Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘ ಹೊಸೂರು ಶಾಖೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ
    ಊರ್ಮನೆ ಸಮಾಚಾರ

    ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘ ಹೊಸೂರು ಶಾಖೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಹೊಸೂರು ಶಾಖೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಶಿಲಾನ್ಯಾಸ ನೆರವೇರಿಸಿ, ಸಹಕಾರ ಸಂಘಗಳು ಗ್ರಾಮಾಂತರ ಪ್ರದೇಶದ ಜನರ ಒಡನಾಡಿಯಂತೆ ಕಾರ್ಯನಿರ್ವಹಿಸುತ್ತಿದೆ. ಆ ಹಿನ್ನೆಲೆ ಹೊಸೂರಿನಲ್ಲಿ ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘವು ಜನರ ಅವಶ್ಯಕತೆಗಳನ್ನು ಪೂರೈಸುವ ಮೂಲಕ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

    Click Here

    Call us

    Click Here

    ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್,ಮಂಜಯ್ಯ ಶೆಟ್ಟಿ ಸಬ್ಲಾಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, ನಮ್ಮ ಸಂಘವು ಕಾರ್ಯವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಶಾಖೆ ಆರಂಭಿಸಲಾಗಿದೆ. ಇಡೂರು ಶಾಖೆಗೆ ಸ್ವಂತ ಸ್ಥಳದಲ್ಲಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಕೆರಾಡಿಯಲ್ಲಿ ಸ್ವಂತ ಕಟ್ಟಡ ಹೊಂದಿದೆ. ಬೆಳ್ಳಾಲದಲ್ಲಿ ಶಾಖಾ ಕಟ್ಟಡಕ್ಕೆ ಸ್ಥಳ ಗುರುತಿಸಲಾಗಿದೆ. ಹೊಸೂರು ಶಾಖೆಯ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು ಮಾರ್ಚ್ ಒಳಗೆ ಕಟ್ಟಡ ನಿರ್ಮಾಣವಾಗಲಿದೆ ಎಂದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ, ಸ್ಥಳದಾನಿ ಎಚ್.ಭೋಜರಾಜ ಶೆಟ್ಟಿ, ರಮಾನಂದ ಮಧ್ಯಸ್ಥ, ಸಂಘದ ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ ಹೊಸೂರು, ನಿರ್ದೇಶಕರಾದ ಐ.ಗೋವರ್ದನ್ ಶೆಟ್ಟಿ ಇಡೂರು-ಕುಂಜ್ಞಾಡಿ, ಕೆ.ಭುಜಂಗ ಶೆಟ್ಟಿ ಕೆರಾಡಿ, ಸಂಜೀವ ಪೂಜಾರಿ ವಂಡ್ಸೆ, ಎ.ಜಯರಾಮ ಶೆಟ್ಟಿ ವಂಡ್ಸೆ, ಶೀನಪ್ಪ ಶೆಟ್ಟಿ ಹೊಸೂರು, ರಾಮಚಂದ್ರ ಮಂಜ ಚಿತ್ತೂರು, ಕೃಷ್ಣಯ್ಯ ಆಚಾರ್ಯ ಚಿತ್ತೂರು, ಶ್ರೀಮತಿ ನಾಗರತ್ನ ಶೆಟ್ಟಿ ಹೊಸೂರು, ಶ್ರೀಮತಿ ಕಸ್ತೂರಿ ಎಸ್.ಶೆಟ್ಟಿ ಚಿತ್ತೂರು, ಬಿ.ರಾಮ ಹೊಸೂರು, ಸುನೀಲ ನಾಯ್ಕ ಕೆರಾಡಿ, ಪದನಿಮಿತ್ತ ಸದಸ್ಯರಾದ ಶೇಖರ ಶೆಟ್ಟಿ ಬೆಳ್ಳಾಲ, ಶಿವಪ್ಪ ಶೆಟ್ಟಿ ಇಡೂರು ಉಪಸ್ಥಿತರಿದ್ದರು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಜಿ. ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    nineteen − 17 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.