ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲೆಯ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ್ ಅವರು ಅತ್ಯುತ್ತಮ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೂ ಪಾತ್ರರಾಗಿದ್ದರು. ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ. 2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು.ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ ಅವರು ಯಡ್ತಾಡಿ ಸೈಬ್ರಕಟ್ಟೆಯಲ್ಲಿ ನೆಲೆಸಿದ್ದಾರೆ.










