Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಉಡುಪಿ ಜಿಲ್ಲೆ

    ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    Updated:12/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ,ಜೂ.12:
    ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಆಧುನಿಕ ತಂತ್ರಜ್ಞಾನ ಯಂತ್ರಗಳ ಬಳಕೆ ಹಾಗೂ ಹೆಚ್ಚು ಕಾರ್ಮಿಕರುಗಳನ್ನು ನಿಯೋಜಿಸುವುದರೊಂದಿಗೆ ಆದಷ್ಟು ತ್ವರಿತವಾಗಿ ಕಾಮಗಾರಿಗಳನ್ನು ಆದ್ಯತೆಯ ಮೆರೆಗೆ ಪೂರ್ಣಗೊಳಿಸಲು ಮುಂದಾಗಬೇಕೆಂದು ಅಭಿಯಂತರುಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಜಿಲ್ಲೆಯಲ್ಲಿ ಸಂತೆಕಟ್ಟೆ ಅಂಡರ್‌ಪಾಸ್, ಇಂದ್ರಾಳಿ ಸೇತುವೆ, ಕರಾವಳಿ ಜಂಕ್ಷನ್‌ನಿಂದ ಮಲ್ಪೆ ರಸ್ತೆ, ಪರ್ಕಳದಿಂದ ಆಗುಂಬೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿಗಳು ಮಂದಗತಿಯಲ್ಲಿದ್ದು ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿವೆ ಎಂಬ ದೂರುಗಳು ಪ್ರತಿನಿತ್ಯ ಕೇಳಿಬರುತ್ತಿದೆ. ಕಾಮಗಾರಿಯ ವೇಗವನ್ನು ಹೆಚ್ಚಿಸುವುದರೊಂದಿಗೆ ಅಲ್ಪ ಸಮಯದಲ್ಲಿ ಪೂರ್ಣಗೊಳಿಸಲು ಅಧಿಕಾರಿ ಹಾಗೂ ಗುತ್ತಿಗೆದಾರರು ಕಾರ್ಯಪ್ರವೃತರಾಗಬೇಕು ಎಂದರು.

    ಕಲ್ಸಂಕ ಬಳಿ ರಸ್ತೆ ಕಾಮಗಾರಿಯು ದಿನವೊಂದಕ್ಕೆ 10 ಮೀಟರ್ ಸಹ ಆಗುತ್ತಿಲ್ಲ. ಈ ರೀತಿ ಕಾಮಗಾರಿಯನ್ನು ಮಾಡಿದರೆ ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಿಲ್ಲ. ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲವಾಗುತ್ತದೆ. ಈ ಬಗ್ಗೆ ಇಂಜಿನಿಯರ್‌ಗಳು ನಿಗಾವಹಿಸಬೇಕು ಎಂದರು.

    ಕರಾವಳಿ ಬೈಪಾಸಿನಿಂದ ಮಲ್ಪೆ ವರೆಗಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಆಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಭೂಮಿಯ ಮಾಲೀಕರಿಗೆ ಪ್ರಸ್ತುತ ಮಾರುಕಟ್ಟೆ ಮೌಲ್ಯದ ಪರಿಹಾರ ಒದಗಿಸಿ ಸಾಮಾಜಿಕ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.

    Click here

    Click here

    Click here

    Click Here

    Call us

    Call us

    ಇದನ್ನೂ ಓದಿ ► ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ – https://kundapraa.com/?p=73027 .

    ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ನಾಲ್ಕು ವರ್ಷವಾದರೂ ಪೂರ್ಣಗೊಳ್ಳದ ಬಗ್ಗೆ ಸಾರ್ವಜನಿಕರಿಗೆ ಬೇಸರ ಉಂಟಾಗಿದೆ. ಈ ಕಾಮಗಾರಿಯನ್ನು ಸಹ ಆದ್ಯತೆ ಮೇಲೆ ಕೈಗೊಳ್ಳಬೇಕು. ಸಾಧ್ಯವಾದಷ್ಟು ಶೀಘ್ರದಲ್ಲೆ ಪೂರ್ಣಗೊಳಿಸಲು ಮುಂದಾಗಬೇಕು ಎಂದರು.

    ಪರ್ಕಳದಲ್ಲಿ ರಸ್ತೆ ಕಾಮಗಾರಿಕೆ ಅಗ್ಯತವಿರುವ ಭೂಮಿ ಸ್ವಾಧೀನಕ್ಕೆ ಸಂಬAಧಿಸಿದAತೆ ಉಚ್ಛ ನ್ಯಾಯಾಲಯದಲ್ಲಿರುವ ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಲು, ಸಾಣೂರು-ಬಿಕ್ಕರ್ನಕಟ್ಟೆ ರಸ್ತೆ ಅಭಿವೃದ್ಧಿಗೆ ಬೇಕಿರುವ ಭೂ ಸ್ವಾಧೀನ ಪ್ರಕ್ರಿಯೆ ಕೈಗೊಂಡು ಅಲ್ಲಿ ಇರುವ ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿಯನ್ನು ಪಡೆದು ಕಾಮಗಾರಿಗಳನ್ನು ಪಾರಂಭಿಸಲು ಸೂಚಿಸಿದರು.

    ಹೆಜಮಾಡಿಯಿಂದ ಶಿರೂರುವರೆಗಿನ ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಗಳಲ್ಲಿ ಮಳೆ ನೀರು ಸಾರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ದಾರಿ ದೀಪಗಳು ಅಳವಡಿಕೆ, ಅವುಗಳ ನಿರ್ವಹಣೆ ಮಾಡಬೇಕು. ತಪ್ಪಿದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಇದೆ ಇದಕ್ಕೆ ಆಸ್ಪದ ನೀಡಬಾರದು ಎಂದರು.

    ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ಧಾರಿ ಕಾಮಗಾರಿಯಿಂದ ಹಾಳಾಗಿರುವ ಒಳಚರಂಡಿಗಳ ಪುನರ್ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

    ಸಭೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ರಶ್ಮಿ, ನಗರಸಭಾ ಸದಸ್ಯರಾದ ಗಿರೀಶ್ ಕಾಂಚನ್ ಹಾಗೂ ಸುಂದರ್ ಜೆ ಕಲ್ಮಾಡಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    3 − 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.