Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚುನಾವಣೆ ಗೆಲುವು ಕಾರ್ಯಕರ್ತರ ಪರಿಶ್ರಮದ ಕೊಡುಗೆ: ಸಂಸದ ಬಿ.ವೈ. ರಾಘವೇಂದ್ರ
    ಊರ್ಮನೆ ಸಮಾಚಾರ

    ಚುನಾವಣೆ ಗೆಲುವು ಕಾರ್ಯಕರ್ತರ ಪರಿಶ್ರಮದ ಕೊಡುಗೆ: ಸಂಸದ ಬಿ.ವೈ. ರಾಘವೇಂದ್ರ

    Updated:22/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ‌ ಸುದ್ದಿ.
    ಕುಂದಾಪುರ:
    ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಎರಡು ಲಕ್ಷಗಳ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ ತಳ ಹಂತದ ಪರಿಶ್ರಮ ಬೆಲೆ ಕಟ್ಟಲಾಗದು. ನನ್ನ ಮೇಲೆ ನೀವು ಇಟ್ಟಿರುವ ಅಚಲ ವಿಶ್ವಾಸಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಮತ್ತಷ್ಟು ಹುಮ್ಮಸ್ಸಿನಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುವ ಮೂಲಕ ಕಾರ್ಯನಿರ್ವಹಿಸುತ್ತೇನೆ ಜೊತೆಗೆ ನಿಮ್ಮ ಆಶೋತ್ತರಗಳನ್ನು ನೆರೆವೇರಿಸುವ ಸಂಕಲ್ಪ ತೊಡುತ್ತೇನೆ‌ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.

    Click Here

    Call us

    Click Here

    ಬಿಜೆಪಿ ಬೈಂದೂರು ಮಂಡಲ ವತಿಯಿಂದ ಶುಕ್ರವಾರ ಹೆಮ್ಮಾಡಿಯ ಜಯಶ್ರೀ ಸಭಾಭವನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಕೃತಜ್ಞತಾ – ಅಭಿನಂದನಾ ಸಮಾರಂಭ” ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಜನರ ಜೀವನ ಮಟ್ಟ ಸುಧಾರಿಸಲು ಜಾರಿಗೆ ತಂದ ನೂರಾರು ಐತಿಹಾಸಿಕ ಜನಪರ ಯೋಜನೆಗಳ ಮೇಲೆ ನಂಬಿಕೆ ಇಟ್ಟು ಮತನೀಡಿದ ಕ್ಷೇತ್ರದ ಮತದಾರ ಬಾಂಧವರಿಗೆ ಈ ವೇದಿಕೆಯ ಮೂಲಕ ಕೃತಜ್ಞತೆ ಸಲ್ಲಿಸಲು ನಾನು ಆಭಾರಿಯಾಗಿದ್ದೇನೆ. ಭವಿಷ್ಯದಲ್ಲಿ ನನ್ನ ಲೋಕಸಭಾ ಕ್ಷೇತ್ರವನ್ನು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಪಥದ ಹಾದಿಯಲ್ಲಿ ತರುವ ಮೂಲಕ ಕಾರ್ಯಯೋಜನೆ ಕೈಗೊಳ್ಳುವ ಭರವಸೆ ನೀಡುತ್ತೇನೆ ಎಂದರು.

    ಈ ಸಂದರ್ಭದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ವೆಂಕಟೇಶ್ ಕಿಣಿ, ಪ್ರಿಯದರ್ಶಿನಿ, ಸದಾನಂದ ಉಪ್ಪಿನಕುದ್ರು, ಉದಯಕುಮಾರ್ ಶೆಟ್ಟಿ, ಮಹೇಂದ್ರ ಪೂಜಾರಿ, ಉಮೇಶ್ ಕಲ್ಗದ್ದೆ, ಗಜೇಂದ್ರ ಬೇಲೆಮನೆ ಸೇರಿದಂತೆ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾದ ಮುಖಂಡರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.