Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಐಎಂಜೆಐಎಸ್ಸಿ ಯಂಗ್ ಲೀಡರ್ ಅವಾರ್ಡ್ 2024 – ಉದ್ಘಾಟನೆ
    ಊರ್ಮನೆ ಸಮಾಚಾರ

    ಐಎಂಜೆಐಎಸ್ಸಿ ಯಂಗ್ ಲೀಡರ್ ಅವಾರ್ಡ್ 2024 – ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಆಚರಣೆಯೊಂದಿಗೆ ‘ಐಎಂಜೆಐಎಸ್ಸಿ ಯಂಗ್ ಲೀಡರ್ ಅವಾರ್ಡ್ 2024’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಉದ್ಘಾಟನೆಗೊಂಡಿತು..

    Click Here

    Call us

    Click Here

    ಕಾರ್ಯಕ್ರಮವನ್ನು ನೀಲಕಂಠ ಎಂ ಹೆಗ್ಡೆ ಲಯನ್ಸ್ ಕ್ಲಬ್ ನ ಪೂರ್ವ ಜಿಲ್ಲಾ ಗವರ್ನರ್ ಹಾಗೂ ಅಂತರಾಷ್ಟ್ರೀಯ ಪ್ರೇರಕ ತರಬೇತುದಾರರು ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತ, ಭಾರತ ಸಂಸ್ಕೃತಿಯ ಕುರಿತು ಜಗತ್ತಿಗೆ ತಿಳಿಸಿದಂತಹ ಮಹಾಪುರುಷರು. ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಅವರ ಬದುಕಿನ ಜೀವನವನ್ನು ಅರ್ಥೈಸಿಕೊಂಡರೆ ಇಡೀ ಜಗತ್ತನ್ನು ಅರ್ಥೈಸಿಕೊಂಡ ಹಾಗೆ ಎಂದು ಹೇಳಿದರು. ವಿದ್ಯಾರ್ಥಿಗಳನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ನಮ್ಮ ಈ ಸಂಸ್ಥೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು ಮತ್ತು ವಿದ್ಯಾರ್ಥಿಗಳನ್ನು ಸಶಕ್ತಿ ಗೊಳಿಸಲು ಮಾಡಿದ ಕಾರ್ಯಕ್ರಮಕ್ಕೆ ಅಭಿನಂದನೆಯನ್ನು ಸಲ್ಲಿಸಿದರು. ನಾಳೆಯ ಬದುಕಿನ ಕನಸನ್ನು ಕಟ್ಟಿಕೊಳ್ಳಿ. ಕೇವಲ ಗೆಲುವಿನ ಹಿಂದೆ ಅಲ್ಲ, ಗೆಲುವು ಸಿಗುವವರೆಗೂ ಪ್ರಯತ್ನ ಪಡಬೇಕು. ಹಾಗೆ ತಮ್ಮ ನಂಬಿಕೆ, ವಿಶ್ವಾಸಗಳು ಅರಿಷಡ್ವರ್ಗಗಳನ್ನು ಬಿಟ್ಟು ತತ್ವದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಮತ್ತು ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ ಅವಕಾಶಗಳನ್ನು ರೂಪಿಸಿಕೊಂಡು ಜೀವನವನ್ನು ಸಾರ್ಥಕಗೊಳಿಸಿ ಎಂದರು.

    ಐಎಂಜೆ ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ ಯವರು ಪ್ರಾಸ್ತಾವಿಕ ನುಡಿಯಲ್ಲಿ ಸ್ಪರ್ಧೆಯ ಉದ್ದೇಶ, ಹಂತ ಮತ್ತು ವಿವರವನ್ನು ಪ್ರಸ್ತಾಪಿಸಿದರು.

    ಪ್ರಾಂಶುಪಾಲೆಯವರಾದ ಡಾ. ಪ್ರತಿಭಾ ಎಂ ಪಟೇಲ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸೋಲು ಗೆಲುವುಗಳ ಪರಿಕಲ್ಪನೆಯು ನಿಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗಬೇಕು. ಅದು ನಿಮ್ಮ ಜೀವನವನ್ನು ರೂಪಿಸುತ್ತದೆ. ಕಲಿಕೆ ನಿರಂತರ, ಆಶಾವಾದಿಗಳಾಗಿರಿ. ಪ್ರತಿಯೊಬ್ಬರು ಜೀವನದಲ್ಲಿ ಬೆಳೆದು ನಿಮ್ಮ ಗುರಿಯನ್ನು ತಲುಪುವವರಿಗೆ ಪ್ರಯತ್ನ ಪಡಿ ಎಂಬ ಭರವಸೆಯ ಮಾತುಗಳನ್ನು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸದಾನಂದ ಭಟ್ ನಿವೃತ್ತ ಸಹಾಯಕ ಮುಖ್ಯ ವ್ಯವಸ್ಥಾಪಕರು ವಿಜಯ ಬ್ಯಾಂಕ್ ಬೆಂಗಳೂರು, ರಾಜೀವ್ ಕೋಟ್ಯಾನ್ ಮಾಜಿ ಅಧ್ಯಕ್ಷರು, ಲಯನ್ಸ್ ಕ್ಲಬ್ ಕುಂದಾಪುರ, ಉಪ ಪ್ರಾಂಶುಪಾಲರಾದ ಪ್ರೊಫೆಸರ್ ಜಯಶೀಲ್ ಕುಮಾರ್, ಸ್ಪರ್ಧೆಗೆ ತೀರ್ಪುಗಾರರಾಗಿ ಅಕ್ಷಯ್ ಹೆಗ್ಡೆ, ರಾಷ್ಟ್ರ ಪ್ರಶಸ್ತಿ ವಿಜೇತ ನಿರೂಪಕರು, ಪ್ರೊ ಅಮೃತಮಾಲ ಡೀನ್ ಆಫ್ ಇಂಡಸ್ಟ್ರಿಯಲ್ ರಿಲೇಶನ್ಸ್ ಆಫ್ ಪ್ಲೇಸ್ಮೆಂಟ್. ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ. ಡಾ.ನಿಖಿಲಾ ಪೈ, ಬಿಎಸ್‌ಎಚ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರು, ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮವನ್ನು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊಫೆಸರ್ ಸುಮನ ನೆರವೇರಿಸಿದರು. ಆಂಗ್ಲ ಸಹಾಯಕ ಪ್ರಾಧ್ಯಾಪಕಿ ಪಾವನ ಗಣ್ಯರನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಚೇತನ ಪ್ರಾರ್ಥನೆಗೈದರು. ಅನಂತರ ಗಣ್ಯರು ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು.

    ಮೊದಲ ಸುತ್ತಿನಲ್ಲಿ ನೆಡೆದ ಸ್ಪರ್ಧೆಯಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ 22 ಕ್ಕೂ ಕಾಲೇಜಿನ 200 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದು ಅಂತಿಮ ಹಂತದ ಸುತ್ತಿಗೆ ಆಯ್ಕೆಯಾದ 15 ಕಾಲೇಜಿನ 45 ವಿದ್ಯಾರ್ಥಿಗಳು ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಭಾಗವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.