ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆ ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ್ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದೆ.
ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನ.28ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.










