Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ದಸರಾಕ್ಕೆ ವೈಭವದ ತೆರೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ದಸರಾಕ್ಕೆ ವೈಭವದ ತೆರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಗಂಗೊಳ್ಳಿ ದಸರಾ ಎಂದೇ ಖ್ಯಾತಿ ಪಡೆದ ಗಂಗೊಳ್ಳಿ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ.

    Click Here

    Call us

    Click Here

    ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ಈ ಬಾರಿಯ ಶ್ರೀ ಶಾರದಾ ಮಹೋತ್ಸವ ವಿಶೇಷ ಆಕರ್ಷಣೆ ಪಡೆದುಕೊಂಡಿತ್ತು. ವಿವಿಧ ಜಿಲ್ಲೆಗಳ ಕಲಾ ತಂಡಗಳು, ಆಕರ್ಷಕ ಸ್ತಬ್ಧಚಿತ್ರಗಳು, ಹುಲಿವೇಷ ತಂಡಗಳು ಶೋಭಾಯಾತ್ರೆಯ ಮೆರಗು ಹೆಚ್ಚಿಸಿದವು. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಯು ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗೆ ಸಾಗಿ ಬಂದು ಅಲ್ಲಿಂದ ನಾಯಕವಾಡಿ ಸರ್ಕಲ್‌ವರೆಗೆ ಸಾಗಿ ಮರಳಿ ಗಂಗೊಳ್ಳಿ ಮುಖ್ಯರಸ್ತೆ ಮೂಲಕ ಸಾಗಿ ಬಂದು ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಕೊನೆಗೊಂಡಿತು. ಶೋಭಾಯಾತ್ರೆಯಲ್ಲಿ ನವದುರ್ಗೆಯರನ್ನು ಕಾಣಲು ಜನತೆ ಸಾವಿರಾರು ಸಂಖ್ಯೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದರು. ಕೇರಳದ ಆಕರ್ಷಕ ಚಂಡೆ ವಾದನ, ಡೊಳ್ಳು ಕುಣಿತ, ಗೊಂಬೆಗಳು, ಛದ್ಮವೇಷಗಳ ತಂಡ ಸೇರಿದಂತೆ ಹಲವು ವೇಷಗಳು ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದವು.

    ಶಾರದೆಯನ್ನು ಹೊತ್ತ ಅಲಂಕೃತ ವಾಹನ ಗಂಗೊಳ್ಳಿಯ ರಾಜಬೀದಿಯಲ್ಲಿ ಸಾಗಿ ಬಂದು ಗಂಗೊಳ್ಳಿಯ ಬಂದರಿನಲ್ಲಿ ಪಂಚಗಂಗಾವಳಿ ನದಿಯಲ್ಲಿ ಶಾರದಾ ವಿಗ್ರಹದ ಜಲಸ್ತಂಭನ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಗಂಗಾವಳಿ ನದಿಗೆ ಸಾಮೂಹಿಕ ಪಂಚಗಂಗಾ ಆರತಿ ಕಾರ್ಯಕ್ರಮ ನಡೆಯಿತು. ಆಕರ್ಷಕ ಸುಡುಮದ್ದು ಪ್ರದರ್ಶನ ಜನರ ಕಣ್ಮನ ಸೆಳೆಯಿತು.

    ಕುಂದಾಪುರ ಡಿವೈಎಸ್‌ಪಿ ಬೆಳಿಯಪ್ಪ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹರೀಶ್ ಆರ್., ಬಸವರಾಜ್ ಕನಶೆಟ್ಟಿ ಹಾಗೂ ವಿವಿಧ ಠಾಣೆಯ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಜಿ., ಪ್ರ.ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ, ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ ಮೊದಲಾದವರ ನೇತೃತ್ವದಲ್ಲಿ ಶೋಭಾಯಾತ್ರೆಯು ಯಶಸ್ವಿಯಾಗಿ ಸಂಪನ್ನಗೊಂಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.