Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಜುಲೈ 12ರಿಂದ 14 ಹಲಸು ಮತ್ತು ಕೃಷಿ ಮೇಳ
    ಊರ್ಮನೆ ಸಮಾಚಾರ

    ಕುಂದಾಪುರದಲ್ಲಿ ಜುಲೈ 12ರಿಂದ 14 ಹಲಸು ಮತ್ತು ಕೃಷಿ ಮೇಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ನೇತೃತ್ವದಲ್ಲಿ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಗೆಳೆಯರ ಬಳಗ ನಂದಿಬೆಟ್ಟು ಇವರ ಸಹಯೋಗದೊಂದಿಗೆ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ 2024 ಜುಲೈ 12 ಶುಕ್ರವಾರದಿಂದ ಜುಲೈ 14 ಆದಿತ್ಯವಾರದ ತನಕ ಕುಂದಾಪುರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಅಧ್ಯಕ್ಷರಾದ ಜನನಿ ದಿನಕರ ಶೆಟ್ಟಿ ತಿಳಿಸಿದರು.

    Click Here

    Call us

    Click Here

    ಅವರು ಕುಂದಾಪುರದ ಪ್ರೆಸ್ ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ಸಣ್ಣ ಕೃಷಿ ಮತ್ತು ಗೃಹ ಕೈಗಾರಿಕೆ ಉತ್ಪನ್ನ ತಯಾರಿಸುವ ಮತ್ತು ಮಾರಾಟ ಮಾಡುವವರಿಗೆ ಅನುಕೂಲ ಕಲ್ಪಿಸುವುದರೊಂದಿಗೆ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು.

    ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಸ್ಥಾಪಕಧ್ಯಕ್ಷರಾದ ಕಿರಣ್ ಕುಂದಾಪುರ ಮಾತನಾಡಿ, ಹಲಸು ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆ, ಆಂಧ್ರದ ಮೊದಲಾದ ಭಾಗಗಳಿಂದ ಹಲಸು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಬಯಲು ಸೀಮೆಯ ಪ್ರಸಿದ್ಧ ಸಿಹಿ ಕೆಂಪು ಹಲಸು,  ಚಂದ್ರ ಹಲಸು ಸೇರಿದಂತೆ ಅಪರೂಪದ ಹಲಸು ತಳಿಗಳ ಹಣ್ಣು ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ಮಾವಿನಹಣ್ಣು, ರಂಬೂಟಾನ್, ಡ್ರ್ಯಾಗನ್ ಪ್ರುಟ್ಸ್ ಸೇರಿದಂತೆ ವಿವಿಧ ಜಾತಿಯ ಹಣ್ಣುಗಳ ಮಾರಾಟ ಮಳಿಗೆಗಳು ಕೂಡಾ ಇರಲಿದೆ ಎಂದರು.

    ಅತ್ಯಾದುನಿಕ ಯಂತ್ರೋಪಕರಣ  ಮತ್ತು ಕೃಷಿ ಸಲಕರಣೆ ಪ್ರದರ್ಶನ ಮತ್ತು ಮಾರಾಟ, ಹಣ್ಣುಗಳ ಕೊಯ್ಲು ಮತ್ತು ಸಂಸ್ಕರಣೆ, ಹಲಸಿನ ಹಣ್ಣಿನಿಂದ ತಯಾರಿಸುವ ಬಗೆ ಬಗೆ ತಿಂಡಿ ಮತ್ತು ಹಪ್ಪಳ ಸಂಡಿಗೆ, ಐಸ್ ಕ್ರೀಮ್, ಹಲಸಿನ ಹಣ್ಣಿನ ಖಾದ್ಯಗಳು,  ಮಾವಿನ ಹಣ್ಣಿನ ತಿನಿಸುಗಳು, ಬೇರೆ ಬೇರೆ ಶೈಲಿಯ ಉಪ್ಪಿನಕಾಯಿಗಳು, ಪ್ರಸಿದ್ಧ ನರ್ಸರಿಗಳು, ಕೃಷಿಗೆ ಸಂಬಂಧಪಟ್ಟ ಮಳಿಗೆಗಳು ಇಲ್ಲಿ ಇರುತ್ತದೆ ಎಂದರು.

    ಖಾದಿ ಮತ್ತು ಕೈಮಗ್ಗಾ ಬಟ್ಟೆಗಳು, ಆಯುರ್ವೇದ ಉತ್ಪನ್ನಗಳು, ಚನ್ನಪಟ್ಟಣ ಗೊಂಬೆ, ಇಳಕಲ್ ಸೀರೆ ಮೊದಲಾದ ಅಪರೂಪದ ಮಳಿಗೆಗಳು ಇರುತ್ತದೆ.

    Click here

    Click here

    Click here

    Click Here

    Call us

    Call us

    ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಕಾರ್ಯದರ್ಶಿ ಶ್ರೀಧರ ಮಾತನಾಡಿ, ಈ ಹಲಸು ಮತ್ತು ಕೃಷಿ ಮೇಳದಲ್ಲಿ ಭಾಗವಹಿಸಲು ಈಗಾಗಲೇ 80 ಮಳಿಗೆಗಳು ನೊಂದಣಿಯಾಗಿದ್ದು, ಇನ್ನೂ 50ಕ್ಕೂ ಹೆಚ್ಚು ಕೃಷಿ, ಗೃಹ ಉಪಯೋಗಕ್ಕೆ ಸಂಬಂಧಪಟ್ಟ ಮಳಿಗೆಗಳು ನೊಂದಣಿಯಾಗುವ ಸಾಧ್ಯತೆ ಇದೆ. ಎಂದರು.

    ಸುದ್ಧಿಗೋಷ್ಟಿಯಲ್ಲಿ ಕೋಶಾಧಿಕಾರಿ ಜಗದೀಶ ವಾಸುದೇವ ಉಪಸ್ಥಿತರಿದ್ದರು,

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    twenty + five =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.