ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ನೀರಜ್ ಚೋಪ್ರಾ ಸ್ಪೋರ್ಟ್ಸ್ ಕ್ಲಬ್ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಅಂತರಾಷ್ಟ್ರೀಯ ಚದುರಂಗ ದಿನಾಚರಣೆ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ದೀಕ್ಷಿತ್ ಮೇಸ್ತ ಶುಭಾಂಶನೆಗೈದರು. ಸ. ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಮತ್ತು ಲಾವಣ್ಯ ಅಂತರಾಷ್ಟ್ರೀಯ ಚದುರಂಗ ದಿನಾಚರಣೆಯ ಉದ್ದೇಶ ಹಾಗೂ ಮಹತ್ವದ ಬಗ್ಗೆ ಮಾತನಾಡಿದರು.
ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಹಾಗೂ ನೀರಜ್ ಚೋಪ್ರಾ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರಿಗೆ ಚೆಸ್ ಪಂದ್ಯಾಟ ನಡೆಸಲಾಯಿತು.










