Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಎಡಿಸಿ
    ಉಡುಪಿ ಜಿಲ್ಲೆ

    ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಎಡಿಸಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟçಕವಿ ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು.

    Click Here

    Call us

    Click Here

    ಅವರು ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕುವೆಂಪು ಒಬ್ಬ ಶ್ರೇಷ್ಠ ಕವಿ. ಅವರು ತಮ್ಮ ಆಲೋಚನೆಗಳನ್ನು ಸಾಹಿತ್ಯ ಹಾಗೂ ಕೃತಿಗಳ ಮೂಲಕ ಸಮಾಜಕ್ಕೆ ನೀಡಿದ್ದು, ಅವರ ಈ ಬರಹಗಳು ಹಲವಾರು ಸಾಮಾಜಿಕ ಸುಧಾರಣೆ ತಂದಿದೆ ದುಂದು ವೆಚ್ಚ ಮಾಡದೇ ಮದುವೆ ನಡೆಸುವ ಸಲುವಾಗಿ ಪ್ರಪಂಚಕ್ಕೆ ಮಂತ್ರಮಾಂಗಲ್ಯ ಪರಿಚಯಿಸಿದ್ದಾರೆ. ಕುವೆಂಪು ಅವರು ರಚಿಸಿದ ನಾಡಗೀತೆಯನ್ನು ದಿನನಿತ್ಯ ಹಾಡುವ ಮೂಲಕ ಪ್ರತಿದಿನ ಅವರನ್ನು ನಾವು ನೆನೆಯುತ್ತಿದ್ದೇವೆ. ಸಾಹಿತ್ಯ ಲೋಕದಲ್ಲಿ ಪ್ರಥಮ ಬಾರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ಕರುನಾಡಿಗೆ ತಂದುಕೊಟ್ಟ ಶ್ರೇಷ್ಠ ಕವಿ ಕುವೆಂಪು ಅವರು ಎಂದರು.

    ಮಾನವನನ್ನು ವಿಶ್ವ ಮಾನವ ಮಾಡಬೇಕೆನ್ನುವುದು ಕುವೆಂಪು ರವರ ಕನಸಾಗಿದ್ದು, ಪ್ರತಿಯೊಬ್ಬರಲ್ಲೂ ಇರುವ ವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸಬೇಕು ಎನ್ನುವುದು ಇದರ ನಿಯಮ. ಆದ್ದರಿಂದ ಅವರು ಹುಟ್ಟಿದ ದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

    ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಪ್ರಜ್ಞಾ ಮಾರ್ಪಳ್ಳಿ ಕುವೆಂಪು ಅವರ ಕುರಿತು ಉಪನ್ಯಾಸ ನೀಡಿ, ಕುವೆಂಪು ಸಾಹಿತ್ಯದಲ್ಲಿರುವ ಬರಹಗಳಲ್ಲಿನ ಸಾಮರ್ಥ್ಯವನ್ನು ಅರಿತು ಪರಿಪೂರ್ಣ ಬದುಕನ್ನು ಕಟ್ಟಿಕೊಂಡಾಗ ಕುವೆಂಪು ಅವರ ವಿಶ್ವಮಾನವ ಕನಸು ಈಡೇರುತ್ತದೆ. ಮನುಷ್ಯ ಕರ್ತವ್ಯದೊಂದಿಗೆ ತನ್ನ ಜೀವನವನ್ನು ಹೇಗೆ ಆದರ್ಶವಾಗಿಟ್ಟುಕೊಳ್ಳಬೇಕು ಎಂಬುದನ್ನು ಅವರ ಶ್ರೀ ರಾಮಾಯಣ ದರ್ಶನಂ ಕೃತಿಯಲ್ಲಿ ಕಾಣಬಹುದಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ವಿಶ್ವ ಮಾನವತೆ ಕಡೆಗೆ ಬದುಕಿನ ಪಥ ಸಾಗಬೇಕು. ನಮ್ಮ ಆಲೋಚನೆಗಳು ಪೂರ್ಣಪ್ರಮಾಣದಲ್ಲಿ ತಂತ್ರಜ್ಞಾನಕ್ಕೆ ತಲೆಬಾಗಬಾರದು. ತ್ಯಾಗ, ಪ್ರೀತಿ, ಕರುಣೆ, ಸ್ಪಂದಿಸುವಿಕೆಯ ಮನೋಭಾವವನ್ನು ಬೆಳೆಸಿಕೊಂಡಾಗ ವ್ಯಕ್ತಿ ಮಾನವನಾಗುತ್ತಾನೆ. ವರ್ಣ ರಹಿತ, ವರ್ಗರಹಿತ, ಜಾತಿ ಮೀರಿದ ಸಮಾಜ ನಿರ್ಮಾಣ ಮಾಡಬೇಕೆನ್ನುವುದು ಕುವೆಂಪು ರವರ ಕನಸಾಗಿದ್ದು, ಅದನ್ನು ಈಡೇರಿಸುವಲ್ಲಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು.

    ಈ ಸಂದರ್ಭದಲ್ಲಿ ಕುವೆಂಪು ರವರ ಭಾವಗೀತೆ ಹಾಗೂ ಅವರ ಕುರಿತು ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹಾವಂಜೆ ವಿನಯ ಬಾಬುರಾಜ್ ಮತ್ತು ತಂಡದವರಿAದ ಹಾಗೂ ದಿನೇಶ್ ಹಾವಂಜೆ ಅವರಿಂದ ಗೀತಗಾಯನ ಮತ್ತು ಜಾಹ್ನವಿ ಇವರಿಂದ ಕೊಳಲು ವಾದನ ನಡೆಯಿತು.

    ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿ ನರಸಿಂಹಮೂರ್ತಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸುಮಾ, ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಶಿಕ್ಷಕ ರಾಮಚಂದ್ರ ಭಟ್ ನಿರೂಪಿಸಿದರೆ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಬಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    twelve − four =

    Call us

    Click Here

    Call us

    Call us

    Call us
    Highest Viewed Recently
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.