Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಂಗಾಲ್‌ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್‌ ಕಾಲೇಜು ವಾಣಿಜ್ಯ ವಿದ್ಯಾರ್ಥಿಗಳಿಂದ ಭತ್ತದ ನಾಟಿ
    ಕ್ಯಾಂಪಸ್ ಕಾರ್ನರ್

    ಬೆಂಗಾಲ್‌ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್‌ ಕಾಲೇಜು ವಾಣಿಜ್ಯ ವಿದ್ಯಾರ್ಥಿಗಳಿಂದ ಭತ್ತದ ನಾಟಿ

    Updated:29/12/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕಾರ್ಕಳ:
    ವಿದ್ಯಾರ್ಥಿಗಳಿಗೆ ಕೃಷಿಯ ಕುರಿತು ಆಸಕ್ತಿ ಬೆಳೆಸುವ ಮತ್ತು ಅನ್ನದಾತನ ಕಷ್ಟವನ್ನು ಅರಿಯುವ ಕಾರ್ಯಕ್ರಮದ ಅಂಗವಾಗಿ ಕ್ರಿಯೇಟಿವ್‌ ಕಾಲೇಜ್‌ ನ ವಾಣಿಜ್ಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ನೆಡುವ ಕಾರ್ಯಕ್ರಮ ಹಿರ್ಗಾನದ ಬೆಂಗಾಲ್‌ ನ ಕೃಷಿ ಭೂಮಿಯಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ನೇಜಿ ನೆಡುವ ವಿಧಾನವನ್ನು ತಿಳಿಸಲಾಯಿತು.

    Click Here

    Call us

    Click Here

    ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡು ಮಾತನಾಡಿದ ಕ್ರಿಯೇಟಿವ್‌ನ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಇಂದಿನ ಕಾಲಘಟ್ಟದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ಅನ್ನವನ್ನು ಗಳಿಸಬೇಕಾದರೆ ಅದರ ಹಿಂದೆ ಅಪಾರ ಪರಿಶ್ರಮವಿದೆ. ನಾವೆಲ್ಲರೂ ರೈತರ ಕಷ್ಟವನ್ನು, ಒಕ್ಕಲುತನದ ಆನಂದವನ್ನು ಪಡೆಯಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್‌ ಅವರು ಮಾತನಾಡುತ್ತಾ ಹಿಂದಿನ ಕೃಷಿ ಜೀವನ ಹಾಗೂ ಇಂದಿನ ಒತ್ತಡದ ಬದುಕಿನಲ್ಲಿ ಕೃಷಿ ಚಟುವಟಿಕೆಗಳೇ ಮನಸ್ಸಿಗೆ ಸಂತೋಷ ನೀಡುತ್ತವೆ. ಆತ್ಮ ಸಂತೋಷಕ್ಕಾಗಿಯಾದರೂ ನಾವು ರೈತಾಪಿ ಕಸುಬನ್ನು ರೂಢಿಸಿಕೊಳ್ಳಬೇಕಾಗಿದೆ ಎಂದು ನುಡಿದರು.

    ತದನಂತರ ವಿದ್ಯಾರ್ಥಿಗಳಿಂದಲೇ ಒಂದು ಎಕರೆಯಷ್ಟು ಕೃಷಿಭೂಮಿಯಲ್ಲಿ ನಾಟಿಕಾರ್ಯ ನಡೆಯಿತು. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಭತ್ತದ ಬೆಳೆ ಬರುವವರೆಗೂ ವಿದ್ಯಾರ್ಥಿಗಳೇ ಅದರ ಮೇಲುಸ್ತುವಾರಿ ನೋಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ . ಕಳೆ ಕೀಳುವುದರಿಂದ ಹಿಡಿದು ಕೊಯ್ಲಿನವರೆಗಿನ ಎಲ್ಲ ಜವಾಬ್ದಾರಿಗಳನ್ನು ವಿದ್ಯಾರ್ಥಿಗಳೇ ಸ್ಥಳೀಯರ ನೆರವಿನೊಂದಿಗೆ ನಿರ್ವಹಿಸಲಿದ್ದಾರೆ.

    ಈ ಸಂದರ್ಭದಲ್ಲಿ ಸ್ಥಳೀಯ ಕೃಷಿಕರಾದ ದಯಾನಂದ ಕುಲಾಲ್‌, ಸುಂದರ ಶೆಟ್ಟಿ, ರತ್ನಾ, ರೇಖಾ, ಶುಭಲತಾ, ಪ್ರಣೀತಾ ಹಾಗೂ ಉಪನ್ಯಾಸಕರಾದ ಚಂದ್ರಕಾಂತ ಆಚಾರ್ಯ, ರಾಘವೇಂದ್ರ ರಾವ್‌, ಶ್ರೀನಿಧಿ, ಸುನಿಲ್‌ ಶೆಟ್ಟಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.