Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ಥಳೀಯ ಸಂಸ್ಥೆಗಳು ಸರಕಾರದ ಅನುದಾನವನ್ನು ಸಂಪೂರ್ಣ ಬಳಸಿ: ಸಚಿವ ರಹೀಂ ಖಾನ್
    ಉಡುಪಿ ಜಿಲ್ಲೆ

    ಸ್ಥಳೀಯ ಸಂಸ್ಥೆಗಳು ಸರಕಾರದ ಅನುದಾನವನ್ನು ಸಂಪೂರ್ಣ ಬಳಸಿ: ಸಚಿವ ರಹೀಂ ಖಾನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಸರ್ಕಾರ ವಿವಿಧ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕರಾವಳಿ ಭಾಗದಲ್ಲಿರುವ ಸ್ಥಳೀಯ ಸಂಸ್ಥೆಗಳು ಇತರೆ ಜಿಲ್ಲೆಗಳಿಗೆ ಹೋಲಿಸಿದ್ದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸರಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಯಥಾವತ್ತಾಗಿ ಸರಕಾರದ ಮಾರ್ಗಸೂಚಿಯನ್ವಯ ವಿಳಂಬವಿಲ್ಲದೇ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆಮಾಡಿಕೊಳ್ಳುವುದರೊಂದಿಗೆ ಇನ್ನಷ್ಟು ಉತ್ತಮ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿ ರಾಜ್ಯಕ್ಕೆ ಮಾದರಿಯಾಗಬೇಕು ಎಂದರು.

    ಆಸ್ತಿ ತೆರಿಗೆ ವಸೂಲಾತಿಯಲ್ಲಿ ಬೈಂದೂರು ಹಾಗೂ ಕುಂದಾಪುರ ಸ್ಥಳೀಯ ಸಂಸ್ಥೆಗಳು ಜಿಲ್ಲೆಯ ಇತರೆ ಸ್ಥಳೀಯ ಸಂಸ್ಥೆಗಳಿಗೆ ಹೋಲಿಸಿದರೆ ವಸೂಲಾತಿ ಕಡಿಮೆ ಇದೆ. ಇದನ್ನು ಆದ್ಯತೆ ಮೇರೆಗೆ ವಸೂಲಿ ಮುಂದಾಗಬೇಕು. ಮಾಲೀಕರುಗಳು ಮನೆಗಳನ್ನು ನಿರ್ಮಾಣ ಮಾಡಿದ ಸಂದರ್ಭದಲ್ಲಿ ಇರುವ ಕಟ್ಟಡಕ್ಕೆ ತೆರಿಗೆಯನ್ನು ಮೊದಲೇ ಎರಡು-ಮೂರು ವರ್ಷಗಳ ಕಾಲ ಕಟ್ಟಿರುತ್ತಾರೆ. ನಂತರದಲ್ಲಿ ಅವುಗಳನ್ನು ವಿಸ್ತರಣೆ ಮಾಡಿ, ಮೊದಲನೆ, ಎರಡನೇ ಮಹಡಿ ವಿಸ್ತೀರ್ಣ ಹೆಚ್ಚಿಸಿದರೂ ಸಹ ಹಳೆಯ ಕಟ್ಟಡದ ತೆರಿಗೆಯನ್ನೇ ಪಾವತಿ ಮಾಡುತ್ತಿರುತ್ತಾರೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳಿಗೆ ತೆರಿಗೆ ವಂಚನೆ ಉಂಟಾಗುತ್ತದೆ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪರಿಶೀಲನೆ ಮಾಡಿ, ಕಟ್ಟಡದ ವಿಸ್ತೀರ್ಣಕ್ಕೆ ಅನುಗುಣವಾಗಿ ತೆರಿಗೆಯನ್ನು ವಸೂಲಿ ಮಾಡಬೇಕು ಎಂದರು.

    ಜಿಲ್ಲೆಯಲ್ಲಿ ಡೆಂಗ್ಯೂ ರೋಗವು ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ತೆಗೆದುಕೊಳ್ಳಬೇಕು. ಸಾರ್ವಜನಿಕರು ಅರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ನೀಡಿ ಮಳೆಯ ನೀರು ಎಲ್ಲೆಂದರಲ್ಲಿ ನಿಂತು ಸೊಳ್ಳೆಗಳು ಉತ್ಪಾದನೆ ಆಗದಂತೆ ಕ್ರಮ ವಹಿಸಬೇಕು. ಪ್ರತಿ ಶುಕ್ರವಾರ ಡ್ರೈ ಡೇ ಆಚರಣೆಗೆ ಹೆಚ್ಚು ಒತ್ತು ನೀಡಬೇಕು. ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಸಮನ್ವಯದೊಂದಿಗೆ ಈ ಎಲ್ಲಾ ಕಾರ್ಯಗಳನ್ನು ಮಾಡಬೇಕು ಎಂದರು.

    Click here

    Click here

    Click here

    Call us

    Call us

    ಪಾರAಪರಿಕ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಪ್ರಾರಂಭಿಸಲು ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಅನುದಾನ ನೀಡಿದೆ. ಇದಕ್ಕೆ ಅಗತ್ಯವಿರುವ ಭೂಮಿಯನ್ನು ಗುರುತಿಸಿ, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆಯನ್ನು ಕರೆದು ವಿಲೇವಾರು ಘಟಕದ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಮುಂದಿನ ದಿನಗಳಲ್ಲಿ ಅಲ್ಲಿ ವೈಜ್ಞಾನಿಕ ರೀತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕಾಪು ಮತ್ತು ಕಾರ್ಕಳ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಅಮೃತ್ ಯೋಜನೆಯಡಿ ಕುಡಿಯುವ ನೀರು ಸೌಲಭ್ಯ ಕಲ್ಪಿಸುವ ಕಾಮಗಾರಿಗಳಿಗೆ ಈಗಾಗಲೇ ಚಾಲ್ತಿಯಲ್ಲಿದ್ದು, ಶೇ.50 ರಷ್ಟು ಕಾಮಗಾರಿಗಳು ಆಗಿವೆ. ಇವುಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಅನುಷ್ಠಾನಗೊಳಿಸುತ್ತಿರುವ ಅಧಿಕಾರಿಗಳೂ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

    15 ನೇ ಹಣಕಾಸಿನಲ್ಲಿ ಬಂದಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಬೈಂದೂರು ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಅನುಷ್ಠಾನದಲ್ಲಿ ತುಂಬಾ ಹಿಂದಿದೆ. ಆದ್ಯತೆಯ ಮೇಲೆ ಇದನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಬಡವರು ಸ್ಥಳೀಯ ಸಂಸ್ಥೆ ಹಾಗೂ ಪ್ರಾಧಿಕಾರದಿಂದ ಯಾವುದೇ ಪರವಾನಿಗೆ ಪಡೆಯದೇ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿರುತ್ತಾರೆ. ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ನೀರು, ವಿದ್ಯುತ್‌ಚ್ಛಕ್ತಿ, ಚರಂಡಿ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕಂಡು ಬರುತ್ತಿವೆ. ಸರಕಾರ ಇವರುಗಳಿಗೆ ಒಂದು ಬಾರಿ ಬಾಕಿ ಇರುವ ಕರವನ್ನು ಪಡೆಯಲು ಸರಕಾರ ಶೀಘ್ರದಲ್ಲಿಯೇ ಮಾರ್ಗಸೂಚಿಯನ್ನು ಹೊರಡಿಸಲಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

     ಸ್ಥಳೀಯ ಸಂಸ್ಥೆಗಳ ಕಟ್ಟಡಗಳು ಮತ್ತು ಜಾಗದ ತೆರಿಗೆಯ ವಸೂಲಾತಿಯನ್ನು ಸ್ಥಳೀಯ ಮಹಿಳಾ ಸಂಘಗಳ ಮೂಲಕ ವಸೂಲಿ ಮಾಡಲು ಸರಕಾರ ಈಗಾಗಲೇ ಸೂಚನೆ ನೀಡಿದೆ. ಸ್ಥಳೀಯ ಸಂಸ್ಥೆಗಳು ಮಹಿಳಾ ಸಂಘವನ್ನು ಬಳಸಿಕೊಂಡು ನೀರಿನ ತೆರಿಗೆ ಸೇರಿದಂತೆ ಇತರೆ ತೆರಿಗೆಯನ್ನು ವಸೂಲಿ ಮಾಡಬೇಕು. ಸರಕಾರ ನಿಗಧಿಪಡಿಸಿರುವ ಶುಲ್ಕವನ್ನು ಅವರಿಗೆ ನೀಡಬೇಕು ಎಂದ ಅವರು, ಉದ್ದಿಮೆದಾರರಿಗೆ ಸ್ಥಳೀಯ ಸಂಸ್ಥೆಗಳು 5 ವರ್ಷಕ್ಕೊಮ್ಮೆ ಪರವಾನಿಗೆ ನೀಡಲು ಸರಕಾರದ ಆದೇಶ ನೀಡಿದೆ. ಈ ಬಗ್ಗೆ ಅವರಲ್ಲಿ ಅರಿವು ಮೂಡಿಸಿ 5 ವರ್ಷ ಕಾಲಾವಧಿಗೆ ಪರವಾನಿಗೆ ಮಾಡಿಕೊಡಲು ಮುಂದಾಗಬೇಕು ಎಂದು ತಿಳಿಸಿದರು.

    ಇಂದಿರಾ ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆಗೆ ಮೊದಲೇ ಆದ್ಯತೆ ನೀಡಬೇಕು. ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಕಾರ ನಿಗಧಿಪಡಿಸಿರುವ ಗುಣಮಟ್ಟದಲ್ಲಿ ವಿತರಣೆ ಆಗುವಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಕ್ಯಾಂಟೀನ್‌ಗಳಿಗೂ ಸಿ.ಸಿ.ಟಿ.ವಿ ಅಳವಡಿಕೆ ಮಾಡಲು ಈಗಾಗಲೇ ಆದೇಶ ಮಾಡಲಾಗಿದೆ. ಅದನ್ನು ಅಳವಡಿಸಬೇಕು. ಆಗ ಮಾತ್ರ ನಿಖರವಾಗಿ ಎಷ್ಟು ಜನರಿಗೆ ಆಹಾರ ವಿತರಣೆ ಆಗಿದೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪ್ರಭುಲಿಂಗ ಕವಲಿಕಟ್ಟಿ, ಆಪ್ತ ಕಾರ್ಯದರ್ಶಿ ಡಾ.ಕೆ ಮುರುಳಿಧರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    23/12/2025

    ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ

    23/12/2025

    ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.