ, 30 ಲಕ್ಷಕ್ಕೂ ಅಧಿಕ ಭಾಷಿಕರಿರುವ, ಶುದ್ಧ ಕನ್ನಡ ಪ್ರಕಾರದ ಬಗ್ಗೆ ಸರಕಾರ ಅಸಡ್ಡೆ ತೋರಿರುವುದು ಸರಿಯಲ್ಲ. ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ವರ್ಷಗಳಿಂದ ಕುಂದಾಪ್ರ ಕನ್ನಡ ಅಕಾಡೆಮಿ ಅಥವಾ ಅಧ್ಯಯನ‌ ಪೀಠ ಆರಂಭಿಸುವಂತೆ ಠರಾವು ಮಂಡಿಸುತ್ತಲೇ ಬರಲಾಗುತ್ತಿದೆ. ಭಾಷೆಯ ಅಧ್ಯಯನ, ಉಳಿವು ಹಾಗೂ ರಚನಾತ್ಮಕ ಬೆಳವಣಿಗೆಯ ದೃಷ್ಟಿಯಿಂದ ಅಕಾಡೆಮಿ ಅಗತ್ಯವಾಗಿದ್ದು, ಸರಕಾರ ಈ ಮನವಿಯನ್ನು ಹಗುರವಾಗಿ ಪರಿಗಣಿಸಬಾರದು ಎಂದರು.

    Click here

    Click here

    Click here

    Click Here

    Call us

    Call us

    ಈ ವೇಳೆ ಕುಂದಾಪುರ ದಿನಕರ ಶೆಟ್ಟಿ ಮುಂಬಾರು‌ ಕುಂದಾಪುರ ಪ್ರಾಂತ್ಯ ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಭೌಗೋಳಿಕವಾಗಿ ತನ್ನದೇ ಆದ ಅಸ್ತಿತ್ವ ಹೊಂದಿದೆ. ಕುಂದಾಪ್ರ ಕನ್ನಡ ಭಾಷೆಗೆ ವಿಶೇಷವಾದ ಸ್ಥಾನವಿದೆ. ಆದಾಗ್ಯೂ ಅರ್ಹತೆಯಿಂದ ಪಡೆಯಬೇಕಾದ ಸೌಲಭ್ಯದಿಂದ ಈ ಭಾಗ ವಂಚಿತವಾಗುತ್ತಿರುವುದು ಬೇಸರದ ಸಂಗತಿ ಎಂದರು.

    ಮಾಧ್ಯಮಗೋಷ್ಠಿಯಲ್ಲಿ ಸುಧಾಕರ ಶೆಟ್ಟಿ ಆವರ್ಸೆ, ರತ್ನಾಕರ ಶೆಟ್ಟಿ ಆವರ್ಸೆ, ಗಣಪತಿ ಶ್ರೀಯಾನ್, ವೆಂಕಟೇಶ ಪೈ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.