Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ  ದೇವಳದ ರಥೋತ್ಸವದ ಪೂರ್ವಭಾವಿ ಸಭೆ
    ಊರ್ಮನೆ ಸಮಾಚಾರ

    ಉಪ್ಪುಂದ  ದೇವಳದ ರಥೋತ್ಸವದ ಪೂರ್ವಭಾವಿ ಸಭೆ

    Updated:07/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಉತ್ಸವ ನ. 11ರಿಂದ 18ರವರೆಗೆ ನಡೆಯಲಿದೆ. ನ.12ರಂದು ನಡೆಯುವ ಅದ್ಧೂರಿಯ ಮನ್ಮಹಾ ರಥೋತ್ಸವ ಅಂಗವಾಗಿ ಅದರ ಪೂರ್ವಬಾವಿ ಸಭೆ, ಶಾಸಕ ಗುರುರಾಜ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಉಪ್ಪುಂದ ದೇವಳದ ಮನ್ಮಹಾ ರಥೋತ್ಸವ ತಾಲೂಕಿನ ಅತೀ ದೊಡ್ಡ ರಥೋತ್ಸವವಾಗಿದ್ದು, ಸುಮಾರು 35 ವರ್ಷಗಳ ಬಳಿಕ ಇಲ್ಲಿನ ದೇವಳದ  ರಥೋತ್ಸವ ಕೋಟೇಶ್ವರ ಹಬ್ಬಕ್ಕಿಂತ ಮೊದಲು ಬಂದಿರುವುದರಿಂದ ಜಾತ್ರಗೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗುತ್ತದೆ ಆದ್ದರಿಂದ ಜನರಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮೆಸ್ಕಾಂ, ಅಗ್ನಿ ಶಾಮಕ ಇಲಾಖೆ, ಆರೋಗ್ಯ ಇಲಾಖೆಗಳು ಮುಂಜಾಗೃತ ಕ್ರಮ ಕೈಗೊಳ್ಳಬೇಕು, ಅಲ್ಲದೇ ಮುಂದಿನ ಶುಕ್ರವಾರದಿಂದ ಪ್ರತಿ ಶುಕ್ರವಾರ ಅನ್ನದಾನ ಸೇವೆ ಮಾಡಲು ಶೀಘ್ರ ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಸೂಚಿಸಿದರು.

    ರಥ ಬೀದಿ ಅಗಲೀಕರಣಗೊಳಿಸಿ:
    ಇಲ್ಲಿನ ದೇವಳದ ರಥೋತ್ಸವದ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ನೂಕು ನುಗ್ಗಲು ಉಂಟಾಗುತ್ತಿದೆ, ಹೀಗಾಗಿ ದೇವಳದ ರಥಬೀದಿ ಅಗಲೀಕರಣಗೊಳಿಸಿ ಎಂದು ಮೀನುಗಾರ ಮುಖಂಡ ವೆಂಕಟ್ರಮಣ ಖಾರ್ವಿ ಮನವಿ ಮಾಡಿದರು, ಇದಕ್ಕೆ ಸ್ಪಂಧಿಸಿದ ಶಾಸಕರು ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ ಶೆಟ್ಟಿ ಈ ಬಗ್ಗೆ ಪ್ರತ್ಯೇಕ ಸಭೆ ಕರೆದು, ಸ್ಥಳೀಯ ನಿವಾಸಿಗಳ ಮನವೊಲಿಸಿ, ರಥಬೀದಿ ಅಗಲೀಕರಣದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸತೀಶ ಶೆಟ್ಟಿ ಪ್ರಸ್ತಾವಿಸಿ, ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪರಿಗಣಿಸಿ ಅಮ್ಮನವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಇದಕ್ಕೆ ಎಲ್ಲರ ಸಹಕಾರ ನೀಡಬೇಕು ರಾ. ಹೆದ್ದಾರಿ. ಬೀದಿ ದೀಪ, ಗಿಡಗಂಟಿಗಳ ತೆರವಿಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

    ದೇವಸ್ಥಾನದ ಅಷ್ಟಬಂಧ ಸಮಿತಿಯ ಅಧ್ಯಕ್ಷ ಬಿ. ಎಸ್. ಸುರೇಶ್‌ ಶೆಟ್ಟಿ ,  ಉಪ್ಪುಂದ ಗ್ರಾ.ಪಂ. ಅಧ್ಯಕ್ಷ ಮೋಹನಚಂದ್ರ, ಉಪಾಧ್ಯಕ್ಷೆ ಮಹಾಲಕ್ಷ್ಮೀ, ದೇವಸ್ಥಾನದ ಆಡಳಿತ ಮಡಳಿಯ ಸದಸ್ಯರಾದ, ನಾರಾಯಣ ಖಾರ್ವಿ, ಪ್ರಕಾಶ ಉಡುಪ, ರಾಮ ಎಸ್., ಲಲಿತಾ ಶೆಟ್ಟಿ, ಅಂಬಿಕಾ, ರಾಜೇಶ ದೇವಾಡಿಗ, ರವೀಂದ್ರ ಪ್ರಭು, ಜನಾರ್ದನ ಮಾಚ ಪೂಜಾರಿ, ದೇವಳದ ಪ್ರಭಾರ ಕಾರ್ಯನಿರ್ವಹಣಾಕಾರಿ ಸುದರ್ಶನ ಎಸ್., ಬಂದೂರು ತಹಶೀಲ್ದಾರ ಪ್ರದೀಪ್, ವೃತ್ತ ನಿರೀಕ್ಷಕ ಸವಿತ್ರತೇಜ್, ಠಾಣಾಕಾರಿ ತಿಮ್ಮೇಶ, ಬಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ದೇವಸ್ಥಾನದ ಮಾಜಿ ಧರ್ಮದರ್ಶಿ ಜಯರಾಮ ಶೆಟ್ಟಿ, ನಾನಾ ಇಲಾಖೆಯ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸಂದೇಶ ಭಟ್ ಉಪ್ಪುಂದ ಸ್ವಾಗತಿಸಿ, ನಿರೂಪಿಸಿದರು. ಗಣೇಶ ದೇವಾಡಿಗ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.