Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಳಗ್ಗೆ ಖಾಲಿ ಹೊಟ್ಟೆಗೆ ಚಹಾ ಕುಡಿಯುವುದು ಒಳ್ಳೆಯದಲ್ಲ ತಿಳಿದಿರಲಿ
    ಲೇಖನ

    ಬೆಳಗ್ಗೆ ಖಾಲಿ ಹೊಟ್ಟೆಗೆ ಚಹಾ ಕುಡಿಯುವುದು ಒಳ್ಳೆಯದಲ್ಲ ತಿಳಿದಿರಲಿ

    Updated:15/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಲೇಖನ
    ಬೆಳಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ ಕುಡಿಯುವುದು ಹಲವರ ಅಭ್ಯಾಸವಾಗಿದೆ . ಹಾಗೆ ಮಾಡದಿದ್ದರೆ ದಿನವಿಡೀ ಮಂಕಾಗಿರುತ್ತಾರೆ ಎಂಬುದು ಕೆಲವರ ಅಭಿಪ್ರಾಯ. ಇನ್ನು ಕೆಲವರಿಗೆ ಟೀ ಹೊಟ್ಟೆಗೆ ಬೀಳದಿದ್ದರೆ ಕರುಳಿನಲ್ಲಿ ಸಂಗ್ರಹವಾಗಿದ್ದು ಆಚೆ ಹೋಗುವುದೇ ಇಲ್ಲವಂತೆ. ಇದೆಲ್ಲವೂ ಅಭ್ಯಾಸದ ಪರಿಣಾಮವೇ ಹೊರತು ಮತ್ತೇನಲ್ಲ. ಖಾಲಿ ಹೊಟ್ಟೆಗೆ  ಟೀ ಕುಡಿಯುವುದರಿಂದ ಈ ಕೆಳಗಿನ ಅಪಾಯಗಳು ಉಂಟಾಗುತ್ತವೆ.  

    Click Here

    Call us

    Click Here

    ಬೆಳಗ್ಗೆ ಖಾಲಿ ಹೊಟ್ಟೆಗೆ ಟೀ ಕುಡಿಯುವುದರಿಂದಾಗುವ ಪ್ರಯೋಜನಗಳು
    ಚಯಾಪಚಯ ಕ್ರಿಯೆ: 
    ಬೆಳಗ್ಗೆ ಖಾಲಿ ಹೊಟ್ಟೆ ಚಹಾ ಕುಡಿಯುವುದರಿಂದ ಹೊಟ್ಟೆಯಲ್ಲಿ ಆಮ್ಲೀಯ ಮತ್ತು ಕ್ಷಾರೀಯ ಪದಾರ್ಥಗಳ ಅಸಮತೋಲನದಿಂದಾಗಿ ಚಯಾಪಚಯ ವ್ಯವಸ್ಥೆಗೆ ಅಡ್ಡಿ ಉಂಟಾಗುವ ಸಾಧ್ಯತೆ ಇರುತ್ತದೆ.

    ಆಸಿಡಿಕ್ ಕಂಟೆಂಟ್:
    ಟೀ ರಿಸರ್ಚ್ ಅಸೋಸಿಯೇಷನ್ ​​ಆಫ್ ಇಂಡಿಯಾ ನಡೆಸಿರುವ ಒಂದು ಅಧ್ಯಯನದ ಪ್ರಕಾರ, ಹಾಲನ್ನು ಚಹಾದೊಂದಿಗೆ ಬೆರೆಸಿದಾಗ, ಹಾಲಿನಲ್ಲಿ ತೂಕ ನಷ್ಟಕ್ಕೆ ಕಾರಣವಾಗಿರುವ ವಸ್ತುಗಳ ಪ್ರಭಾವ ಕಡಿಮೆಯಾಗುತ್ತವೆ. ಇದಲ್ಲದೇ, ಹಾಲಿನಿಂದ ಮಾಡಿದ ಚಹಾವು ಹೊಟ್ಟೆಯ ಆಮ್ಲವನ್ನು ಹೆಚ್ಚಿಸುವ ಮೂಲಕ ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ ಹಾಗೂ ತೂಕ ಕೂಡ ಹೆಚ್ಚಳ ಆಗಬಹುದು.

    ಅಲ್ಸರ್ ಸಮಸ್ಯೆ:
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ಬಿಸಿ ಚಹಾ ಕುಡಿಯುವುದರಿಂದ ಹೊಟ್ಟೆಯ ಒಳ ಭಾಗಕ್ಕೆ ಹಾನಿಯಾಗಬಹುದು, ಇದು ಹೊಟ್ಟೆಯ ಹುಣ್ಣುಗಳಿಗೆ ಅಥವಾ ಅಲ್ಸರ್ ಗೆ ಕಾರಣವಾಗಬಹುದು.

    ಬೊಜ್ಜು ಸಮಸ್ಯೆ:
    ಖಾಲಿ ಹೊಟ್ಟೆ ಚಹಾ ಸೇವಿಸುವುದರಿಂದ ಅದರಲ್ಲಿ ಕರಗಿರುವ ಸಕ್ಕರೆ ಕೂಡ ಹೊಟ್ಟೆ ಸೇರುತ್ತದೆ. ಇದರಿಂದ ವ್ಯಕ್ತಿಯ ತೂಕದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತದೆ.

    Click here

    Click here

    Click here

    Call us

    Call us

    ಮೂಳೆಗಳ ಆರೋಗ್ಯ:
    ಖಾಲಿ ಹೊಟ್ಟೆಯಲ್ಲಿ ದೀರ್ಘಕಾಲದವರೆಗೆ ಪ್ರತಿದಿನ ಹಲವಾರು ಕಪ್ ಚಹಾ ಕುಡಿಯುವುದರಿಂದ ಸ್ಕೆಲೆಟ್ಲ್ ಫ್ಲೋರೋಸಿಸ್‌ನಂತಹ ಕಾಯಿಲೆಯು ಉಂಟಾಗಬಹುದು, ಈ ರೋಗವು ಮೂಳೆಗಳನ್ನು ಒಳಭಾಗದಿಂದ ಟೊಳ್ಳು ಮಾಡುತ್ತದೆ. ಈ ಕಾರಣದಿಂದಾಗಿ ಅನೇಕ ಗಂಭೀರ ರೋಗಗಳು ಸಹ ಸಂಭವಿಸಬಹುದು.

    ಆಯಾಸ ಮತ್ತು ಕಿರಿಕಿರಿ:
    ಚಹಾ ಕುಡಿಯುವುದರಿಂದ ತಾಜಾತನ ಬರುತ್ತದೆ ಎಂದು ಹೇಳಲಾಗುತ್ತದೆ. ಆದರೆ ಬೆಳಗ್ಗೆ ಖಾಲಿ ಹೊಟ್ಟೆ ಹಾಲಿನೊಂದಿಗೆ ಚಹಾ ಕುಡಿಯುವುದರಿಂದ ಅದು ಕೆಲಸದಲ್ಲಿ ಆಯಾಸ ಮತ್ತು ಕಿರಿಕಿರಿ ಉಂಟುಮಾಡುತ್ತದೆ.

    ಪಚನ ಕ್ರಿಯೆಯ ಮೇಲೆ ಕೆಟ್ಟ ಪರಿಣಾಮ:
    ಇದರಿಂದ ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಎದುರಾಗುತ್ತದೆ. ಜೊತೆಗೆ ಇದರಿಂದ ಪಚನ ಕ್ರಿಯೆ ಕೂಡ ಕುಂಠಿತಗೊಳ್ಳುತ್ತದೆ. ಇದು ಪಿತ್ತ ಪ್ರಕ್ರಿಯೆಯಲ್ಲಿ ಅಡಚಣೆ ಉಂಟು ಮಾಡುತ್ತದೆ ಮತ್ತು ಇದರಿಂದ ವಾಂತಿ ಮತ್ತು ಪ್ರಕ್ಷುಬ್ಧತೆಯ ಅನುಭವ ಉಂಟಾಗುತ್ತದೆ.

    ಒತ್ತಡ ಹೆಚ್ಚಾಗುತ್ತದೆ:
    ಬೆಳಗ್ಗೆ ಎದ್ದಕ್ಷಣ ತಾಜಾತನ ಅಥವಾ ಫ್ರೆಶ್ ನೆಸ್ ಅನುಭವ ಪಡೆಯಲು ಹಲವರು ಖಾಲಿ ಹೊಟ್ಟೆ ಚಹಾ ಸೇವಿಸುತ್ತಾರೆ. ಇಂತಹ ವ್ಯಕ್ತಿಗಳ ಶರೀರದಲ್ಲಿ ಕ್ಯಾಫಿನ್ ಪ್ರಮಾಣ ಸಾಕಷ್ಟು ಹೆಚ್ಚಾಗುತ್ತದೆ ಹಾಗೂ ಅವರು ನಿದ್ರಾಹೀನತೆಯ ಜೊತೆಗೆ ಒತ್ತಡ ಹಾಗೂ ಖಿನ್ನತೆಯಂತಹ ಸಮಸ್ಯೆಗೆ ಒಳಗಾಗುತ್ತಾರೆ.

    ಹೃದ್ರೋಗದ ಅಪಾಯ:
    ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸುವುದರಿಂದ ಕೆಫೀನ್ ದೇಹದಲ್ಲಿ ಬೇಗನೆ ಸೇರಿಕೊಳ್ಳುತ್ತದೆ. ಇದು ವ್ಯಕ್ತಿಗಳ ಬ್ಲಡ್ ಪ್ರೆಶರ್ ಹೆಚ್ಚಿಸುತ್ತದೆ ಮತ್ತು ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

    ನೀವು ನಿಜಕ್ಕೂ ಮುಂಜಾನೆ ಟೀ ಸೇವಿಸಲೇಬೇಕಿದ್ದರೆ ಹೀಗೆ ಮಾಡಿ:
    ಎದ್ದ ಕೂಡಲೇ ಒಂದು ಲೋಟ ಹದ ಬಿಸಿಯಾದ ನೀರು ಕುಡಿಯಿರಿ. ಐದು ನಿಮಿಷ ಬಿಟ್ಟು ಟೀ ಸೇವಿಸಿ. ಹಿಂದಿನ ರಾತ್ರಿಯೇ ನಾಲ್ಕು ಬಾದಾಮಿಗಳನ್ನು ನೆನೆಸಿಟ್ಟು, ಮುಂಜಾನೆ ಅದರ ಸಿಪ್ಪೆ ಸುಲಿದು, ತಿನ್ನಿ. ನಂತರವೇ ಟೀ ಕುಡಿಯಿರಿ. ಇದು ನಿಮ್ಮ ಜೀರ್ಣಶಕ್ತಿಯನ್ನು ಸುಧಾರಿಸುತ್ತದೆ. ಜಠರವನ್ನು ದಿನದ ಕ್ರಿಯೆಗೆ ಸಿದ್ಧಪಡಿಸುತ್ತದೆ.
     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶರನ್ನವರಾತ್ರಿ: ದೇವಿಯ ಒಂಭತ್ತು ಸ್ವರೂಪಗಳ ಮಹತ್ವ

    22/09/2025

    ಬೆಳಕ ಚಿತ್ರಿಸಿದ ಕ್ಷಣಗಳ ಹಬ್ಬ – ವಿಶ್ವ ಛಾಯಾಗ್ರಹಣ ದಿನ

    19/08/2025

    ಮುಖದ ಸೌಂದರ್ಯ ಹೆಚ್ಚಿಸಲು ಫೇಶಿಯಲ್‌ ಯೋಗ ಎಂಬ ಟ್ರೆಂಡ್

    11/04/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d