Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಸಂಘಟಿತ ಕಾರ್ಮಿಕರು ತಪ್ಪದೇ ಇ-ಶ್ರಮ್‌ನಲ್ಲಿ ಹೆಸರು ನೊಂದಾಯಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
    ಉಡುಪಿ ಜಿಲ್ಲೆ

    ಅಸಂಘಟಿತ ಕಾರ್ಮಿಕರು ತಪ್ಪದೇ ಇ-ಶ್ರಮ್‌ನಲ್ಲಿ ಹೆಸರು ನೊಂದಾಯಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಸೆ.1:
    ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳೂ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರು ಭವಿಷ್ಕಕ್ಕೆ ಪಡೆಯಲು ತಪ್ಪದೇ ಇ-ಶ್ರಮ್ನಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರಕಾರ ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವರ್ಗಗಳ ಕಾರ್ಮಿಕರುಗಳಿಗೆ ಸಂಬAಧಿಸಿದ ಸಮಸ್ಯೆಗಳ ನಿವಾರಣೆ, ಕಾರ್ಮಿಕರಿಗೆ ವಿಶೇಷ ನೀತಿಗಳು, ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಮಗ್ರ ದತ್ತಾಂಶವಿದ್ದಾಗ ಮಾತ್ರ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಸಾಧ್ಯ. ಈ ಹಿನ್ನೆಲೆ ಪ್ರತಿಯೊಬ್ಬರೂ ಇ-ಶ್ರಮ್ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಇವರೆಗೆ 1,85,791 ಜನ ನೋಂದಾಯಿಸಿದ್ದಾರೆ. ಉಳಿದವರು ಸಹ ನೋಂದಾಯಿಸಿಕೊಳ್ಳಬೇಕು. ಇ-ಶ್ರಮ್ ನಲ್ಲಿ ನೋಂದಾಯಿಸಲು ಕಾರ್ಮಿಕರು ಆಧಾರ್ ಕಾರ್ಡ್ನೊಂದಿಗೆ ಬಂದು ತಮ್ಮ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯತೆಯ ವಿಧü, ಕುಟುಂಬದ ವಿವರ, ಬ್ಯಾಂಕ್ ಖಾತೆಯ ವಿವರ ಇತ್ಯಾದಿಗಳನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ತಿತಿತಿ.eshಡಿಚಿm.gov.iಟಿ ನಲ್ಲಿಯೂ ನೋಂದಾಯಿಸಲು ಅವಕಾಶವಿದೆ ಎಂದರು.

    ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟಿçÃಯ ಪಿಂಚಣಿ ಯೋಜನೆಯಡಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, 18-40 ವರ್ಷದೊಳಗಿನ ಅಂಗಡಿ ಮಾಲಿಕರು, ಚಿಲ್ಲರೆ ವ್ಯಾಪಾರಿಗಳು, ಅಕ್ಕಿ ಎಣ್ಣೆ ಗಿರಣಿ ಮಾಲೀಕರು, ವರ್ಕ್ ಶಾಪ್ ಮಾಲೀಕರು, ಕಮಿಷನ್ ಎಜೆಂಟ್ ಗಳು, ರಿಯಲ್ ಎಸ್ಟೇಟ್ ಬ್ರೋಕರ್ಗಳು, ಸಣ್ಣ ಹೋಟೆಲ್ ರೆಸ್ಟೋರೆಂಟ್ಗಳ ಮಾಲೀಕರು ಸೇರಿದಂತೆ ಇತರೆ ಸಣ್ಣ ವ್ಯಾಪಾರಗಳಲ್ಲಿ ತೊಡಗಿಕೊಂಡ ಸ್ವಯಂ ಉದ್ಯೋಗಿಗಳು ಇದರ ಲಾಭ ಪಡೆದುಕೊಳ್ಳಬಹುದಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಸಮಾಜದಲ್ಲಿನ ಅನಿಷ್ಠ ಪದ್ಧತಿಯಾದ ಬಾಲ ಕಾರ್ಮಿಕ ಪದ್ಧತಿಯನ್ನು ಜಿಲ್ಲೆಯಲ್ಲಿ ಹೋಗಲಾಡಿಸಲು ಪ್ರತಿಯೊಬ್ಬರೂ ಸಹಕರಿಸಬೇಕು. ಬಾಲ ಕಾರ್ಮಿಕರುಗಳನ್ನು ನೇಮಿಸಿಕೊಂಡಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

    ಮಲ್ಪೆ ಹಾಗೂ ಗಂಗೊಳ್ಳಿಯ ಬಂದರುಗಳಲ್ಲಿ ಮಕ್ಕಳು ಮೀನನ್ನು ಆಯುವ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ ಎಂಬ ದೂರುಗಳು ಬರುತ್ತಿವೆ. ಈ ಬಗ್ಗೆ ಆಗಿದ್ದಾಂಗೆ ಅಧಿಕಾರಿಗಳು ಅನಿರೀಕ್ಷಿತ ದಾಳಿಗಳನ್ನು ಮಾಡಬೇಕು ಎಂದ ಅವರು, ಬಾಲಕಾರ್ಮಿಕರು ಒಂದೊಮ್ಮೆ ಸಿಕ್ಕಿದ್ದಲ್ಲಿ ಅವರುಗಳಿಗೆ ಪುನರ್ವಸತಿ ಕಲ್ಪಿಸುವುದರ ಜೊತೆಗೆ ಶಿಕ್ಷಣದ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಸೂಚನೆ ನೀಡಿದರು.

    ಸರಕಾರ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವನ್ನು ಒದಗಿಸುವ ಆತ್ಮನಿರ್ಭರ ಯೋಜನೆಯಡಿ 10,000 ರೂ. ಸಾಲವನ್ನು ಪ್ರಥಮ ಬಾರಿ ನೀಡಿದ್ದು, ಅವುಗಳನ್ನು ಹಿಂದಿರುಗಿಸಿದವರಿಗೆ 20,000 ರೂ. ವರೆಗೆ ಸಾಲವನ್ನು ನೀಡಲಾಗುತ್ತಿತ್ತು. ಇದು ಮುಂದುವರೆದು 20,000 ರೂ. ಸಾಲವನ್ನು ತೀರಿಸಿದವರಿಗೆ 50,000 ರೂ. ವರೆಗೆ ಸಾಲವನ್ನು ವಿತರಿಸಲಾಗುವುದು. ಇದರ ಲಾಭವನ್ನು ಪಡೆಯಬೇಕೆಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಇ-ಶ್ರಮ್ನಲ್ಲಿ ನೋಂದಾಯಿಸಲು ಇತರೆ ಇಲಾಖೆಗಳ ಸಹಯೋಗದೊಂದಿಗೆ ನೋಂದಣಿ ಶಿಬಿರಗಳನ್ನು ಏರ್ಪಡಿಸಿ, ಹೆಚ್ಚಿನ ನೋಂದಣಿ ಮಾಡಬೇಕೆಂದು ಸಲಹೆ ನೀಡಿದರು.

    ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್ , ನಗರಸಭೆ ಪೌರಾಯುಕ್ತ ರಾಯಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ ವರ್ಗದ ಕಾರ್ಮಿಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    six + 9 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.