Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು: ನವರಾತ್ರಿ ಉತ್ಸವದ ಚಂಡಿಕಾಯಾಗ ಹಾಗೂ ರಥೋತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಕೊಲ್ಲೂರು: ನವರಾತ್ರಿ ಉತ್ಸವದ ಚಂಡಿಕಾಯಾಗ ಹಾಗೂ ರಥೋತ್ಸವ ಸಂಪನ್ನ

    Updated:13/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ತಾಲೂಕಿನ ಪ್ರಮುಖ ಧಾರ್ಮಿಕ ಸ್ಥಳವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಚಂಡಿಕಾಯಾಗ ಹಾಗೂ ನವರಾತ್ರಿ ರಥೋತ್ಸವ ದೇಗುಲದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು.

    Click Here

    Call us

    Click Here

    ದೇಗುಲದ ಸರದಿ ಅರ್ಚಕ ಕೆ. ಮಂಜುನಾಥ ಅಡಿಗ ಅವರ ನೇತೃತ್ವದಲ್ಲಿ ನಿತ್ಯಾನಂದ ಅಡಿಗ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಅರ್ಚಕರಾದ ಡಾ| ಕೆ.ಎನ್‌. ನರಸಿಂಹ ಅಡಿಗ, ಶ್ರೀಧರ ಅಡಿಗ, ಕೆ.ಎನ್‌. ಗೋವಿಂದ ಅಡಿಗ ಅವರು ಚಂಡಿಕಾ ಯಾಗದಲ್ಲಿ ಪಾಲ್ಗೊಂಡರು.ಚಿನ್ನದ ರಥದಲ್ಲಿ ಉತ್ಸವ ಮೂರ್ತಿ ಕುಳ್ಳಿರಿಸಿ ದೇಗುಲದ ಒಳಪೌಳಿಯಲ್ಲಿ ರಥ ಒಂದು ಸುತ್ತು ಬರುತ್ತಿರುವಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತರು ಭಕ್ತಿ ಪರವಶರಾಗಿ ಮೂಕಾಂಬಿಕೆಯ ದೇವಿ ಸ್ತ್ರೋತ್ರ ಜಪಿಸಿದರು. ಈ ಸಂದರ್ಭ ಅರ್ಚಕರು ಎಸೆಯುವ ನಾಣ್ಯ ಹಿಡಿಯಲು ಭಕ್ತರು ನಡೆಸುತ್ತಿದ್ದ ಪೈಪೋಟಿ ನಡೆಸುತ್ತಿದ್ದರು. ದೇಗುಲದಲ್ಲಿ ಬಿಗು ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

    ದೇವಸ್ಥಾನದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ ಹಾಗೂ ಕಾರ್ಯನಿರ್ವಹಣಾಧಿಕಾರಿ ವಿ. ಪ್ರಸನ್ನ ಸಂಕಲ್ಪದಲ್ಲಿ ಪಾಲ್ಗೊಂಡರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸವಿತಾ ದೇವಾಡಿಗ, ಕಲ್ಪನಾ ಭಾಸ್ಕರ್‌, ಶ್ರೀನಿವಾಸ ಕಲ್ಲೂರಾಯ, ರಾಜೇಶ್‌ ಕೆ.ಎನ್‌., ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಅಣ್ಣಪ್ಪ ಖಾರ್ವಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಅಡಿಗ, ತಾ. ಪಂ. ಸದಸ್ಯ ರಮೇಶ ಗಾಣಿಗ ಕೊಲ್ಲೂರು ಕಂದಾಯ ಹಾಗೂ ಪೊಲೀಸ್‌ ಇಲಾಖೆ ವರಿಷ್ಠರು ಉಪಸ್ಥಿತರಿದ್ದರು.

    Shri Mookambika temple Kolluru
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    ten − 9 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.