Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ: ಜಿಲ್ಲಾಧಿಕಾರಿ

    Updated:27/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಸಪ್ಟೆಂಬರ್ 29 ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ ಸುವ್ಯವಸ್ಥಿತವಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ನಡೆಸುವ ಕನ್ನಡ ಭಾಷೆ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರದಲ್ಲಿ ಮೇಲ್ವಿಚಾರಣೆ ನಡೆಸಲು ನೇಮಕ ಮಾಡಲಾದ ತಂಡಗಳು ಕೈಗೊಳ್ಳಬೇಕಾದ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯ್ಯಾದಂತ 17 ಪರೀಕ್ಷಾ ಕೇಂದ್ರಗಳಲ್ಲಿ ಸಪ್ಟೆಂಬರ್ 29 ರಂದು ಪರೀಕ್ಷೆ ಜರುಗಲಿದ್ದು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಬೆಳಿಗ್ಗೆ 10.30 ರಿಂದ ಮ. 12.30 ರವರೆಗೆ ಸುಗಮವಾಗಿ, ಯಾವುದೇ ಲೋಪದೋಷಗಳಿಲ್ಲದಂತೆ ನ್ಯಾಯಸಮ್ಮತವಾಗಿ ಹಾಗೂ ನಿಷ್ಪಕ್ಷಪಾತವಾಗಿ ಪರೀಕ್ಷೆ ನಡೆಸಬೇಕು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.

    ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿದೆ.  ಮೊಬೈಲ್, ಟ್ಯಾಬ್ಲೆಟ್, ಪೆನ್‌ಡ್ರೈವ್, ಬ್ಲೂ ಟೂತ್ ಡಿವೈಸ್, ಸ್ಮಾರ್ಟವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹೀಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿರುತ್ತದೆ ಎಂದರು.

    ಅಭ್ಯರ್ಥಿಗಳು ಪರೀಕ್ಷೆ ವೇಳೆಯಲ್ಲಿ ಶೂ, ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬಹುದಾಗಿದೆ. ತುಂಬು ತೋಳಿನ ಶರ್ಟ್, ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್ ಮೆಟಲ್(ಮಂಗಳ ಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಪುಲ್ಲೋವರ್ಸ್, ಜಾಕೆಟ್ ಮತ್ತು ಸ್ವೆಟರ್ಸ್ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಹಾಗೂ ತಲೆಯ ಮೇಲೆ ಟೋಪಿ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ನೀಡಬಾರದು. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ, ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟನ್‌ಗಳು ಇರಬಾರದು ಎಂದರು.

    Click here

    Click here

    Click here

    Call us

    Call us

    ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯಲು ತ್ರಿ-ಸದಸ್ಯ ಸಮಿತಿಯನ್ನು, ವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿ ಹಾಗೂ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸಬೇಕು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಕೊಂಡೊಯ್ಯುವ ಸಮಯದಲ್ಲಿ ಉಸ್ತುವಾರಿ ತಂಡಕ್ಕೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕೆಂದರು.

    ಪರೀಕ್ಷೆಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗುವುದು. ಈ ಸಂದರ್ಭದಲ್ಲಿ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳನ್ನು ಪ್ರವೇಶಿಸುವುದನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದ ಅವರು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದರು.

    ಎರಡನೇ ಹಂತದಲ್ಲಿ ಪರೀಕ್ಷಾ ತಪಾಸಣೆ ನಡೆಸಿದ ನಂತರ ಎಲ್ಲಾ ಅಭ್ಯರ್ಥಿಗಳ ಗುರುತಿನ ದಾಖಲೆ/ಚೀಟಿ ಮತ್ತು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಪರಿಶೀಲಿಸಿ ಅವರುಗಳ ಅಭ್ಯರ್ಥಿತ್ವದ ಬಗ್ಗೆ ಖಚಿತಪಡಿಸಿಕೊಂಡ ನಂತರವೇ ಪರೀಕ್ಷಾ ಉಪ ಕೇಂದ್ರದ ಒಳಗೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದ ಅವರು, ಸಭೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ, ಗೋಡೆ ಗಡಿಯಾರಗಳ ಅಳವಡಿಕೆ, ಪರೀಕ್ಷಾ ಸಮಿತಿಯ ಸದಸ್ಯರುಗಳ ನಿರ್ವಹಿಸಬೇಕಾದ ವಿವಿಧ ಕರ್ತವ್ಯಗಳ ಕುರಿತು ಚರ್ಚಿಸಲಾಯಿತು.

    ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಪ್ರಾಧಿಕಾರವು ನಿಗದಿಪಡಿಸಿರುವ ಸೂಚನೆಗಳನ್ನು ಸಂಬಂಧಪಟ್ಟವರು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ತಾಲೂಕುಗಳ ತಹಶೀಲ್ದಾರ್‌ಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    23/12/2025

    ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ

    23/12/2025

    ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.