Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಪತ್ರಿಕೆಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು ಹಾಗೂ ನೇರ ನಿಷ್ಠುರವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

    Click Here

    Call us

    Click Here

    ಅವರು ಕೋಟ ಸಹಕಾರಿ ವ್ಯವಸಾಯಿಕ ಸಂಘದ ಬಿ.ಸಿ.ಹೊಳ್ಳ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಡಿ.17ರಂದು ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ಪ್ರದಾನಿಸಿ ಬಳಿಕ ಮಾತನಾಡಿದರು.

    ಪತ್ರಕರ್ತನಾದವನಿಗೆ ಎಲ್ಲ ವಿಚಾರಗಳನ್ನು ತಿಳಿದುಕೊಳ್ಳುವ ಸದಭಿರುಚಿ ಇರಬೇಕು. ಆಗ ಮಾತ್ರ ಪರಿಪೂರ್ಣ ಕಾರ್ಯನಿವರ್ಹಣೆ ಸಾಧ್ಯ ಎಂದರು.

    ಪತ್ರಕರ್ತ ಜೋಗಿ ಅಭಿನಂದನಾ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿಶ್ವೇಶ್ವರ ಭಟ್ ಅವರ ಕೊಡುಗೆ ಅಪಾರವಾದದ್ದು. ಈ ಕ್ಷೇತ್ರಕ್ಕೆ ಹೊಸತನ ಹಾಗೂ ನವ ಆಯಾಮ ನೀಡಿದ ಸಾಧನೆ ಇವರಿಗೆ ಸಲ್ಲಬೇಕು ಎಂದರು.

    ವಡ್ಡರ್ಸೆ ಸಾಧನೆ ಗುರುತಿಸಬೇಕು:
    ಪತ್ರಕರ್ತ ವಿಶ್ವೇಶ್ವರ ಭಟ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಡ್ಡರ್ಸೆ ರಘುರಾಮ ಶೆಟ್ಟರ ಕೊಡುಗೆ ಅದ್ಬುತವಾದದ್ದು. ಬ್ರಹ್ಮಾವರ ಪತ್ರಕರ್ತ ಸಂಘ ಅವರ ಹೆಸರಲ್ಲಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ನಮ್ಮ ಸರಕಾರ ವಡ್ಡರ್ಸೆ ಹೆಸರಲ್ಲಿ ಟಿ.ಎಸ್.ಆರ್. ಮಾದರಿಯ ಪ್ರಶಸ್ತಿ ನೀಡಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಿದರು.

    ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು.

    ಇದೇ ಸಂದರ್ಭ ಹಿರಿಯ ಪತ್ರಕರ್ತ ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಕೋಟ ಶ್ರೀನಿವಾಸ ಪೂಜಾರಿ, ಕೋಟ ಸಿ.ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವ. ಸಮಿತಿಯ ಅಧ್ಯಕ್ಷ ಮಹಮ್ಮದ್ ಶರೀಫ್, ಬೈಂದೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಂದುಕಾ ಎ.ಎಸ್, ಹೆಬ್ರಿಯ ಸುಕುಮಾರ್ ಮುನಿಯಾಲು, ಕುಂದಾಪುರದ ನಾಗರಾಜ್ ರಾಯಪ್ಪನಮಠ ಮತ್ತಿತರರು ಇದ್ದರು.

    ಕಾರ್ಯಕ್ರಮದಲ್ಲಿಇತ್ತೀಚೆಗೆ ನಿಧನರಾದ ಪತ್ರಕರ್ತರಾದ ಶೇಖರ್ ಅಜೆಕಾರು ಮತ್ತು ಶಶಿಧರ ಹೆಮ್ಮಣ್ಣ ಅವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಶೇಖರ ಅಜೆಕಾರು ಕುಟುಂಬದವರಿಗೆ ಆರ್ಥಿಕ ಧನಸಹಾಯ ನೀಡಲಾಯಿತು. ಶಿವಾನಂದ ತಗಡೂರು ಮತ್ತು ಜೋಗಿ ಅವರನ್ನು ಗೌರವಿಸಲಾಯಿತು.

    ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ಸಮಾರಂಭದ ಸಂಚಾಲಕ ವಸಂತ ಗಿಳಿಯಾರು ಪ್ರಾಸ್ತಾವಿಕವಾಗಿಮಾತನಾಡಿದರು. ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಹರೀಶ ಕಿರಣ್ ಕುಮಾರ್ ತುಂಗ ವಂದಿಸಿದರು.

    ಸುರೇಶ್ ಕಾರ್ಕಡ ಮತ್ತು ತನುಷ ಅವರಿಂದ ಗಾನ ವೈಭವ ಜರಗಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.