Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಿ : ನ್ಯಾ. ಎಂ ಪುರುಷೋತ್ತಮ
    ಉಡುಪಿ ಜಿಲ್ಲೆ

    ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಿ : ನ್ಯಾ. ಎಂ ಪುರುಷೋತ್ತಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಠ ಪದ್ಧತಿಯಾಗಿದ್ದು, ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ನಿರಂತರವಾಗಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉಡುಪಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಪುರುಷೋತ್ತಮ ಹೇಳಿದರು.

    Click Here

    Call us

    Click Here

    ಅವರು ಇಂದು ನಗರದ ಮಿಷನ್ ಕಂಪೌಂಡ್ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್  ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

    ಮಕ್ಕಳ ರಕ್ಷಣೆಗಾಗಿ ಸಂವಿಧಾನವು ಅನೇಕ ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ಸಹ ಮಾಡಲಾಗಿದೆ. ಸರಕಾರವು ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಸೌಲಭ್ಯಗಳನ್ನು ನೀಡಿದೆ. ಇವುಗಳನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. 14 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧವಾಗಿದ್ದು, ಒಂದು ವೇಳೆ ನೇಮಿಸಿಕೊಂಡಲ್ಲಿ ಕಾನೂನಿನ ಅನ್ವಯ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಇಡೀ ಸಮುದಾಯಕ್ಕೆ ಮನವರಿಕೆ ಮಾಡಿದಾಗ ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಸಾಧ್ಯ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಯಾವುದೇ ಮಕ್ಕಳು ಅವರ ಬಾಲ್ಯದ ಜೀವನದಿಂದ ವಂಚಿತರಾಗಬಾರದು. ಅವರ ಭೌತಿಕ ಬೆಳವಣಿಕೆ ಪೂರಕವಾಗುವಂತಹ ವಾತಾವರಣವನ್ನು ಕಲ್ಪಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದರ ಮೂಲಕ ಅವರನ್ನು ಸುಶಿಕ್ಷಿತರನ್ನಾಗಿ ಮಾಡಬೇಕು. ಸುತ್ತಮುತ್ತಲಿನ ಪರಿಸರದಲ್ಲಿ ಬಾಲಕಾರ್ಮಿಕರಾಗಿ ಮಕ್ಕಳು ಕಾರ್ಯನಿರ್ವಹಿಸುತ್ತಿದ್ದಲ್ಲಿ ಮಾಹಿತಿ ನೀಡುವಂತೆ ತಿಳಿಸಿದರು.

    ಉಡುಪಿ ವಿಭಾಗದ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶವು ಸಾಕಷ್ಟು ತಂತ್ರಜ್ಞಾನದಲ್ಲಿ ಮುಂದುವರಿದಿದ್ದರೂ ಸಹ ಕೃಷಿ, ಹೋಟೆಲ್, ಕಾರ್ಖಾನೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಕ್ಕಳನ್ನು ಬಾಲ ಕಾರ್ಮಿಕರಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಬಾಲ ಕಾರ್ಮಿಕ ಪದ್ಧತಿ ಪಿಡುಗನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಆ ಮೂಲಕ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಅನೇಕ ಕ್ರಿಯಾ ಯೋಜನೆಗಳನ್ನು ರೂಪಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

    Click here

    Click here

    Click here

    Click Here

    Call us

    Call us

    14 ವರ್ಷದ ಕೆಳಗಿನ ಮಕ್ಕಳನ್ನು ಯಾವದೇ ಕ್ಷೇತ್ರದಲ್ಲಿಯೂ ದುಡಿಸಲು ನಿಷೇಧವಿದ್ದು, ಈ ಆದೇಶವನ್ನು ಉಲ್ಲಂಘಿಸಿ, ಮಕ್ಕಳನ್ನು ನೇಮಿಸಿಕೊಂಡಲ್ಲಿ ಅವರುಗಳ ವಿರುದ್ಧ 6 ತಿಂಗಳಿನಿಂದ 2 ವರ್ಷ ದವರೆಗೆ ಜೈಲು ಶಿಕ್ಷೆ ಅಥವಾ 20,000 ರಿಂದ 50,000 ಗಳ ವರೆಗೆ ದಂಡ ಈ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಭು ವಿ ಪ್ರತಿಜ್ಞಾ ವಿಧಿ ಭೋಧಿಸಿದರು.

    ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಖಜಾನೆ ಇಲಾಖೆಯ ಉಪನಿರ್ದೇಶಕ ಗೋಪಾಲಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಫುರ್ಟಡೋ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ವಿವಿಧ ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ ಸ್ವಾಗತಿಸಿದರು, ಪ್ರಕಾಶ್ ಕೆ ಉಡುಪಿ ನಿರೂಪಿಸಿದರೆ, ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಶಿವಪ್ರಸಾದ್ ಎನ್.ಎಸ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    sixteen − 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.