ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
2023ರ ವಿಧಾನಸಭಾ ಚುನಾವಣೆಯಲ್ಲಿ ಈ ಇಬ್ಬರು ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಜಯಪ್ರಕಾಶ್ ಹೆಗ್ಡೆ ಅವರನ್ನು ವಿಧಾನ ಪರಿಷತ್ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಉಚ್ಚಟಿಸಿತ್ತು. ಬಳಿಕ ಅವರು ಬಿಜೆಪಿ ಸೇರಿದ್ದರು. ಬಳಿಕ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ, ಇಂಧನ ಸಚಿವ ಕೆ ಜೆ ಜಾರ್ಜ್ ಸಮ್ಮುಖದಲ್ಲಿ ಈ ಮೂವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.










