Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗೆ ಸಹಾಯಧನ
    ಊರ್ಮನೆ ಸಮಾಚಾರ

    ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗೆ ಸಹಾಯಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ :
    ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಲು ಇಚ್ಛಿಸುವ ಎಲ್ಲಾ ವರ್ಗದ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆ. ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆ. ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ 2 ಹೆ. ಪ್ರದೇಶದ ವರೆಗೆ ಶೇ. 90 ಹಾಗೂ 2 ಹೆ. ಮೇಲ್ಪಟ್ಟು 5 ಹೆ. ವರೆಗೆ ಶೇ. 45 ಸಹಾಯಧನ ನೀಡಲಾಗುವುದು.

    ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪೆನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಬೇಕು. ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವುದರಿಂದ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ರೈತರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗುತ್ತದೆ.

    ಆಸಕ್ತ ರೈತರು ಅರ್ಜಿ, ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರ, ಜಾತಿ ಪ್ರಮಾಣ ಪತ್ರ ಹಾಗೂ ಹನಿ/ತುಂತುರು ನೀರಾವರಿ ಅಳವಡಿಸುವ ಕಂಪನಿಯ ವಿವರದೊಂದಿಗೆ ಇಲಾಖೆಯ ತಾಲೂಕು ಕಛೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ.), ಉಡುಪಿ ದೂ.ಸಂಖ್ಯೆ: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಉಡುಪಿ ತಾಲೂಕು ದೂ.ಸಂಖ್ಯೆ: 0820-2522837, ಕುಂದಾಪುರ ತಾಲೂಕು ದೂ.ಸಂಖ್ಯೆ: 08254-230813 ಹಾಗೂ ಕಾರ್ಕಳ ತಾಲೂಕು ದೂ.ಸಂಖ್ಯೆ: 08258-230288 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    seventeen − one =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.