Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ- 2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆ
    ಉಡುಪಿ ಜಿಲ್ಲೆ

    ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ- 2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯ ಅಂತರದಲ್ಲಿ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಸಭೆಯಲ್ಲಿ ಶಾಲಾ- ಕಾಲೇಜುಗಳ ವ್ಯಾಪ್ತಿಯ ನೂರು ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ. ಆದರೆ ಬೈಂದೂರು ತಾಲೂಕಿನ ನಾವುಂದ, ಶಿರೂರು, ಹಕ್ಲಾಡಿ, ಉಪ್ಪುಂದ ಗ್ರಾಮ ಪಂಚಾಯಿತಿ ಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರು ಸಹ ಬರಿ ಎಚ್ಚರಿಕೆ ಹಾಗೂ ತಿಳುವಳಿಕೆ ನೋಟಿಸ್ ಅನ್ನು ನೀಡಲಾಗಿದೆ. ಇದು ಸರಿಯಲ್ಲ ಅಂತಹವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

    ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ದೂರು ನೀಡಲು ಸರಕಾರ ಆಪ್ ಅನ್ನು ಅಭಿವೃದ್ಧಿ ಪಡಿಸಿದ್ದು, “Stop Tobacco” ಆಪ್ ಆಗಿದ್ದು  ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ಪಡಿಸಬೇಕು. ಸಾರ್ವಜನಿಕರು ಸಹ ಅದರ ಬಳಕೆ ಮಾಡಿಕೊಳ್ಳುವುದರೊಂದಿಗೆ ಆನ್‌ಲೈನ್ ನಲ್ಲಿ ಸೂಕ್ತ ಪ್ರಾಧಿಕಾರಕ್ಕೆ ಅಥವಾ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದರು.

    ಶಾಲಾ-ಕಾಲೇಜುಗಳ ಪ್ರಾಚಾರ್ಯರ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುತ್ತಿದ್ದಾರಾ ಎಂದು ನಿಗಾ ವಹಿಸುವುದರೊಂದಿಗೆ, ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ ಕೋಟ್ಪಾ ಕಾಯಿದೆ ಅನುಷ್ಠಾನ ಸಮಿತಿಗೆ ಕೂಡಲೇ ಮಾಹಿತಿ ನೀಡಬೇಕು ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲೆಯಲ್ಲಿ 2024 ರ ಏಪ್ರಿಲ್‌ನಿಂದ ಈವರೆಗೆ 54 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, 151 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 16,070 ರೂ ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ದಾಳಿಗಳನ್ನು ನಿರಂತರವಾಗಿ ಆಗಿಂದಾಗ್ಗೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ..ಅರುಣ್ ಕೆ, ಎ.ಎಸ್.ಪಿ ಪಿ.ಎ ಹೆಗಡೆ, ಡಿ.ಎಫ್.ಓ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ. ಗಡಾದ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ಡಿಡಿಪಿಐ ಗಣಪತಿ, ಡಿಡಿಪಿಯು ಮಾರುತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    fourteen − 2 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.