Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸೆಪ್ಟಂಬರ್ 14 ರಿಂದ ಅಕ್ಟೋಬರ್ 02 ರ ವರೆಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

     ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಲ್ಲಿ ನೈರ್ಮಲ್ಯ, ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯದ ವತಿಯಿಂದ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದರು.

    ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ತಮ್ಮ ಸುತ್ತ-ಮುತ್ತಲಿನ ಪ್ರದೇಶಗಳ ಸ್ವಚ್ಛತೆಯ ಮಹತ್ವದ ಕುರಿತು ಮಾಹಿತಿ ನೀಡುವುದರೊಂದಿಗೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಜನಪ್ರತಿನಿಧಿಗಳನ್ನು ಸೇರಿಸಿ ಬೀಚ್ ಡ್ರೆಂವ್‍ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

    ಜಿಲ್ಲೆಯ ಜನನಿಬಿಡ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರವಾಸಿ ತಾಣ, ರಾಷ್ಟ್ರೀಯ ಹೆದ್ದಾರಿಗಳ ಬದಿಗಳಲ್ಲಿ, ನೀರಿನ ಮೂಲಗಳು, ಮಾರುಕಟ್ಟೆ ಪ್ರದೇಶ, ಧಾರ್ಮಿಕ ಕೇಂದ್ರ, ಘನ ತ್ಯಾಜ್ಯ ನಿರ್ವಹಣಾ ಘಟಕ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಶ್ರಮದಾನ ಚಟುವಟಿಕೆಗಳನ್ನು ಆಯೋಜಿಸುವುದರೊಂದಿಗೆ ಎಲ್ಲಾ ತಾಲೂಕಿನ ಗ್ರಾಮ ಪಂಚಾಯತ್‌ಗಳು ಗ್ರಾಮಗಳ ಸ್ವಚ್ಚತೆಗಾಗಿ ಸ್ವಯಂ ಪ್ರೇರಿತವಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.

    Click here

    Click here

    Click here

    Call us

    Call us

    ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಪ್ರತಿಜ್ಞಾ ವಿಧಿ, ಮಾನವ ಸರಪಳಿ, ಗಿಡ ನೆಡುವುದು, ಅರಿವು ಕಾರ್ಯಾಗಾರ, ಜಾಥಾ ಆಯೋಜನೆ ಸೇರಿದಂತೆ ಮತ್ತಿತರ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮಕೈಗೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರುಗಳು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕೈಜೋಡಿಸುವುದರೊಂದಿಗೆ ಸಮುದಾಯದ ಸಹಭಾಗಿತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದ ಅವರು ಕಾರ್ಯಕ್ರಮ ಆಯೋಜನೆ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದರು.  

    ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳ ಶೌಚಾಲಯಗಳು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತ್ ಹಾಗೂ ನಗರಸಭೆಗಳು ತಮ್ಮ ಸಂಪನ್ಮೂಲಗಳನ್ನು ಬಳಸಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಬಳಕೆಗೆ ಮೂಲಭೂತ ಸೌಕರ್ಯಗಳೊಂದಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಫಾಯಿ ಮಿತ್ರ ಸುರಕ್ಷಾ ಶಿವಿರ ಮೂಲಕ ಜಿಲ್ಲೆಯ ನೈರ್ಮಲ್ಯ ಕಾರ್ಯಕರ್ತರುಗಳಿಗೆ ಉಚಿತ ಆರೋಗ್ಯ ತಪಾಸಣೆ, ಅಗತ್ಯ ವ್ಯಾಕ್ಸಿನೇಷನ್, ಔದ್ಯೋಗಿಕ ಅಪಾಯಗಳಿಂದ ರಕ್ಷಿಸಲು ಆಯ್ದ ಕಾರ್ಮಿಕರುಗಳಿಗೆ ಪಿ.ಪಿ.ಇ ಕಿಟ್, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಮತ್ತು ಮಂಜೂರಾತಿ ಪತ್ರಗಳನ್ನು ವಿತರಿಸಲಾಗುವುದು ಎಂದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಇ.ಓ ಗಳು, ಪಿ.ಡಿ.ಒ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    17/12/2025

    ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    17/12/2025

    ಕಟಪಾಡಿ ಓವರ್ ಪಾಸ್ ಕಾಮಗಾರಿ ಹಿನ್ನೆಲೆ, ವಾಹನಗಳ ಸುಗಮ ಸಂಚಾರಕ್ಕೆ ಮಾರ್ಗ ಕಲ್ಪಿಸಿ: ಜಿಲ್ಲಾಧಿಕಾರಿ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.