Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ ಸುಧಾರಣೆ : ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ ಸುಧಾರಣೆ : ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಫೆ.13:
    12 ನೇ ಶತಮಾನದಲ್ಲಿ ಶಿವಶರಣೆಯರು ರಚಿಸಿದ ವಚನ ಸಾಹಿತ್ಯಗಳು ವಿಚಾರ ಕ್ರಾಂತಿಯನ್ನು ಮೂಡಿಸುವುದರೊಂದಿಗೆ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರುಗಳ ಭಾವಚಿತ್ರöಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

    12 ನೇ ಶತಮಾನ ಮಹತ್ವಪೂರ್ಣವಾದ ಕಾಲಘಟ್ಟ. ಈ ಕಾಲಘಟ್ಟದಲ್ಲಿ ಕಾಯಕ ನಿಷ್ಠೆಯಿಂದ ಗುರುತಿಸಿಕೊಂಡ ಪ್ರತಿಯೊಬ್ಬ ಶರಣರು ವಿಶಿಷ್ಟವಾದ ಜೀವನ ನಡೆಸಿದ್ದಾರೆ. ಪ್ರಮಾಣಿಕ ಕೆಲಸಕ್ಕೆ ಗೌರವ ದೊರಕುತ್ತದೆ ಎಂಬುದನ್ನು ಇವರುಗಳಿಂದ ತಿಳಿಯಬಹುದಾಗಿದೆ. ವೈಚಾರಿಕ ಜ್ಞಾನವನ್ನು ಹೊಂದಿದ್ದ ಇವರುಗಳು ಮಾತು ಮತ್ತು ಕೃತಿಗೆ ವ್ಯತ್ಯಾಸ ಇಲ್ಲದಂತೆ ಸರಳ ಜೀವನ ನಡೆಸಿರುವುದು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದರು.

    ಶಿವಶರಣೆಯರು ಜಾತಿ, ಮತ, ಪಂಥದ ಬೇಧವಿಲ್ಲದೇ ಸಮ ಸಮಾಜದ ಕನಸನ್ನು ಕಂಡು ಅದರಂತೆ ಬದುಕಿ ತೋರಿಸಿದ್ದಾರೆ. ಅವರುಗಳ ಆದರ್ಶಗಳು ಇಂದಿಗೂ ದಾರಿದೀಪವಾಗಿದ್ದು, ಅವುಗಳನ್ನು ಪಾಲಿಸುವುದರೊಂದಿಗೆ ವಚನಕಾರರ ತತ್ವಗಳು ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವಾಗಬೇಕು ಎಂದರು.

    ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪನ್ಯಾಸ ನೀಡಿ, ಬಸವಣ್ಣನವರ ಪ್ರಭಾವದಿಂದ 12 ನೇ ಶತಮಾನದಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಕ್ರಾಂತಿಯಾಯಿತು. ಪ್ರತಿಯೊಬ್ಬರೂ ಜೀವನ ನಿರ್ವಹಣೆಗೆ ಶ್ರಮವಹಿಸಿ ದುಡಿಯುವುದರೊಂದಿಗೆ ವೃತ್ತಿಧರ್ಮಕ್ಕೆ ಮೋಸ ಮಾಡಬಾರದೆನ್ನುವುದು ವಚನಕಾರರ ಮುಖ್ಯ ಆಶಯ. ಅತ್ಯಂತ ಹಿಂದುಳಿದ ವರ್ಗದಲ್ಲಿ ಹುಟ್ಟಿದ ಕಾಯಕ ಶರಣರು ತಮ್ಮ ಕಾಯಕ ನಿಷ್ಠೆಯಿಂದಲೇ ಸಮಾಜದಲ್ಲಿ ಗುರುತಿಸಿಕೊಂಡು, ಸಾಮರಸ್ಯದ ಜೀವನ ಸಾಗಿಸಿದ್ದಾರೆ ಎಂದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕಲಾವಿದ ವಾಸುದೇವ ಬನ್ನಂಜೆ, ಕ.ಸಾ.ಪ ಕಾರ್ಯದರ್ಶಿ ನರಸಿಂಹ ಮೂರ್ತಿ,ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಕನ್ನಡ ಉಪನ್ಯಾಸಕ ರಾಮಾಂಜಿ ನಿರೂಪಿಸಿ, ಕೋಶಾಧಿಕಾರಿ ಮನೋಹರ್, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ
    • ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ
    • ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ದೇವಾಡಿಗ ನವೋದಯದ ಸಂಘ ಬೆಂಗಳೂರು: ದಿನದರ್ಶಿಕೆ ಬಿಡುಗಡೆ ಸಮಾರಂಭ
    • ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಸಂಪನ್ನ, ತಿರುಮಲಾಧೀಶನ್ನು ಕಣ್ತುಂಬಿಕೊಂಡ ಭಕ್ತರು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.