Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದೂ ವಿರೋಧಿಗಳಿಗೆ ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಲಿದ್ದಾರೆ: ಪ್ರತಿಭಟನೆಯಲ್ಲಿ ಬಿ.ವೈ. ರಾಘವೇಂದ್ರ ಆಕ್ರೋಶ
    ಬೈಂದೂರು

    ಹಿಂದೂ ವಿರೋಧಿಗಳಿಗೆ ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಲಿದ್ದಾರೆ: ಪ್ರತಿಭಟನೆಯಲ್ಲಿ ಬಿ.ವೈ. ರಾಘವೇಂದ್ರ ಆಕ್ರೋಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

    Click Here

    Call us

    Click Here

    ಪ್ರತಿಭಟನೆ ಉದ್ದೇಶಿಸಿ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ತನ್ನ ಪ್ರೀತಿಯನ್ನು ಒಪ್ಪಿಲ್ಲ ಎನ್ನುವ ಕಾರಣಕ್ಕೆ ನೇಹಗಳನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ. ಇದು ಲವ್ ಜಿಹಾದ್ ನ ಒಂದು ಭಾಗ. ಈ ಸರ್ಕಾರ ಕೊಲೆಯಾದ ನೇಹಳ ಕುಟುಂಬಕ್ಕೆ ರಕ್ಷಣೆ ನೀಡುವುದನ್ನು ಬಿಟ್ಟು ಕೊಲೆ ಮಾಡಿದವನ ಮನೆಗೆ ರಕ್ಷಣೆ ನೀಡಿದೆ. ರಾಮ ನವಮಿ ಪಾನಕ ಹಂಚಿದವರ ವಿರುದ್ಧ ಕೇಸ್ ದಾಖಲಿಸುತ್ತಾರೆ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹಾಡು ಬರೆದರೆ ಹಲ್ಲೆ ಮಾಡುತ್ತಾರೆ. ಮಡಿಕೇರಿಯ ಕುಟ್ಟಪ್ಪ, ಶಿವಮೊಗ್ಗದ ಹರ್ಷ, ಭಟ್ಕಳ ಸಮೀಪದ ಪರೇಶ್ ಮೆಸ್ತಾ ಹೀಗೆ ನಮ್ಮ ಕಾರ್ಯಕರ್ತರನ್ನು ಕಳೆದುಕೊಳ್ಳುತ್ತಿದ್ದೇವೆ. ಇದೆಲ್ಲದಕ್ಕೂ ಉತ್ತರ ನೀಡಲೇ ಬೇಕು. ವೋಟಿನ ತುಷ್ಠೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಯಾಕೆ ಹೀಗೆ ಮಾಡುತ್ತಿದೆ ಎನ್ನುವುದು ತಿಳಿಯುತ್ತಿಲ್ಲ. ಹಿಂದೂಗಳ ಒಳ್ಳೆತನದ ನಡವಳಿಕೆ ದೌರ್ಬಲ್ಯ ಅಲ್ಲ. ಈ ಘಟನೆಗೆ ಹಿಂದೂ ಸಮಾಜ ಸರಿಯಾದ ಉತ್ತರ ನೀಡಲಿದೆ. ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಮತದಾರರು ಚೊಂಬು ಕೊಟ್ಟು ಮನೆಗೆ ಕಳುಹಿಸಲಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

    ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಪ್ರೀತಿ ಒಪ್ಪಿಕೊಂಡಿಲ್ಲ ಎಂದರೆ ಚಾಕು ಹಾಕುತ್ತಾರೆ, ಪ್ರೀತಿ ಒಪ್ಪಿಕೊಂಡರೆ ಸೂಟ್ ಕೇಸ್ಗೆ ಹಾಕುತ್ತಾರೆ. ಇದು ಯಾವಾಗ ನಿಲ್ಲುತ್ತದೆ ಎಂಬುದೇ ತಿಳಿಯದಾಗಿದೆ. ಇದೆಲ್ಲಕ್ಕಿಂತ ದುರಂತವೆಂದರೆ ಕಾಂಗ್ರೆಸ್ ಸರ್ಕಾರ ಬಂದಾಗ ಆಕ್ಟೀವ್ ಆಗುತ್ತಾರೆ. ಇದೇ ಕೃತ್ಯ ಉತ್ತರ ಪ್ರದೇಶದಲ್ಲಿ ಆಗಿದ್ದರೆ ಬುಲ್ಡೇಜರ್ ಏನ್ ಕೆಲಸ ಮಾಡಬೇಕೋ ಅದನ್ನು 24 ಗಂಟೆಯ ಒಳಗೆ ಮಾಡುತಿತ್ತು. ನಮ್ಮಲ್ಲಿ ಸರ್ಕಾರ ಆ ಬುಲ್ಡೇಜರ್ ಅನ್ನು ಫಯಾಜ್ ನ ಮನೆ ಕಾಯಲು ನಿಲ್ಲಿಸಿದೆ. ಹಿಂದೂ ಸಮಾಜ ಎಚ್ಚೆತ್ತುಕೊಂಡಾಗ ಮಾತ್ರ ಇದಕ್ಕೆಲ್ಲ ಉತ್ತರ ಸಿಗಲಿದೆ. ಬಿಜೆಪಿಯವರು ಯಾರನ್ನು ಟಾರ್ಗೆಟ್ ಮಾಡ್ತಾ ಇಲ್ಲ ಎಂದು ಹೇಳಿದರು.

    ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

    ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಪೂಜಾರಿ, ಉಮೇಶ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಕಿರಿಮಂಜೇಶ್ವರ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    12/05/2026

    ಬೈಂದೂರು: ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಯಿಂದ 6 ಲಕ್ಷ ರೂ. ನಗದು ವಶ

    08/05/2026
    Leave A Reply Cancel Reply

    three × 1 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.