Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಸೇವಾ ದಿನಾಚರಣೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಸೇವಾ ದಿನಾಚರಣೆ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ನಮ್ಮ ದೇಶದ ಮೇಲೆ ಅದೆಷ್ಟೋ ಆಕ್ರಮಣಗಳು ನಡೆದಿದ್ದರೂ ನಮ್ಮ ದೇಶದ ಸಂಸ್ಕೃತಿ ಪರಂಪರೆ ಗಟ್ಟಿಯಾಗಿ ಉಳಿದಿದೆ. ಧರ್ಮ ಮತ್ತು ಸಂಸ್ಕೃತಿಯ ಭದ್ರ ತಳಹದಿಯ ಮೇಲೆ ನಮ್ಮ ದೇಶ ಸದೃಢವಾಗಿ ನಿಂತಿದ್ದು, ಜಗತ್ತಿನ ಎಲ್ಲಾ ರಾಷ್ಟ್ರಗಳು ನಮ್ಮ ಭಾರತ ದೇಶವನ್ನು ಎದುರು ನೋಡುತ್ತಿದೆ. ಮಾತೆಯನ್ನು ಪೂಜಿಸಿ ಗೌರವಿಸುವ ನಮ್ಮ ನಾಡು ಅತ್ಯಂತ ಶ್ರೇಷ್ಠವಾಗಿದ್ದು, ಪುಟ್ಟ ಮಕ್ಕಳಲ್ಲಿ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವ ದೃಷ್ಟಿಯಿಂದ ಅಜಿತ್ ಕುಮಾರರು ಶಿಶು ಮಂದಿರವನ್ನು ಪ್ರಾರಂಭಿಸಿದ್ದರು. ಇದರ ಫಲವಾಗಿ ಇಂದು ಸಹಸ್ರಾರು ಮಕ್ಕಳು ಸಂಸ್ಕಾರವಂತರಾಗಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸುವಲ್ಲಿ ಸಹಕಾರಿಯಾಗಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ನ ವಿಶ್ವಸ್ಥ ಪ್ರಮೋದ ಮಂದಾರ್ತಿ ಹೇಳಿದರು.

    Click Here

    Call us

    Click Here

    ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಮತ್ತು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಹಾಗೂ ಇಂದುಶ್ರೀ ಮಹಿಳಾ ಮಂಡಲ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಅವರು ಮಾತನಾಡಿದರು.

    ಶಿಇಂದುಧರ ದೇವಸ್ಥಾನದ ಆಡಳಿತ ಮೊಕ್ತೇಸರ ಸಂಜೀವ ಜಿ.ಟಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಗೋಪಾಲ ಪೂಜಾರಿ ಶುಭ ಹಾರೈಸಿದರು. ಇದೇ ಸಂದರ್ಭ ರಾಷ್ಟ್ರ ಮಟ್ಟದ ಕ್ರೀಡಾಪಟು ವೈಷ್ಣವಿ ಖಾರ್ವಿ ಮತ್ತು ರಾಜ್ಯ ಮಟ್ಟದ ಕ್ರೀಡಾಪಟು ಪ್ರಾರ್ಥನಾ ಪೈ ಅವರನ್ನು ಸನ್ಮಾನಿಸಲಾಯಿತು ಮತ್ತು ಶಿಶು ಮಂದಿರದ ಮಾತಾಜಿ ಪ್ರೇಮಾ ಮತ್ತು ರತ್ನಾ ಅವರನ್ನು ಗೌರವಿಸಲಾಯಿತು. ದೇವಸ್ಥಾನದ ಮಾಜಿ ಅಧ್ಯಕ್ಷ ನರಸಿಂಹ ಕೆ., ಅರ್ಚಕ ಶಿವಾನಂದ ಜಿ.ಟಿ., ಈಶ್ವರ ಜಿ., ರಾಘವೇಂದ್ರ ಜಿ.ಟಿ., ಕಾರ್ಯದರ್ಶಿ ಶ್ರೀಕಾಂತ ಎನ್., ಮಹಿಳಾ ಮಂಡಲದ ಸರೋಜ ಜಿ.ಟಿ., ಸುಮಿತ್ರಾ, ಸುಶೀಲಾ ಜಿ.ಟಿ. ಶಿಶು ಮಂದಿರದ ಸದಸ್ಯರಾದ ಸವಿತಾ ಯು.ದೇವಾಡಿಗ, ಉಷಾ ಪಿ.ಮಡಿವಾಳ, ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

    ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಮಾಜಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    5 × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.