ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಅಲ್ಪಾಡಿ ಅರಣ್ಯ ಘಟಕದ ಉಪವಲಯ ಅರಣ್ಯಾಧಿಕಾರಿ ಹೇಮಾ ಅವರು ಅರಣ್ಯ ಪಾಲಕ ರಾಘವೇಂದ್ರ ಅವರ ಬೈಕಿನ ಹಿಂಬದಿ ಕುಳಿತು, ಹೆಬ್ರಿ ತಾ। 9ನೇ ಮೈಲುಕಲ್ಲು ಬಳಿ ಅರಣ್ಯ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭ ಗಣೇಶ ಅವರು ಚಲಾಯಿಸುತ್ತಿದ್ದ ಪಿಕಪ್, ಬೈಕಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು. ಇಬ್ಬರನ್ನು ಸ್ಥಳೀಯರು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










