Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಗೆ ಕುಂದಾಪುರ, ಬೈಂದೂರಿನಲ್ಲಿ ಸ್ವಾಗತ
    ಊರ್ಮನೆ ಸಮಾಚಾರ

    ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಗೆ ಕುಂದಾಪುರ, ಬೈಂದೂರಿನಲ್ಲಿ ಸ್ವಾಗತ

    Updated:06/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಂಡ್ಯದಲ್ಲಿ ಡಿ.20ರಿಂದ 3 ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯಾದ್ಯಂತ ತೆರಳುವ ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಯನ್ನು ಕುಂದಾಪುರದಲ್ಲಿ ಸ್ವಾಗತಿಸಿಕೊಳ್ಳಲಾಯಿತು.

    Click Here

    Call us

    Click Here

    ಈ ವೇಳೆ ಶಾಸಕ ಕಿರಣ್ ಕುಮಾರ್ ಕೊಡ್ಲಿ ಸಾಹಿತ್ಯ ಸಮ್ಮೇಳನ ಅಂಗವಾಗಿ ಜ್ಯೋತಿ ಎಲ್ಲ ಕಡೆಗೆ ಸಂಚಾರ ಮಾಡುತ್ತಿದೆ. ಕನ್ನಡ ಭಾಷೆಯ ಮಹತ್ವದ ದೃಷ್ಟಿಯಿಂದ ಸಮ್ಮೇಳನ ಅವಶ್ಯವಾಗಿದೆ ಎಂದರು.

    ಭುವನೇಶ್ವರಿಗೆ ಪುಷ್ಪಮಾಲಾರ್ಚನೆ ಮಾಡಲಾಯಿತು. “ಶಾಸ್ತ್ರಿ ಸರ್ಕಲ್‌ನಿಂದ ಪಾರಿಜಾತ ಮೂಲಕ ಮೆರವಣಿಗೆ ನಡೆಸಲಾಯಿತು. ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಗಾನ, ನೃತ್ಯ ನಡೆಯಿತು.

    ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ., ತಹಶೀಲ್ದಾರ್ ಮಲ್ಲಿಕಾರ್ಜುನ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ|ರವಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಕಸಾಪ ಜಿಲ್ಲಾ ಸ್ಥಾಪಕಾಧ್ಯಕ್ಷ ಎ.ಎಸ್.ಎನ್. ಹೆಬ್ಬಾರ್, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಗೌರವ ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ ಬಸೂರು, ತಾಲೂಕು ಆರೋಗ್ಯಾಧಿಕಾರಿ ಡಾ। ಪ್ರೇಮಾನಂದ್ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಉಮೇಶ ಕೋಟ್ಯಾನ್, ಮೆಸ್ಕಾಂ ಎಇಇ ವಿಜಯ ಕುಮಾರ್ ಶೆಟ್ಟಿ ಉಪತಹಶೀಲ್ದಾರ್ ವಿನಯ್, ಸಮಾಜ ಕಲ್ಯಾಣ ಇಲಾಖೆಯ ರಮೇಶ ಕುಲಾಲ್, ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಸದಸ್ಯ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷೆ ಗುಣರತ್ನಾ, ಮಾಜಿ ಸದಸ್ಯೆ ಪುಷ್ಪಾ ಆರ್.ಶೇಟ್, ಮುಖ್ಯಾಧಿಕಾರಿ ಆನಂದ ಜೆ., ಗೋಪಾಡಿ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ, ಸುಧೀರ್ ಕೆ.ಎಸ್., ರೋಹಿಣಿ ಪೈ ಮೊದಲಾದವರು ಇದ್ದರು.

    ಬೈಂದೂರು ತಾಲೂಕಿನಲ್ಲಿಯೂ ಸ್ವಾಗತ:
    ಉಡುಪಿ ಜಿಲ್ಲೆಯ ರಥಯಾತ್ರೆ ಬೈಂದೂರಿನಿಂದ ಆರಂಭಗೊಂಡಿದ್ದು, ಕನ್ನಡ ರಥಯಾತ್ರೆಯನ್ನು ಬೈಂದೂರು ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿಕೊಳ್ಳಲಾಯಿತು.

    Click here

    Click here

    Click here

    Click Here

    Call us

    Call us

    ಶಾಸಕ ಗುರುರಾಜ ಗಂಟಿಹೊಳೆ ಅವರು ಕನ್ನಡಡಾಂಬೆಗೆ ಆರತಿ ಬೆಳಗಿ ಮಾತನಾಡಿ, ಮನಸ್ಸುಗಳು ಒಂದಾಗುತ್ತಿದ್ದಾಗ ಕನ್ನಡಪರ ಚಟುವಟಿಕೆ ವೃದ್ಧಿಸುತ್ತದೆ. ಇತರ ಭಾಷೆಯ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಸಲ್ಲದು. ಭಾಷೆಯ ಉಳಿವು ಮತ್ತು ಬೆಳವಣಿಗೆ ಅದರಷ್ಟಕ್ಕೆ ನಡೆಯುತ್ತಿರುತ್ತದೆ. ಆದರೆ ಅಭಿಮಾನ ಸದಾ ನಮ್ಮಲ್ಲಿರಬೇಕು. ಇತ್ತೀಚಿನ ದಿನಗಳಲ್ಲಿನೆಲ, ಜಲ, ಭಾಷೆ, ಅಭಿಮಾನ ಯುವ ಸಮುದಾಯದಲ್ಲಿ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

    ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್., ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ತಾಲೂಕು ಆರೋಗ್ಯ ಅಧಿಕಾರಿ ಡಾ। ಪ್ರೇಮಾನಂದ, ತಾ.ಪಂ. ಮುಖ್ಯ ಕಾರ್ಯ ಬೈಂದೂರು ನಿರ್ವಹಣಾಧಿಕಾರಿ ಭಾರತಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂರ್ಡಾಕರ್, ಸಾಹಿತಿ ಚಂದ್ರಶೇಖರ ನಾವಡ, ಉಪ ತಹಶೀಲ್ದಾ‌ರ್ ಲತಾ ಶೆಟ್ಟಿ ಗಿರಿಜಾ ಮೊಗೇರ, ಸ.ಪ.ಪೂ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಪಿ. ನಾಯ್ಕ ಸ.ಪ್ರ. ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ ಬೈಂದೂರು ಮಾದರಿ ಶಾಲೆಯ ಮುಖ್ಯ ಶಿಕ್ಷಕ ಜನಾರ್ಧನ ದೇವಾಡಿಗ, ಪುಂಡಲೀಕ ನಾಯಕ್, ಜನಪದ ಪರಿಷತ್ ಅಧ್ಯಕ್ಷ ಗೋವಿಂದ ಬಿಲ್ಲವ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಮೆಸ್ಕಾಂ, ಕಂದಾಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

    ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ.ಸಾ.ಪ ಬೈಂದೂರು ಕಾರ್ಯದರ್ಶಿ ಸುಧಾಕರ ಪಿ.ಬೈಂದೂರು ಸ್ವಾಗತಿಸಿದರು. ಕ.ಸಾ.ಪ ಸದಸ್ಯ ಗಣಪತಿ ಹೋಬಳಿದಾರ್ ನಿರೂಪಿಸಿದರು. ಅರುಣ್ ಕುಮಾರ್ ಶಿರೂರು ವಂದಿಸಿದರು. ಬೈಂದೂರು ತಾಲೂಕು ಆಡಳಿತ ಕಚೇರಿಯಿಂದ ಬೈಂದೂರು ಸರ್ಕಲ್ ವರೆಗೆ ಅದ್ದೂರಿಯ ಜಾಥಾ ಮೂಲಕ ಕನ್ನಡ ರಥವನ್ನು ಬೀಳ್ಕೊಡಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    18 + fourteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.