Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

    Updated:25/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು ಸಾಮಾನ್ಯವಾಗಿ ನವೆಂಬರ್‌ನಿಂದ ಜೂನ್‌ವರೆಗೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮಾನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆ.ಎಫ್.ಡಿ ಹಾಗೂ ಇತರ ಪ್ರಾಣಿ ಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಾಮಾನ್ಯವಾಗಿ ಪಶ್ಚಿಮ ಘಟ್ಟ ಪ್ರದೇಶಗಳು ಹಾಗೂ ಮಲೆನಾಡು ಭಾಗದಲ್ಲಿ ಕ್ಯಾಸನೂರು ಅರಣ್ಯ ರೋಗವು ಹಲವು ವರ್ಷಗಳಿಂದ ಕಂಡು ಬರುತ್ತಿದೆ. ನಮ್ಮ ಜಿಲ್ಲೆಯಲ್ಲಿಯೂ ಸಹ ಕಾಡಂಚಿನ ಪ್ರದೇಶಗಳಲ್ಲಿ ಈ ಹಿಂದೆ ಆಗಿರುವುದು ಕಂಡು ಬಂದಿದೆ. ಆದರೆ ಪ್ರಸ್ತುತ ಯಾವುದೇ ಪ್ರಕರಣಗಳು ಇರುವುದಿಲ್ಲ ಎಂದರು.

    ಉಷ್ಣಾಂಶ ಹೆಚ್ಚಿರುವ ನವೆಂಬರ್‌ನಿಂದ ಜೂನ್‌ವರೆಗೆ ಈ ಕಾಯಿಲೆ ಬರುತ್ತದೆ. ಸಾಮಾನ್ಯವಾಗಿ ಜನರು ಉರುವಲುಗಳನ್ನು ತರಲು ಕಾಡಿಗೆ ಹೋಗಿ ಬಂದಾಗ ಅಥವಾ ಜಾನುವಾರುಗಳು ಕಾಡಿನಲ್ಲಿ ಮೇಯಲು ಹೋದಾಗ ಉಣ್ಣೆಗಳು ಅವುಗಳ ಜೊತೆಯಲ್ಲಿ ಬಂದು ಮನುಷ್ಯನಿಗೆ ಕಚ್ಚಿದಾಗ ಈ ಕಾಯಿಲೆ ಬರುತ್ತದೆ. ಈ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದರು.

    ಮಂಗ ಸತ್ತ ಜಾಗವನ್ನು ಹಾಟ್ಸಾ÷ಪಟ್ ಎಂದು ಗುರುತಿಸಿ, ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜ್ವರ ಇರುವ ಕುರಿತು ಸರ್ವೇ ನಡೆಸಲಾಗುವುದು ಎಂದ ಅವರು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಆರೋಗ್ಯ ಸಮಿತಿಯ ಸಭೆಗಳನ್ನು ನಡೆಸಿ ಸ್ಥಳೀಯ ಜನರಿಗೆ ಆರೋಗ್ಯ ಸುಧಾರಣೆ ಬಗ್ಗೆ ಸ್ಥಳೀಯವಾಗಿ ಪ್ರಚಾರ ಕೈಗೊಳ್ಳಬೇಕು ಹಾಗೂ ಹೊರಗಿನಿಂದ ಬಂದ ಪ್ರವಾಸಿಗರಿಗೂ ಸಹ ಸೂಕ್ತ ಮಾಹಿತಿಗಳನ್ನು ಒದಗಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಈ ರೋಗಗಳ ಕುರಿತು ಮುಂಜಾಗೃತವಾಗಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾರ್ಯಗಳು ನಡೆಯಬೇಕು. ಅರಣ್ಯ ಪ್ರದೇಶ ಸುತ್ತಮುತ್ತ ವಾಸಿಸುವ ಜನರಿಗೆ ಈ ಕಾಯಿಲೆ ಬರುವ ಅಪಾಯ ಹೆಚ್ಚಿರುವುದರಿಂದ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮಂಗನ ಜ್ವರ ಬಂದರೆ ಮೂರರಿಂದ ಐದು ದಿನಗಳ ಕಾಲ ತೀವ್ರ ತರಹದ ಜ್ವರ, ತೀವ್ರ ದೇಹನೋವು, ಕಣ್ಣು ಕೆಂಪಾಗುವುದು, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಕಂಡುಬರುತ್ತವೆ ಎಂದರು.

    ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡಿನಲ್ಲಿ ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ತಮ್ಮ ಆರೋಗ್ಯದ ಬಗ್ಗೆಯೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜನರಿಗೆ ಅರಿವು ಮೂಡಿಸಲು ಹೆದ್ದಾರಿ ಫಲಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದರು.

    ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚು ಆಗುತ್ತಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ನಾಯಿ ಕಚ್ಚಿದವರಿಗೆ ಹಾಗೂ ಹಾವು ಕಚ್ಚಿದ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಲಸಿಕೆಗಳನ್ನು ಸಾಕಷ್ಟು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ. ಗಡಾದ್, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಪ್ರಶಾಂತ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    nine − 1 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.