ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ಸಂಕಷ್ಟಹರ ಚತುರ್ಥಿ ದೀಪೋತ್ಸವವು ನ.18ರಂದು ನಡೆಯಿತು.
ಬೆಳಗ್ಗೆ ಪ್ರಾತಃಪೂಜೆ, ಪಂಚಾಮೃತಾಭಿಷೇಕ ಪೂರ್ವಕ ಉಪನಿಷತ್ ಕಲಶಾಭಿಷೇಕ, 1008 ತೆಂಗಿನಕಾಯಿ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ಹಾಗೂ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು.


ರಾತ್ರಿ ಮಹಾರಂಗ ಪೂಜೆ, ರಜತ ರಥೋತ್ಸವ, ದೀಪೋತ್ಸವ ಹಾಗೂ ಸುಡುಮದ್ದು ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿ ಕೆ. ನಿರಂಜನ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ಕೃಷ್ಣಾನಂದ ಉಪಾಧ್ಯಾಯ, ಸಹೋದರರು, ವ್ಯವಸ್ಥಾಪಕ ನಟೇಶ್ ಕಾರಂತ್ ತೆಕ್ಕಟ್ಟೆ ಇನ್ನಿತರರು ಉಪಸ್ಥಿತರಿದ್ದರು.










