Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಡುಗು – ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಮುಂಜಾಗ್ರತಾ ಕ್ರಮ ಅನುಸರಿಸಿ
    ಉಡುಪಿ ಜಿಲ್ಲೆ

    ಗುಡುಗು – ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಮುಂಜಾಗ್ರತಾ ಕ್ರಮ ಅನುಸರಿಸಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಮಾಹಿತಿ.
    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಈ ಕೆಳಗಿನಂತೆ ಸಲಹೆ, ಸೂಚನೆಗಳನ್ನು ನೀಡಿದೆ.

    Click Here

    Call us

    Click Here

    * ಸಾರ್ವಜನಿಕರು ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ (ಸಿ.ಎ.ಪಿ) ಮೂಲಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಬರುವ ಸಂದೇಶಗಳನ್ನು ಗಮನಿಸಿ, ನಂತರ ಹೊರಗಡೆ ತೆರಳಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗಬಾರದು.

    * ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಾಗಿರುವುದಿಲ್ಲ. ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಛೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು.

    * ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಅಂತಹ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಕೆರೆ, ನದಿ ಹಾಗೂ ಇನ್ನಿತರೆ ನೀರಿನ ಮೂಲಗಳಿಂದ ತಕ್ಷಣವೇ ದೂರ ತೆರಳಬೇಕು.

    * ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಿ, ಮನೆಯಲ್ಲಿಯೇ ಇರಬೇಕು.

    Click here

    Click here

    Click here

    Call us

    Call us

    * ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ, ವಾಹನದಲ್ಲಿಯೇ ಆಶ್ರಯ ಪಡೆಯಬೇಕು ಹಾಗೂ ವಾಹನದ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಈ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರ ಮಾಡಬಾರದು. ಮರಗಳು ಮತ್ತು ವಿದ್ಯುತ್ ಲೈನ್ಗಳಿಂದ ದೂರದಲ್ಲಿ ವಾಹನ ನಿಲುಗಡೆ ಮಾಡಬೇಕು.

    * ಗುಡುಗು-ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು.

    * ಮಿಂಚನ್ನು ಆಕರ್ಷಿಸುವಂತಹ ವಿದ್ಯುತ್, ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ / ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬಹುದು. ಲೋಹದ ವಸ್ತುಗಳನ್ನು ಬಳಸಬಾರದು. ಬೈಕುಗಳು, ವಿದ್ಯುತ್, ದೂರವಾಣಿ ಕಂಬಗಳು, ತಂತಿ ಬೇಲಿ, ಸೇರಿದಂತೆ ಯಂತ್ರಗಳಿAದ ದೂರವಿರಬೇಕು.

    * ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ಗಳು, ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿ, ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ, ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ಧರು, ಜಾನುವಾರುಗಳು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು.

    * ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಬೇಕು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು ಹಾಗೂ ಬಟ್ಟೆಯನ್ನು ಒಗೆಯಬಾರದು.

    * ಆಟದ ಮೈದಾನ, ಉದ್ಯಾನವನ, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗಬಾರದು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಮಿಂಚಿನ ಹೊಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿರುವುದರಿಂದ ಅರಣ್ಯ ಪ್ರದೇಶದಿಂದ ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಹೋಗಬೇಕು.

    * ಗುಡುಗು ಸಿಡಿಲಿನ ಸಮಯದಲ್ಲಿ ಬಯಲು ಪ್ರದೇಶದಲ್ಲಿ ಸಿಲುಕಿಕೊಂಡಿದ್ದರೆ, ತಕ್ಷಣವೇ ಹತ್ತಿರದಲ್ಲೇ ಇರುವ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆದು ಅಪಾಯದಿಂದ ಪಾರಾಗಬೇಕು.

    * ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರಬೇಕು. ವಿದ್ಯುತ್ ಸಂಪರ್ಕ ಹೊಂದಿರುವಂತಹ ವಿದ್ಯುತ್ /ಎಲೆಕ್ಟಿçಕಲ್ ಉಪಕರಣಗಳಾದ ಕಂಪ್ಯೂಟರ್, ಲ್ಯಾಪ್ಟಾಪ್, ವಿಡಿಯೋ ಗೇಮ್ ಸಾಧನಗಳು, ಮೊಬೈಲ್ ಫೋನ್, ವಾಷಿಂಗ್ ಮೆಷಿನ್, ಸ್ಟವ್ ಹಾಗೂ ಇತರ ವಿದ್ಯುತ್ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು. ಬಾಗಿಲುಗಳು, ಕಿಟಕಿಗಳು, ಮಂಟಪಗಳು, ಕಾಂಕ್ರಿಟ್ ನೆಲ, ಬೆಂಕಿಯ ಸ್ಥಳಗಳು, ಸ್ಟವ್ಗಳು, ಬಾತ್ಟಬ್ಗಳು ಹಾಗೂ ಇತರೆ ವಿದ್ಯುತ್ ಉಪಕರಣಗಳಿಂದ ದೂರವಿರಬೇಕು.

    ಸಿಡಿಲು / ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನ:
    ಸಿಡಿಲು / ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112 / 108 ಸಹಾಯವಾಣಿಗೆ ಕರೆ ಮಾಡಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ, ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ.

    ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು.

    ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತವು ಕಂಡು ಬರದಿದ್ದಲ್ಲಿ ತಕ್ಷಣವೇ Cardiac compressions ಹಾಗೂ Cardiopulmonary Resuscitation ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.

    ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಕಣ್ಣಿನ ದೃಷ್ಠಿ, ಕಿವಿ ಕೇಳಿಸುವಿಕೆ ಹಾಗೂ ಮೂಳೆಗಳು ಮುರಿದಿವೆಯೇ ಎಂದು ಪರೀಕ್ಷಿಸಬೇಕು. ಇದರಿಂದ ಪಾರ್ಶ್ವವಾಯು ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದಾಗಿದೆ.

    ಸಿಡಿಲು ಬಡಿಯುವ ಸಾಧ್ಯತೆಯು ಮುಂದುವರೆಯುವುದರ ಬಗ್ಗೆ ಈಗಾಗಲೇ ಸಿಡಿಲಿನ ಹೊಡೆತಕ್ಕೆ ಒಳಗಾಗಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ, ತಕ್ಷಣವೇ ಅವರನ್ನು ಸೂಕ್ತ ರಕ್ಷಣಾ ಸ್ಥಳಕ್ಕೆ ಸ್ಥಳಾಂತರಿಸಬೇಕು.

    ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ವಿವಿಧ ರೀತಿಯ ಸುಟ್ಟಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು/ ಅಘಾತಕ್ಕೆ ಒಳಗಾಗಿರಬಹುದು. ಅದ್ದರಿಂದ, ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳಿದ್ದಲ್ಲಿ ಸೂಕ್ತ ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಬೇಕು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d