Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳು, ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ರೂಟ್ ಗಳಲ್ಲೂ ಬಸ್ ಓಡಿಸಬೇಕು: ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ವಿದ್ಯಾರ್ಥಿಗಳು, ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ರೂಟ್ ಗಳಲ್ಲೂ ಬಸ್ ಓಡಿಸಬೇಕು: ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ತಾಲೂಕಿನಾದ್ಯಂತ ವಿವಿಧ ಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗೆ ಸೂಕ್ತ ಪರಿಹಾಕರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕಾರದ ಗುರುರಾಜ್ ಗಂಟಿಹೊಳೆ ಅವರು ಶುಕ್ರವಾರ ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ಖಾಸಗಿ ಬಸ್ ಮಾಲೀಕರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಆರ್‌ಟಿಓ ಅಧಿಕಾರಿಗಳ ಸಭೆ ನಡೆಸಿದರು.

    Click Here

    Call us

    Click Here

    ಖಾಸಗಿ ಬಸ್ ಇಲ್ಲದ ರೂಟ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಕ್ಷಣದಿಂದಲೇ ಓಡಿಬೇಕು. ಹಾಗೆಯೇ ಖಾಸಗಿ ಬಸ್ ಮಾಲೀಕರು ಯಾವ ರೂಟ್‌ಗೆ ಪರ್ಮಿಟ್ ಪಡೆದಿದ್ದಾರೋ ಅದೇ ರೂಟ್‌ನಲ್ಲಿ ಬಸ್ ಓಡಿಸಬೇಕು. ಒಂದೊಮ್ಮೆ ಆ ರೂಟ್‌ನಲ್ಲಿ ಬಸ್ ಓಡಿಸದೇ ಇದ್ದರೆ ಅಲ್ಲಿಗೆ ಕೆಎಸ್‌ಆರ್‌ಟಿಸಿ ಬಸ್ ಓಡಿಸಲಾಗುವುದು ಎಂದು ಶಾಸಕರು ತಿಳಿಸಿದರು.

    ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಓಡಾಟದ ಸಮಯವು ಒಂದೇ ಆದಲ್ಲಿ ಘರ್ಷಣೆಯ ಜತೆಗೆ ಪ್ರಯಾಣಿಕರಿಗೂ ಅನಾನುಕೂಲವಾಗುತ್ತದೆ. ಹೀಗಾಗಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಇಬ್ಬರಿಗೂ ಸಮಸ್ಯೆ ಆಗದ ರೀತಿಯಲ್ಲಿ ಪ್ರತಿ ನಿಲ್ದಾಣವಾರು ಸಮಯ ನಿಗದಿ ಮಾಡಲು ಆರ್‌ಟಿಓ ಹಾಗೂ ಕೆಎಸ್‌ಆರ್‌ಟಿಸಿಯವರಿಗೆ ನಿರ್ದೇಶನ ನೀಡಿದರು.

    ವಿದ್ಯಾರ್ಥಿಗಳಿಗೆ ಬಸ್ ಸೇವೆ ಅಗತ್ಯ ಒದಗಿಸಿ:
    ಮುಖ್ಯವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ  ಶಾಲೆ ಕಾಲೇಜುಗಳಿಗೆ ತಲುಪಲು ಹಾಗೂ ಮನೆಗೆ ಹಿಂದಿರುಗಲು ಅನುಕೂಲವಾಗುವಂತೆ ಕೆಎಸ್ ಆರ್ ಟಿ ಸಿ ಹಾಗೂ ಖಾಸಗಿ ಬಸ್ ಗಳು ನಿಲ್ದಾಣಗಳಲ್ಲಿ  ಲಭ್ಯ ವಾಗುವಂತೆ ಕ್ರಮ ವಹಿಸಬೇಕು. ಶಾಲಾ ಕಾಲೇಜು ಬಿಡುವ ಸಮಯ ನೋಡಿಕೊಂಡು ಬಸ್ ಟ್ರಿಪ್ ಹೊಂದಿಸಲು ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.

    ಕ್ಷೇತ್ರದ ಹಲವು ಗ್ರಾಮಗಳಲ್ಲಿ ಗ್ರಾಾಮದ ಅಂತಿಮ ಬಸ್ ನಿಲ್ದಾಣದಿಂದ 5-6 ಕಿ ಮೀ ವ್ಯಾಪ್ತಿಯಲ್ಲಿ ಹೊಸ ರಸ್ತೆಗಳಿಗೆ ಸಾರ್ವಜನಿಕರ ಬೇಡಿಕೆ ಗಳಿಗೆ ಅನುಗುಣವಾಗಿ ಬಸ್ ಸೇವೆ ವಿಸ್ತರಿಸಲು ಅವಕಾಶ ಇರುವುದರಿಂದ ಅದರಂತೆ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲು ಆರ್ ಟಿಓ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ 40-50 ಕಿಮಿ ಗಳಿಗಿಂತಲೂ ಹೆಚ್ಚು ಅಂತರ ವಿರುವ ಗ್ರಾಮೀಣ ಪ್ರದೇಶ ಗಳಿಂದ ನಗರದ ಕಾಲೇಜು ಗಳಿಗೆ ಬರುವ ವಿದ್ಯಾರ್ಥಿಗಳಿಗೆ  ಕಾಲೇಜು ತಲುಪುವ ಪ್ರಯಾಣ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಕಾರಣವಾಗದಂತೆ ಸೂಕ್ತ ಸಮಯಕ್ಕೆ ಬಸ್ ಸಿಗುವ ಹಾಗೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು.

    Click here

    Click here

    Click here

    Click Here

    Call us

    Call us

    ವಿದ್ಯಾರ್ಥಿ ಜೀವನ ಬದುಕಿನ ಅತೀ ಮುಖ್ಯ ಘಟ್ಟವಾಗಿರುವುದರಿಂದ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣಕ್ಕಾಗಿ ಶಿಕ್ಷಣ ಮೊಟಕು ಗೊಳಿಸುವ ಸನ್ನಿವೇಶ ಕ್ಷೇತ್ರದಲ್ಲಿ ಸೃಷ್ಟಿಯಾಗುವುದು ಹಾಗೂ ಬಸ್ ಗಳು ಸರಿಯಾದ ಸಮಯಕ್ಕೆ ಸಿಗದೇ ಇರುವ ಕಾರಣಕ್ಕಾಾಗಿ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಈ ದೆಸೆಯಲ್ಲಿ ಇಲಾಖೆ ಅಗತ್ಯ ಕ್ರಮವಹಿಸಬೇಕು. ಇಲ್ಲವಾದರೆ ವಿದ್ಯಾರ್ಥಿಗಳ ಜೊತೆ ಯಾವುದೇ ಹಂತದ ಹೋರಾಟ ನಡೆಸಲಿದ್ದೇವೆ ಎಂಬ ಎಚ್ಚರಿಕೆ ನೀಡಿದರು.

    ಕರಾವಳಿ ಭಾಗದಲ್ಲಿ ಖಾಸಗಿ ಬಸ್ ಸೇವೆ ಹೆಚ್ಚಿರುವುದರಿಂದ ಹಾಗೂ ಅವಶ್ಯವಿರುವ ಅನೇಕ ಕಡೆಗಳಿಗೆ ಸೇವೆ ಒದಗಿಸುತ್ತಿರುವುದರಿಂದ ಸರ್ಕಾರದ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಎಂದು ಹೇಳಿದರು.

    ಖಾಸಗಿ ಬಸ್ಸು  ಹೊಂದಿರುವ ಬಸ್ಸು ಮಾಲೀಕರು ಹಾಗೂ ನಿರ್ವಹಕರು ಕೊರೋನ ಕಾರಣದಿಂದ ಸಾಕಷ್ಟು ಸಂಕಷ್ಟ ಗಳನ್ನು ಎದುರಿಸಿದ್ದಾರೆ. ಜಿಲ್ಲೆಯಲ್ಲಿ ಹಲವು ದಶಕಗಳಿಂದ  ಸಾರ್ವಜನಿಕರಿಗೆ ಬಸ್ ಸೇವೆ ಒದಗಿಸುತ್ತಾ ಬಂದಿರುತ್ತಾರೆ ಹಾಗಾಗಿ ಅವರ ನ್ಯಾಯ ಬದ್ಧ ಬೇಡಿಕೆ ಗಳಿಗೆ ಇಲಾಖೆ ಮನ್ನಣೆ ನೀಡಬೇಕು. ರಾತ್ರಿ ವೇಳೆ ಸಂಚರಿಸುವ ಖಾಸಗಿ ಬಸ್ ಪ್ರಯಾಣಿಕರು ಸೂಕ್ತ ಶೌಚಾಲಯದ ವ್ಯವಸ್ಥೆ ಇಲ್ಲದೆ ಸಂಕಟ ಅನುಭವಿಸುತ್ತಿರುವುದರಿಂದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಾಣ ಗಳಲ್ಲಿ ಈ ಉದ್ದೇಶಕ್ಕಾಗಿ ಖಾಸಗಿ ಬಸ್ಸಿನವರಿಗೂ ಅವಕಾಶ ಮಾಡಿ ಕೊಡಬೇಕು ಎಂದು ಖಾಸಗಿ ಬಸ್ ಒಕ್ಕೂಟದವರು ಮನವಿ ಮಾಡಿದಂತೆ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಾಗಿ ಹೊಸದಾಗಿ ಬಸ್ ಬೇಡಿಕೆ ಯ ಬಗ್ಗೆ ಈಗಾಗಲೇ ಅಧಿಕಾರಿಗಳ ಗಮನಕ್ಕೆ ತಂದಿದ್ದು ಅದರ ಬಗ್ಗೆ ಮತ್ತೊಮ್ಮೆ ಶಾಸಕರು ಕೇಳಲಾಗಿ ಶಾಲಾ ಕಾಲೇಜು ವಿದ್ಯಾಾರ್ಥಿಗಳ ಅನುಕೂಲಕ್ಕಾಾಗಿ ಕಾಲೇಜಿನ ಸಮಯಕ್ಕೆ ಹೊಂದಾಣಿಕೆ ಆಗುವ ಹಾಗೆ 14 ಹೊಸ ಮಾರ್ಗ ಗಳಲ್ಲಿ ಬಸ್ ಓಡಿಸಲು ಆ ಮಾರ್ಗಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದಾಗ ಅಂತಹ ಮಾರ್ಗ ಗಳನ್ನು ಪರಿಶೀಲನೆ ನಡೆಸಿ ಖಾಸಗಿ ಯವರಿಗೆ ಸಾದ್ಯವಾದರೆ ಅವಕಾಶ ಮಾಡಿ ಕೊಡುವುದು ಇಲ್ಲವಾದರೆ ಇಲಾಖೆಯಿಂದ ಬಸ್ ಓಡಿಸಲು ತುರ್ತು ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.

    ಖಾಸಗಿ ಬಸ್ ಮಾಲೀಕರಾದ ಕುಯಿಲಾಡಿ ಸುರೇಶ್ ನಾಯಕ್, ಸದಾನಂದ ಚಾತ್ರ  ಶಿವಾನಂದ ಗಾಣಿಗ, ಸುರೇಶ್ ಶೆಟ್ಟಿ, ಉಪ್ಪುಂದ  ಮೊದಲಾದವರು ಭಾಗವಹಿಸಿ ಸಲಹೆ ನೀಡಿದ್ದಾರೆ ಮತ್ತು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಕೆಎಸ್‌ಆರ್‌ಟಿಸಿ , ಡಿಸಿ  ರಾಜೇಶ್ ಶೆಟ್ಟಿ ಮಂಗಳೂರು ವಿಭಾಗ  ಹಾಗೂ ಆರ್‌ಟಿಒ ಎಲ್ ಪಿ ನಾಯಕ್ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.