Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಯಕರ್ತರ ಶ್ರಮದಲ್ಲಿಯೇ ಬಿಜೆಪಿ ಗೆಲುವಿದೆ: ಸಂಸದ ಬಿ.ವೈ. ರಾಘವೇಂದ್ರ
    ಊರ್ಮನೆ ಸಮಾಚಾರ

    ಕಾರ್ಯಕರ್ತರ ಶ್ರಮದಲ್ಲಿಯೇ ಬಿಜೆಪಿ ಗೆಲುವಿದೆ: ಸಂಸದ ಬಿ.ವೈ. ರಾಘವೇಂದ್ರ

    Updated:20/04/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಜನಸಾಮಾನ್ಯರ ನೋವು, ನಲಿವುಗಳನ್ನು ವಿಧಾನಸಭೆಯಲ್ಲಿ ಸಮರ್ಥವಾಗಿ ಮಂಡಿಸುವ ಚಾಕಚಕ್ಯತೆ ಹೊಂದಿರುವ, ರಾಷ್ಟ್ರೀಯತೆ ಮೈಗೂಡಿಸಿಕೊಂಡು ಕೆಲಸವನ್ನು ಮಾಡುತ್ತಿರುವ ಬೈಂದೂರು ಚೌಕಿದಾರ್ ಗುರುರಾಜ್ ಗಂಟಿಹೊಳೆಯವರ ವಿಜಯಕ್ಕೆ ಕಾರ್ಯಕರ್ತರು ಶಕ್ತಿಮಿರಿ ಕೆಲಸ ಮಾಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

    Click Here

    Call us

    Click Here

    Watch video

    ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೈಂದೂರು ಹೊಸ ಬಸ್ ನಿಲ್ದಾಣದಲ್ಲಿ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

    ಯುವಜನರ ರಣೋತ್ಸವ ಕಂಡಾಗ ನಮ್ಮ ಅಭ್ಯರ್ಥಿ ಗಂಟಿಹೊಳೆ ಅವರು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಚಿವ ಸುನಿಲ್ ಕುಮಾರ್ ಮಾತನಾಡಿ, ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ಕಾಲದಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿದೆ ಅವರ ಕಾರ್ಯಗಳು ಮುಂದುವರಿಯಬೇಕಾದರೆ ಬಿಜೆಪಿ ಅಭ್ಯರ್ಥಿ ಶಾಸಕನಾಗ ಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ಕರಾವಳಿ ಜನರು ಸಂಕಷ್ಟ ಅನುಭವಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಕೇಳಿಕೊಂಡರು.

    ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮತ್ತು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಕ್ಯಾ. ಬ್ರಜೇಶ್ ಚೌಟ, ಪ್ರಣಯ್ ಕುಮಾರ್ ಶೆಟ್ಟಿ, ಕೃಷ್ಣಪ್ರಸಾದ ಅಡಂತ್ಯಾಯ, ಬಿ.ಎಸ್. ಸುರೇಶ್ ಶೆಟ್ಟಿ, ಸುರೇಶ ಬಟವಾಡಿ, ಪ್ರಿಯದರ್ಶಿನಿ ಬೆಸ್ಕೂರು, ರೋಹಿತ್ ಕುಮಾರ್ ಶೆಟ್ಟಿ, ಶರತ್‌ಕುಮಾರ ಶೆಟ್ಟಿ ವಿವಿಧ ಮೋರ್ಚಾದ ಪದಾಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿದರು.

    ಸಭೆಯ ಬಳಿಕ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಸಂಸದ ತೇಜಸ್ವಿ ಸೂರ್ಯ, ನಟಿ ಶೃತಿ ಹಾಗೂ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಜೊತೆಯಾಗಿ ನಾಮಪತ್ರ ಸಲ್ಲಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    16 − thirteen =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.