Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಡಿಯುವ ನೀರಿನ ಹೆಸರಿನಲ್ಲಿ ವಾರಾಹಿ ನೀರಾವರಿ ಯೋಜನೆ ಮುಗಿಸುವ ಹುನ್ನಾರ: ಕೆ. ಪ್ರತಾಪ್ಚಂದ್ರ ಶೆಟ್ಟಿ ಆರೋಪ
    ಊರ್ಮನೆ ಸಮಾಚಾರ

    ಕುಡಿಯುವ ನೀರಿನ ಹೆಸರಿನಲ್ಲಿ ವಾರಾಹಿ ನೀರಾವರಿ ಯೋಜನೆ ಮುಗಿಸುವ ಹುನ್ನಾರ: ಕೆ. ಪ್ರತಾಪ್ಚಂದ್ರ ಶೆಟ್ಟಿ ಆರೋಪ

    Updated:18/06/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜೂ.17:
    ವಾರಾಹಿ ನೀರಾವರಿ ಯೋಜನೆಯನ್ನು ಆರಂಭಿಸಿರುವುದೇ ಕುಂದಾಪುರ ವಿಧಾನಸಭಾ ಕ್ಷೇತ್ರ, ಬೈಂದೂರು ಹಾಗೂ ಹಿಂದಿನ ಬಹ್ಮಾವರ ಕ್ಷೇತ್ರಗಳ ಕೃಷಿ ಭೂಮಿಗೆ ನೀರಾವರಿ ಒದಗಿಸುವುದಕ್ಕಾಗಿ. ಆದರೆ ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ಬೇರೆ ಕಡೆಗಳಿಗೆ ವಾರಾಹಿ ಯೋಜನೆಯ ನೀರನ್ನೇ ಕೊಂಡೊಯ್ಯಲಾಗುತ್ತಿದೆ. ಕುಡಿಯುವ ನೀರು ಒದಗಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಇದರ ಹೆಸರಿನಲ್ಲಿ ವಾರಾಹಿ ಅಚ್ಚುಕಟ್ಟು ಪ್ರದೇಶದವರನ್ನು ನಿರ್ಲಕ್ಷಿಸಿದ್ದಲ್ಲದೇ, ವಾರಾಹಿ ನೀರಾವರಿ ಯೋಜನೆಯನ್ನೇ ಮುಗಿಸುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ವಿಧಾನಪರಿಷತ್ ಮಾಜಿ ಸಭಾಪತಿ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪ್ಚಂದ್ರ ಶೆಟ್ಟಿ ಆರೋಪಿಸಿದರು.

    Click Here

    Call us

    Click Here

    ಅವರು ಇಲ್ಲಿನ ಆರ್.ಎನ್. ಶೆಟ್ಟಿ ಮಿನಿ ಹಾಲ್ನಲ್ಲಿ ಶನಿವಾರ ನಡೆದ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಉಡುಪಿ, ಕಾರ್ಕಳ ಹಾಗೂ ಶಿವಪುರಕ್ಕೆ ಕುಡಿಯುವ ನೀರು ಪೂರೈಸುವ ಬಗ್ಗೆ ನಮ್ಮ ಅಭ್ಯಂತರವಿಲ್ಲ.

    ಆದರೆ ವಾರಾಹಿ ಅಚ್ಚುಕಟ್ಟು ಪ್ರದೇಶದವರನ್ನು ನಿರ್ಲಕ್ಷಿಸುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಮೂಲ ಯೋಜನೆಯಲ್ಲಿದ್ದ ಮೂರನೇ ಒಂದಂಶವೂ ಇಲ್ಲಿ ಪೂರ್ಣಗೊಳ್ಳದೇ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯ ಮಾಡಲಾಗಿದೆ. ಕುಂದಾಪುರದಿಂದ ಉತ್ತರಕ್ಕೆ ಸ್ವರ್ಣ, ಮಡಿಸಾಲು, ಉದ್ಯಾವರ ಹೊಳೆ, ಸೀತಾ ನದಿ ಸಹಿತ 7 ಹೊಳೆಗಳಿವೆ. ಅಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಿ, ಉಡುಪಿ, ಕಾರ್ಕಳಕ್ಕೆ ಅಗತ್ಯವಿರುವ ನೀರು ಪೂರೈಸುವ ಸುಲಭ ಅವಕಾಶವಿದ್ದರೂ, ವಾರಾಹಿಯದ್ದೇ ನೀರು ಕೊಂಡೊಯ್ಯಬೇಕು ಎನ್ನುವ ನಿರ್ಧಾರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದರು.

    ಕಂದಾಯ ಇಲಾಖೆಯಲ್ಲಿ ದೊಡ್ಡ ಕೊಟ್ಟವರಿಗೆ ಮಾತ್ರ ಕೆಲಸ ಎಂಬ ಸ್ಥಿತಿ ಇದೆ. ಎಲ್ಲಾ ದಾಖಲೆಗಳೂ ಸರಿ ಇದ್ದರೂ ರೈತರು, ಜನಸಾಮಾನ್ಯರ ಕೆಲಸ ಮಾಡಿಕೊಡಲು ಕೆಲವು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಅಕ್ರಮ ಸಕ್ರಮ, 94ಸಿ, ಡೀಮ್ಡ್ ಫಾರೆಸ್ಟ್ ಸಮಸ್ಯೆಗಳು ಹಾಗೆಯೇ ಇದೆ. ಇಲ್ಲಿರುವಷ್ಟು ಸಮಸ್ಯೆ ಬೇರೆ ಯಾವ ಇಲಾಖೆಯಲ್ಲಿಯೂ ಇಲ್ಲ. ಉಡುಪಿ ಜಿಲ್ಲಾ ರೈತ ಸಂಘವು ಸಮಸ್ಯೆ ಹೇಳಿ ಬರುವ ಸಾಮಾನ್ಯರ ನೆರವಿಗೆ ನಿಲ್ಲಲಿದೆ ಎಂದರು.

    ವಾರಾಹಿ ಅವ್ಯವಹಾರದ ಬಗ್ಗೆ ಈಗಾಗಲೇ ಲೋಕಾಯುಕ್ತ ತನಿಖೆ ನಡೆಸಿದ ವರದಿಯು ಈ ಹಿಂದಿನ ಕಾಂಗ್ರೆಸ್, ಸಮ್ಮಿಶ್ರ, ಬಿಜೆಪಿ ಸರಕಾರದ ಮುಂದೆ ಬಂದಿದೆ. ಈಗ ನಾಲ್ಕನೇ ಸರಕಾರದ ಮುಂದಿದೆ. ಆದರೆ ಅದನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳಬೇಕು ಎಂದವರು ಆಗ್ರಹಿಸಿದರು.

    Click here

    Click here

    Click here

    Click Here

    Call us

    Call us

    ನಿವೃತ್ತ ಮುಖ್ಯ ಶಿಕ್ಷಕ ಸುರೇಶ್ ಶೆಟ್ಟಿ ಮಾತನಾಡಿ, ಬೆಳ್ಳಿ, ಆರ್ಡಿ, ಅಲ್ಪಾಡಿ ಭಾಗದಲ್ಲಿ 6-7 ಕಿಂಡಿ ಅಣೆಕಟ್ಟುಗಳಾದರೂ ಫೆಬ್ರವರಿಯಿಂದಲೇ ಅದರಲ್ಲಿ ನೀರಿಲ್ಲದ ಪರಿಸ್ಥಿತಿಯಿದೆ ಎಂದರು.

    ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮಾತನಾಡಿ, ಗುಲ್ವಾಡಿ ಕಿಂಡಿ ಅಣೆಕಟ್ಟು, ಸೌಕೂರು ಏತ ನೀರಾವರಿ ಯೋಜನೆಯಿಂದ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಮುಖ್ಯವಾಗಿ ಗುಲ್ತಾಡಿ ಗ್ರಾಮವನ್ನೇ ನಿರ್ಲಕ್ಷಿಸಲಾಗಿದೆ. ಇಲ್ಲಿನ 50-60 ಎಕರೆ ಕೃಷಿಗೆ ನೀರೇ ಇಲ್ಲವಾಗಿದೆ ಎಂದರು.

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ ಶೆಟ್ಟಿ ಮಾತನಾಡಿ ಸಣ್ಣ ನೀರಾವರಿ ಇಲಾಖೆ ಎಲ್ಲೆಂದರಲ್ಲಿ ಹೊಳೆಗಳಿಗೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿದೆ. ಅದರ ಸರಿಯಾದ ನಿರ್ವಹಣೆ ಇಲ್ಲದೇ ಬೇಸಿಗೆಯಲ್ಲಿ ನೀರು ಬರಿದಾಗುತ್ತದೆ. ಬೇರೆ ಸಂದರ್ಭದಲ್ಲಿ ಉಪ್ಪುನೀರು ಒಳಕ್ಕೆ ನುಗ್ಗುತ್ತಿದೆ. ಸಮರ್ಪಕ ನಿರ್ವಹಣೆ ಇಲ್ಲದೇ ರೈತರಿಗೆ ಉಪಕಾರ ಮಾಡಿದ್ದಕ್ಕಿಂತ ಉಪದ್ರವ ಮಾಡಿದ್ದೇ ಹೆಚ್ಚು. ಈ ಬಗ್ಗೆಯೂ ರೈತ ಸಂಘ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

    ಡಾ| ಅತುಲ್ ಕುಮಾರ್ ಶೆಟ್ಟಿ ಮಾತನಾಡಿ ಮುಂದಿನ ದಿನಗಳಲ್ಲಿ ವಾರಾಹಿ ಅಥವಾ ಇನ್ನು ಯಾವುದೇ ಯೋಜನೆಯಿಂದ ಹೊಸೂರು, ಇಡೂರು, ಕೆರಾಡಿ, ಬೆಳ್ಳಾಲ ಗ್ರಾಮಗಳಿಗೂ ಅನುಕೂಲವಾಗಬೇಕು ಎಂದರು.

    ಭಾರತೀಯ ಕಿಸಾನ್ ಸಂಘದ ಕುಂದಾಪುರ ವಲಯ ಅಧ್ಯಕ್ಷ ಸೀತಾರಾಮ ಗಾಣಿಗ ಹಾಲಾಡಿ ಮಾತನಾಡಿ, ಸೌಕೂರು ಏತ ನೀರಾವರಿ ಕೇವಲ 30% ಜನರಿಗೆ ಮಾತ್ರ ಅನುಕೂಲವಾಗುತ್ತಿದೆ. ಅಧಿಕಾರಿಗಳ ಮನಸ್ಸಿಗೆ ಬಂದಂತೆ ಯೋಜನೆ ಮುಂದುವರಿಸುತ್ತಿದ್ದಾರೆ. ಇಲಾಖೆಗೆ ಮನವರಿಕೆ ಮಾಡಿದರೂ ಸ್ಪಂದನೆ ಇಲ್ಲ ಎಂದರು.

    ಕೆದೂರು ಸದಾನಂದ ಶೆಟ್ಟಿ ಮಾತನಾಡಿ, ವಾರಾಹಿ ಯೋಜನೆ ರೈತರಿಗೆ ನೆರವಾಗುವುದಕ್ಕಿಂತ ಹೆಚ್ಚಾಗಿ ಗುತ್ತಿಗೆದಾರ ಸ್ನೇಹಿಯಾಗಿದೆ. ಎಲ್ಲಿ ಏನು ಮಾಡಬೇಕು ಎಂಬುದನ್ನು ರೈತರು, ಅಧಿಕಾರಿಗಳು ಹೇಳುವ ಬದಲಾಗಿ ಗುತ್ತಿಗೆದಾರರಿಗೆ ಮನಬಂದಂತೆ ಯೋಜನೆ ಮುಂದುವರಿಯುತ್ತಿದೆ. ಆದರೆ ಲೋಪವೆಸುವ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ಗೆ ಸೇರಿಸುವ ಕೆಲಸ ಮಾತ್ರ ಯಾರೂ ಮಾಡಿಲ್ಲ ಎಂದರು.

    ಸತೀಶ್ ಅಡಿಗ ವಾರಾಹಿ ಉಪ ಕಾಲುವೆ ಸಮಸ್ಯೆಯಿಂದ ಮಾತನಾಡಿ, ಯಡಾಡಿ ಮತ್ಯಾಡಿ ಗ್ರಾಮದ ಸುಮಾರು 20 ಮನೆಗಳು ತೊಂದರೆ ಅನುಭವಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು.

    ಉಡುಪಿ ಜಿಲ್ಲಾ ರೈತ ಸಂಘದ ಪ್ರಮುಖರಾದ ಸತೀಶ್ ಕಿಣಿ ಬೆಳ್ವೆ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮಲ್ಯಾಡಿ ಶಿವರಾಮ ಶೆಟ್ಟಿ, ಕೆದೂರು ಕರುಣಾಕರ ಶೆಟ್ಟಿ, ಸುಧಾಕರ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಬಾಬು ಹೆಗ್ಡೆ, ಕೃಷ್ಣದೇವ ಕಾರಂತ್ ಕೋಣಿ ಉದಯ ಕುಮಾರ್ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ಪ್ರದೀಪ್ ಬಲ್ಲಾಳ್, ವಿಕಾಸ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    11 + nineteen =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.