Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವಿಶ್ವಕರ್ಮ ಜಯಂತೋತ್ಸವದಲ್ಲಿ ಸಮಸ್ತ ವಿಶ್ವಕರ್ಮ ಬಂಧುಗಳು ಪಾಲ್ಗೊಳ್ಳೋಣ: ನೇರಂಬಳ್ಳಿ ರಮೇಶ್ ಆಚಾರ್
    ಊರ್ಮನೆ ಸಮಾಚಾರ

    ಶ್ರೀ ವಿಶ್ವಕರ್ಮ ಜಯಂತೋತ್ಸವದಲ್ಲಿ ಸಮಸ್ತ ವಿಶ್ವಕರ್ಮ ಬಂಧುಗಳು ಪಾಲ್ಗೊಳ್ಳೋಣ: ನೇರಂಬಳ್ಳಿ ರಮೇಶ್ ಆಚಾರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಸೆ.13:
    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ವಿಶ್ವಕರ್ಮ ಜಯಂತೋತ್ಸವ ಯೋಜನೆಗೆ ಸೆ. 17ರಂದು ಅವರಿಂದ ಚಾಲನೆ ದೊರೆಯಲಿದ್ದು, ಅದೇ ಸಮಯಕ್ಕೆ ದೇಶದಾದ್ಯಂತ ಸುಮಾರು 70 ಪ್ರಮುಖ ಸ್ಥಳದಲ್ಲಿ, ಕೇಂದ್ರದ 70 ಸಚಿವರು ಚಾಲನೆ ನೀಡಲಿದ್ದಾರೆ. ಇದು ಸಮಸ್ತ ವಿಶ್ವಕರ್ಮ ಸಮುದಾಯದವರಿಗೆ ನೀಡಿದ ಗೌರವ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾ ಅಧ್ಯಕ್ಷ ನೇರಂಬಳ್ಳಿ ರಮೇಶ್ ಆಚಾರ್ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ಧೇಶಿಸಿ ಮಾತನಾಡಿ ವಿಶ್ವಕರ್ಮ ಜಯಂತೋತ್ಸವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದಿನಲ್ಲಿ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಕ್ನೋದಲ್ಲಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಮಾನ್ಯ ನಿತಿನ್ ಗಡ್ಕರಿಯವರು ನಾಗಪುರದಲ್ಲಿ. ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರು ತಿರುವನಂತಪುರದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

    ರಾಜ್ಯಾದ್ಯಂತ ವಿಶ್ವಕರ್ಮ ಜಯಂತೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲೆ, ತಾಲೂಕು ಹಾಗೂ ಗ್ರಾಮದಲ್ಲಿ ಕೂಡ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಸಮಸ್ತ ವಿಶ್ವಕರ್ಮ ಬಂಧುಗಳ ಜಗದೊಡೆಯ ಶ್ರೀ ವಿಶ್ವಕರ್ಮ ದೇವರ ಫೋಟೋವನ್ನು ಇರಿಸಿ ಪುಷ್ಪಾರ್ಚನೆಗೈದು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಜಯಂತೋತ್ಸವ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಬಂಧುಗಳು ಪಾಲ್ಗೊಂಡು, ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಬೇಕಾಗಿದೆ ಎಂದರು.

    ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಇದರ ಗೌರವಾಧ್ಯಕ್ಷ ಉದ್ದಾಲಗುಡ್ಡೆ ಗಂಗಾಧರ ಆಚಾರ್ಯ, ಬೈಂದೂರು ಶ್ರೀ ವಿಶ್ವಕರ್ಮ ಸಂಘದ ಅಧ್ಯಕ್ಷ ನಾರಾಯಣ ಆಚಾರ್ಯ ಬೈಂದೂರು, ರಮೇಶ್ ಆಚಾರ್ಯ ಬಂಡಿಮಠ ಬಾರಕೂರು, ನಾಗಪ್ಪಯ್ಯ ಆಚಾರ್ಯ ನಡೂರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    20 + four =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.