Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಭೆಯ ಮಧ್ಯೆಯೇ ಪತ್ರಕರ್ತರನ್ನು ಹೊರಕಳುಹಿಸಿದ ಕಾಂಗ್ರೆಸ್ ನಾಯಕರು: ಪತ್ರಕರ್ತರ ಸಂಘ ಖಂಡನೆ
    ಊರ್ಮನೆ ಸಮಾಚಾರ

    ಸಭೆಯ ಮಧ್ಯೆಯೇ ಪತ್ರಕರ್ತರನ್ನು ಹೊರಕಳುಹಿಸಿದ ಕಾಂಗ್ರೆಸ್ ನಾಯಕರು: ಪತ್ರಕರ್ತರ ಸಂಘ ಖಂಡನೆ

    Updated:27/01/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜ.27:
    ಕುಂದಾಪುರದಲ್ಲಿ ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ವರದಿಗಾಗಿ ತೆರಳಿದ್ದ ಪತ್ರಕರ್ತರನ್ನು ಬಲವಂತವಾಗಿ ಹೊರಕಳುಹಿಸಿದ ಘಟನೆ ನಡೆದಿದ್ದು, ಇದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ.

    Click Here

    Call us

    Click Here

    ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಈ ವೇಳೆ ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿ ತಳ್ಳಿದ್ದಾರೆ. ಇದರಿಂದ ಕೆಲ ಹೊತ್ತು ಸಂದಿಗ್ಧತೆ ವಾತಾವರಣ ಸೃಷ್ಟಿಯಾಯಿತು.

    ಇದೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಹಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಸಹಿತ ಎರಡು ಬ್ಲಾಕ್ ಕಾಂಗ್ರೆಸ್ನ ಮುಖಂಡರುಗಳು ದುರ್ವರ್ತನೆ ತೋರಿದ ಮುಖಂಡನನ್ನು ತಡೆಯುವ ಯಾವುದೇ ಪ್ರಯತ್ನ ಮಾಡದೇ ಮೂಕ ಪ್ರೇಕ್ಷಕರಾಗಿ ವರ್ತಿಸಿದ್ದಾರೆ.

    ಬಳಿಕ ಸಚಿವೆ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ಮೊದಲಿಗೆ ಮಾಧ್ಯಮದವರನ್ನು ಹೊರಹೋಗಿ ಎಂದು ನೇರವಾಗಿ ಹೇಳುವ ಮೂಲಕ ಅವಮಾನಪಡಿಸಿ ಪತ್ರಿಕಾ ಸ್ವಾತಂತ್ರ್ಯಕ್ಕೆ ದಕ್ಕೆ ತಂದಿದ್ದಾರೆ ಎಂದು ಸಂಘವು ಆರೋಪಿಸಿದೆ.

    ಕುಂದಾಪುರದಲ್ಲಿ ನಡೆಯುವ ವಿವಿಧ ಪಕ್ಷಗಳ ಕಾರ್ಯಕ್ರಮದಲ್ಲಿ ಕುಂದಾಪುರ ಮಾಧ್ಯಮ ಮಿತ್ರರು ಸೌಹಾರ್ದಯುತವಾಗಿ ಭಾಗವಹಿಸಿ ಕಾರ್ಯಕ್ರಮದ ವರದಿ ಮಾಡುತ್ತಾ ಬಂದಿದ್ದು ಕಾಂಗ್ರೆಸ್ ಪಕ್ಷದ ಈ ದುರ್ವರ್ತನೆ ಪತ್ರಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಆದ್ದರಿಂದ ಈ ಘಟನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಕಾರ್ಯಾಧ್ಯಕ್ಷ ಕೊಳ್ಕೆಬೈಲು ಕಿಶನ್ ಹೆಗ್ಡೆ ಹಾಗೂ ಎರಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಆಗ್ರಹಿಸಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    14 − four =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.