Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಪುತ್ತಿಗೆ ಪರ್ಯಾಯೋತ್ಸವ: ಹೊರೆ ಕಾಣಿಕೆ ಸಮರ್ಪಣೆ ಸಭೆ
    ಊರ್ಮನೆ ಸಮಾಚಾರ

    ಶ್ರೀ ಪುತ್ತಿಗೆ ಪರ್ಯಾಯೋತ್ಸವ: ಹೊರೆ ಕಾಣಿಕೆ ಸಮರ್ಪಣೆ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಉಡುಪಿಯ ಶ್ರೀ ಕೃಷ್ಣ ಪರ್ಯಾಯೋತ್ಸವವನ್ನು ವೈಭವಪೋಷಿತವಾಗಿ ನಡೆಸಲು ನಿರ್ಧರಿಸಲಾಗಿದ್ದು, ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ತಮ್ಮ ಪ್ರಿಯ ಶಿಷ್ಯ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದಂಗಳವರೊಂದಿಗೆ ಜ.18 ರಂದು ಸರ್ವಜ್ಞ ಪೀಠವನ್ನೇರಿ ಶ್ರೀ ಕೃಷ್ಣ ಪೂಜಾ ದೀಕ್ಷೆ ಕೈಗೊಳ್ಳಲಿದ್ದಾರೆ.

    Click Here

    Call us

    Click Here

    ಉಡುಪಿ ಪರ್ಯಾಯೋತ್ಸವಕ್ಕೆ ಪ್ರತಿ ಬಾರಿಯಂತೆ ಈ ಬಾರಿಯೂ ಹೊರೆ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನಾ ಸಭೆ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು.

    ಪರ್ಯಾಯ ಮಹೋತ್ಸವ ಸಮಿತಿ ಪರವಾಗಿ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಗತ ಸಮಿತಿ ಉಪಾಧ್ಯಕ್ಷರಾದ ರವೀಂದ್ರ ಆಚಾರ್ಯ, ಜತೆ ಕಾರ್ಯದರ್ಶಿ ರಘುಪತಿ ರಾವ್ ಉಪಸ್ಥಿತರಿದ್ದು, ಪರ್ಯಾಯ ಮಹೋತ್ಸವಕ್ಕೆ ಆಹ್ವಾನ ನೀಡಿದರು.

    ಹೊರೆ ಕಾಣಿಕೆ ಸಂಚಾಲಕರಾದ ಬೈಕಾಡಿ ಸುಪ್ರಸಾದ ಶೆಟ್ಟಿ ಮಾತನಾಡಿ, ಶ್ರೀ ಪುತ್ತಿಗೆ ಮಠಾಧೀಶರ ಪರ್ಯಾಯೋತ್ಸವದಲ್ಲಿ ಹೊರೆ ಕಾಣಿಕೆ ಅರ್ಪಣೆ ಶ್ರೀ ಕೃಷ್ಣನಿಗೆ ಅರ್ಪಿಸುವ ವಿಶೇಷ ಸೇವೆಯಾಗಿದ್ದು, ಕುಂದಾಪುರ, ಬೈಂದೂರು ತಾಲೂಕಿನಿಂದ ಜನವರಿ ೧೨ ರಂದು ಹೊರೆ ಕಾಣಿಕೆ ಸಮರ್ಪಿಸಲು ನಿರ್ಧರಿಸಲಾಗಿದೆ. ಮೆರವಣಿಗೆಯಲ್ಲಿ ೫೦ಕ್ಕೂ ಹೆಚ್ಚು ವಾಹನಗಳಲ್ಲಿ ಹೊರೆ ಕಾಣಿಕೆ ಸಮರ್ಪಿಸುವ ಉದ್ದೇಶ ಹೊಂದಿದ್ದು, ಎಲ್ಲ ಗ್ರಾಮಗಳಿಂದ ಧಾರ್ಮಿಕ ಕೇಂದ್ರಗಳಿಂದ ಹೊರೆ ಕಾಣಿಕೆ ಸಮರ್ಪಣೆಯಾಗುವಂತೆ ಊರ ಗಣ್ಯರು, ಧಾರ್ಮಿಕ ಕ್ಷೇತ್ರಗಳ ಮುಖ್ಯಸ್ಥರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಸಹಕರಿಸಬೇಕೆಂದು ವಿನಂತಿಸಿದ್ದಾರೆ.

    ಬಸ್ರೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ಯು.ಎಸ್.ಶೆಣೈ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆನಂದ ಪೂಜಾರಿ, ಸುರೇಶ ಶೆಟ್ಟಿ, ರಾಗಿಣಿ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದು, ತಮ್ಮ ಅನಿಸಿಕೆಗಳನ್ನು ತಿಳಿಸಿದರು.

    Click here

    Click here

    Click here

    Click Here

    Call us

    Call us

    ಕುಂದಾಪುರ ಪುರಸಭಾ ವಲಯ ಸಹಿತ ವಿವಿಧ ಕೇಂದ್ರಗಳಲ್ಲಿ ಸಭೆ ನಡೆಸಿ, ಹೊರೆ ಕಾಣಿಕೆ ಸಂಗ್ರಹ ಮಾಹಿತಿ ವಿನಿಮಯ ಮಾಡಿಕೊಳ್ಳಲು ನಿರ್ಧರಿಸಲಾಯಿತು.

    ಶ್ರೀ ವಿನಾಯಕ ದೇವಸ್ಥಾನದ ನಿಕಟಪೂರ್ವ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ವಿಶ್ವಾದ್ಯಂತ ಭಾರತೀಯ ಧಾರ್ಮಿಕ ಆಚರಣೆಯ ಮಹತ್ವವನ್ನು ಸಾರುತ್ತಾ, ಅಮೇರಿಕಾ ಸೇರಿದಂತೆ ಹಲವು ದೇಶಗಳಲ್ಲಿ ದೇವಾಲಯ ನಿರ್ಮಾಣಕ್ಕೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಪುತ್ತಿಗೆ ಮಠಾಧೀಶರು ದೇಶಕ್ಕಾಗಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಶ್ರೀ ಪಾದಂಗಳವರ ಪರ್ಯಾಯೋತ್ಸವ ಅವರ ಭಗವದ್ಗೀತಾ ಅಭಿಯಾನಕ್ಕೆ ಇನ್ನಷ್ಟು ಶಕ್ತಿ ನೀಡಲಿದೆ. ಕುಂದಾಪುರ ತಾಲೂಕಿನ ಭಕ್ತಾಭಿಮಾನಿಗಳು ಪರ್ಯಾಯೋತ್ಸವ ಯಶಸ್ಸಿನಲ್ಲಿ ಪಾಲ್ಗೊಳ್ಳಬೇಕು ಎಂದರು.

    ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಪರ್ಯಾಯ ಅರ್ಚಕರು ಭಾಗವಹಿಸಿದ್ದರು.

    ದೇವಾಲಯದ ವ್ಯವಸ್ಥಾಪಕ ನಟೇಶ ಕಾರಂತ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    3 × 4 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.