Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಜಾಪ್ರಭುತ್ವದ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯವನ್ನು ಯಶಸ್ವಿಗೊಳಿಸೋಣ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಪ್ರಜಾಪ್ರಭುತ್ವದ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯವನ್ನು ಯಶಸ್ವಿಗೊಳಿಸೋಣ: ಜಿಲ್ಲಾಧಿಕಾರಿ

    Updated:13/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸಲು ಆಯೋಜಿಸಲಾದ ಟ್ರೆಕ್ಕಿಂಗ್‌ನಲ್ಲಿ ಭಾಗವಹಿಸಿ ಮಾತನಾಡಿದರು.

    ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬೀದರ್‌ನಿಂದ ಚಾಮರಾಜ ನಗರದವರೆಗೆ 250 ಕಿ.ಮೀ ವರೆಗೆ 25 ಲಕ್ಷ ಜನರು ಮಾನವ ಸರಪಳಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 100 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಸಾರ್ವಜನಿಕರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರುಗಳು, ಎನ್.ಜಿ.ಓ ಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ರೋಟರಿ ಸಂಸ್ಥೆಯ  ಸದಸ್ಯರುಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಸ್ವಯಂಪ್ರೇರಿತವಾಗಿ ಕೈಜೋಡಿಸಿ, ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

    ಮಾನವ ಸರಪಳಿಯು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮೂಲಕ ಬೈಂದೂರು ತಾಲೂಕಿನ ಶಿರೂರು ಗ್ರಾಮದಿಂದ ಮಾನವ ಸರಪಳಿ ಆರಂಭಗೊಂಡು ಬಿಜೂರು, ಉಪ್ಪುಂದ, ಕೆರ್ಗಾಲ್‌, ಕಂಬದಕೋಣೆ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೊಸಾಡು, ಹೆಮ್ಮಾಡಿ, ಕಟ್‌ಬೆಲ್ತೂರು, ತಲ್ಲೂರು, ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ, ಕೋಟ, ಕೋಟತಟ್ಟು, ಸಾಲಿಗ್ರಾಮ, ಪಾಂಡೇಶ್ವರ, ಐರೋಡಿ, ಹಂದಾಡಿ, ವಾರಂಬಳ್ಳಿ, ಚಾಂತಾರು, ಹಾರಾಡಿ, ಉಪ್ಪೂರು, ಅಂಬಲಪಾಡಿ, ಕಡೆಕಾರ್, ಉದ್ಯಾವರ, ಕಟಪಾಡಿ, ಕೋಟೆ, ಇನ್ನಂಜೆ, ಬಡಾ, ತೆಂಕ, ಪಡುಬಿದ್ರೆ ಗ್ರಾಮ ಪಂಚಾಯತ್ ಮೂಲಕ ಹಾದು ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಪು ತಾಲೂಕಿನ ಹೆಜಮಾಡಿಯಲ್ಲಿ ಸೇರುತ್ತದೆ ಎಂದರು.

    ಜಿಲ್ಲೆಯಲ್ಲಿ ಏರ್ಪಡಿಸಲಾಗುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ನಾಗರಿಕರು, ಕುಟುಂಬ ಸಮೇತ ಕ್ರಿಯಾಶೀಲರಾಗಿ ಪಾಲ್ಗೊಂಡು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸೋಣ ಎಂದರು.

    Click here

    Click here

    Click here

    Click Here

    Call us

    Call us

    ಇದೇ ಸಂದರ್ಭದಲ್ಲಿ ಕುಂಜಾರುಗಿರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಮಾನವ ಸರಪಳಿಯನ್ನು ರಚಿಸಿ, ಪ್ರಜಾಪ್ರಭುತ್ವವನ್ನು ಸಂಭ್ರಮಿಸೋಣ, ಮಾನವ ಸರಪಳಿಯನ್ನು ನಿರ್ಮಿಸೋಣ ಎಂಬ ಘೋಷಣೆಗಳನ್ನು ಕೂಗಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ. ಸಿದ್ದಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಕಾಪು ತಹಶೀಲ್ದಾರ್ ಪ್ರತಿಭಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    12 − 8 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.