Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುನರ್ವಸು ಮಳೆಯಬ್ಬರ: ಕೋಟ, ಬೈಂದೂರು ಭಾಗದಲ್ಲಿ ನೆರೆ. ಕುಂದಾಪುರದ ವಿವಿಧೆಡೆ ಅಪಾರ ಹಾನಿ
    ಊರ್ಮನೆ ಸಮಾಚಾರ

    ಪುನರ್ವಸು ಮಳೆಯಬ್ಬರ: ಕೋಟ, ಬೈಂದೂರು ಭಾಗದಲ್ಲಿ ನೆರೆ. ಕುಂದಾಪುರದ ವಿವಿಧೆಡೆ ಅಪಾರ ಹಾನಿ

    Updated:16/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ನಿರಂತರವಾಗಿ ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆಗೆ ಕರಾವಳಿಯ ಜನಜೀವನ ತಲ್ಲಣಿಸಿದೆ. ಜಿಲ್ಲೆಯ ಕೋಟ, ಬನ್ನಾಡಿ, ಬಸ್ರೂರು ಕಂಡ್ಲೂರು, ನಾವುಂದ ಸೇರಿದಂತೆ ವಿವಿಧ ಭಾಗಗಳಲ್ಲಿ ಗಾಳಿ ಸಹಿತ ಮಳೆ, ನೆರೆಯಬ್ಬರಕ್ಕೆ ಕೃಷಿ ಹಾಗೂ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ.

    Click Here

    Call us

    Click Here

    ಬೆಟ್ಲಕ್ಕಿ ಮನೆ ಲಚ್ಚಗಾಣಿಗರ ಮನೆಯ ಗೋಡೆ ಕುಸಿತ.

    ಕೋಟ ಸಮೀಪದ ಬನ್ನಾಡಿ, ಗಿಳಿಯಾರು, ತೆಕ್ಕಟ್ಟೆ ಪ್ರದೇಶ ಜಲಾವೃತವಾಗಿದೆ. ಕೋಟ – ಸಾಯಿಬ್ರಕಟ್ಟೆ ಸಂಪರ್ಕ ರಸ್ತೆ ಕಡಿತವಾಗಿದೆ. ತೆಕ್ಕಟೆ, ಕೋಟೇಶ್ವರ ಭಾಗದಲ್ಲಿಯೂ ನೆರೆಯಬ್ಬರ ಹೆಚ್ಚಿದೆ. ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಳದ ಹೊರಪೌಳಿಗೂ ನೆರೆ ನೀರು ನುಗ್ಗಿದೆ. ನಾವುಂದದ ಸಾಲ್ಬುಡ, ಕಂಡ್ಲೂರು ಭಾಗದಲ್ಲಿ ಸೌಪರ್ಣಾಕಾ ಹಾಗೂ ವರಾಹಿ ನದಿ ತುಂಬಿ ಹರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ನೂರಾರು ಎಕರೆ ಕೃಷಿಭೂಮಿ, ಮನೆಗಳು ಜಲಾವೃತಗೊಂಡಿದ್ದು, ಅಲ್ಲಿನ ವಾಸಿಗಳು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಹಾಲಾಡಿ ಸಮೀಪ ಸೇತುವೆ ಸಂಪರ್ಕ ಕಡಿತಗೊಂಡಿದ್ದರೇ, ಕೆಲ ಗ್ರಾಮಗಳಲ್ಲಿ ರಸ್ತೆಯ ಮೇಲೆಯೇ ನೀರು ರಭಸದಿಂದ ಹರಿದು ರಸ್ತೆ ಸಂಪರ್ಕ ಕೆಲ ಕಾಲ ಕಡಿತಗೊಂಡಿದೆ. ಅಲ್ಲಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಕೆಲವೆಡೆ ಮನೆ ಕುಸಿತದ ಬಗ್ಗೆ ವರದಿಯಾಗಿದೆ.

    ಕರಾವಳಿ ಜಿಲ್ಲೆಗಳಲ್ಲಿ ಮಳೆಯು ಎರಡು ದಿನಗಳಿಂದ ಬಿಡೆದೇ ಸುರಿಯುತ್ತಿದ್ದು, ರೇಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20ರ ತನಕವೂ ಅಧಿಕ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ಎಚ್ಚರಿಸಿದೆ. ಇಂದು ಶಾಲೆಗಳೂ ರಜೆ ನೀಡಲಾಗಿತ್ತು. ವಾರಾಹಿ, ಸೌಪರ್ಣಿಕಾ ಪಂಚಗಂಗಾ ನದಿಗಳು ತುಂಬಿ ಹರಿಯುತ್ತಿದೆ.

    ಬೈಂದೂರು ತಾಲೂಕಿನ ಸಾಲ್ಬುಡದಲ್ಲಿ ಒಂದು ವಾರದ ಹಿಂದಷ್ಟೇ ನೆರೆಯಿಂದ ಜನರು ಚೇತರಿಸಿಕೊಂಡಿದ್ದು, ಈಗ ಮತ್ತೊಮ್ಮೆ ನೆರೆಯಾವರಿಸಿದೆ. ಜನರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಶಿರೂರು ಬೈಂದೂರು ನಡುವಿನ ಒತ್ತನಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ಭೀತಿ ಇದ್ದು, ಹೆದ್ದಾರಿ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ.

    ನೆರೆಪೀಡಿತ ಪ್ರದೇಶಗಳಲ್ಲಿ ಅಗ್ನಿಶಾಮಕ ದಳದ ತಂಡ, ಪೊಲೀಸರು ಹಾಗೂ ಸ್ಥಳೀಯರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯಲು ನೆರವಾದರು. ವಿವಿಧೆಡೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಸಿಇಓ ಪ್ರತೀಕ್ ಭಾಯಲ್, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ತಹಶೀಲ್ದಾರ್ ಶೋಭಾಲಕ್ಷ್ಮೀ, ಪ್ರದೀಪ್ ಹಾಗೂ ಇನ್ನಿತರರು ಭೇಟಿ ನೀಡಿ ಪರಿಶೀಲಿಸಿದರು.

    Click here

    Click here

    Click here

    Click Here

    Call us

    Call us

    ► ಕುಂದಾಪುರ: ಕೌಟುಂಬಿಕ ಕಲಹ. ಪತ್ನಿ ಎದುರೇ ಹೊಳೆಗೆ ಹಾರಿದ ಪತಿ – https://kundapraa.com/?p=74408 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    eight + 2 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.