Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್ ಹೆಗ್ಡೆ ಅವರಿಂದ ನಾಮಪತ್ರ ಸಲ್ಲಿಕೆ
    ಉಡುಪಿ ಜಿಲ್ಲೆ

    ಉಡುಪಿ: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್ ಹೆಗ್ಡೆ ಅವರಿಂದ ನಾಮಪತ್ರ ಸಲ್ಲಿಕೆ

    Updated:04/04/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದರು.

    Click Here

    Call us

    Click Here

    ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಅವರಿಂದ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು.

    ಈ ಸಂದರ್ಭ ಸಚಿವ, ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಚ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಮೋಟಮ್ಮ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಅಂಶುಮಂತ್‌ ಉಪಸ್ಥಿತರಿದ್ದರು.

    ಬಳಿಕ ಕೆ. ಜಯಪ್ರಕಾಶ್‌ ಹೆಗ್ಡೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಸದ್ಯ ನಾನು ನಾಮಪತ್ರ ಸಲ್ಲಿಸಿದ್ದು ಇನ್ನು  ಇನ್ನು ಚುನಾವಣಾ ಕೆಲಸ ಮಾಡುವುದು ಬಾಕಿ ಇದೆ. ನಾನು ಕೆಲಸ ಮಾಡುತ್ತೇನೆ ಎಂದಷ್ಠೇ ಹೇಳಬಲ್ಲೆ ಯೋಜನೆಗಳು ಏನು ಎಂದು ಹೇಳೋದು ಇದು ಕಾಲವಲ್ಲ. ಈ ಹಿಂದೆ ನಾನು 20 ತಿಂಗಳು ಸಂಸದನಾಗಿ ಕೆಲಸ ಮಾಡಿದ್ದು ಮಾತ್ರವಲ್ಲ ಸೋತಾಗಲು ಕೆಲಸ ಮಾಡಿದ್ದೇನೆ. ಸಂಸದನಾಗಿದ್ದ ವೇಳೆ ಪ್ರತಿ ಪಂಚಾಯಿತಿಗೂ ಭೇಟಿ ಕೊಟ್ಟಿದ್ದು ಪಂಚಾಯಿತಿಗಳ ಸಮಸ್ಯೆ ನನಗೆ ಅರ್ಥವಾಗುತ್ತದೆ. ಸಮಸ್ಯೆಗಳಿಗೆ ಸ್ಪಂದಿಸಲು ಪ್ರಯತ್ನ ಮಾಡಬೇಕು ನಾನು ಹೊಸದಾಗಿ ಜನರ ಸಂಪರ್ಕ ಮಾಡಿಕೊಳ್ಳಬೇಕೆಂದಿಲ್ಲ ನಾನು ಯಾವಾಗಲೂ ನಾನು ಜನರ ಸಂಪರ್ಕದಲ್ಲೇ ಇದ್ದೇನೆ ಎಂದರು.

    ಮಲೆನಾಡು ಕರಾವಳಿ ಬಯಲು ಸೀಮೆಯ ಸಮಸ್ಯೆಗಳನ್ನು ನಾನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದು ಪ್ರಚಾರ ನಿಮಿತ್ತ ಎರಡು ಜಿಲ್ಲೆಯ ಅಧ್ಯಕ್ಷರು ಪದಾಧಿಕಾರಿಗಳಲ್ಲಿ ಕಾರ್ಯಕ್ರಮ ಹಾಕಿಕೊಳ್ಳಲು ಹೇಳಿದ್ದೇನೆ ಅವರು ಸೂಚಿಸಿದಂತೆ ತಿರುಗಾಟ ಮಾಡುತ್ತೇನೆ. ಸಚಿವ ಕೆ ಜೆ ಜಾರ್ಜ್ ಅವರು ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಮೋಟಮ್ಮ ಸಹಿತ ಚಿಕ್ಕಮಗಳೂರಿನ ಎಲ್ಲಾ ಶಾಸಕರು ಬಂದಿದ್ದು   ಕಾರ್ಯಕರ್ತರು ಕೂಡ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದಾರೆ. ನಾವು ಗೆಲ್ಲುವುದಲ್ಲ ಕಾರ್ಯಕರ್ತರು ನಮ್ಮನ್ನು ಗೆಲ್ಲಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ನಾವು ವಿಷಯಧಾರಿತ ಚರ್ಚೆಗಳಿಗೆ ಹೋಗುವುದಿಲ್ಲ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತೇವೆ ನಾನು ಯಾರ ಬಗ್ಗೆಯೂ ವೈಯುಕ್ತಿಕ ಟೀಕೆ ಮಾಡುವುದಿಲ್ಲ. ನನ್ನ ಕಾಲದಲ್ಲಿ ಅನುಮೋದನೆ ತೆಗೆದುಕೊಂಡ ಕಾಮಗಾರಿಗಳು ಸಂಪೂರ್ಣ ಆಗಿಲ್ಲ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ಇದೆ ಸರ್ವರಿಗೆ ಬದುಕು ಸಮಪಾಲು ಸಮ ಬಾಳು ಇದು ನಮಗೆ ಪ್ರಮುಖ. ಮಂತ್ರಿಯಾಗಿ ಶಾಸಕರಾಗಿ ಕೆಲಸ ಮಾಡಿದ ಅನುಭವ ಇದ್ದು ಸಂಸದನಾಗಿ ಹಾಗೂ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷನಾಗಿ ಅನುಭವ ಪಡೆದಿದ್ದೇನೆ. ಹಿಂದುಳಿದ ವರ್ಗದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕ್ರಮ ಕೈಗೊಂಡಿದ್ದೇನೆ ಜನರ ಸಮಸ್ಯೆಗಳು ನನಗೆ ಅರ್ಥವಾಗಿದೆ ಸ್ಪಂದಿಸಬೇಕು ಅಷ್ಟೇ ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    11 − 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.