Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗೆ 140.74 ಕೋಟಿ ವಿನಿಯೋಗ: ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ
    ಊರ್ಮನೆ ಸಮಾಚಾರ

    ಬೈಂದೂರು ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗೆ 140.74 ಕೋಟಿ ವಿನಿಯೋಗ: ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ

    Updated:06/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು: ಆರ್ಥಿಕವಾಗಿ ಹಿಂದುಳಿದಿರುವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಬೈಂದೂರು ತಾಲೂಕಿನಲ್ಲಿ ಇದುವರೆಗೆ ಸುಮಾರು 140.74 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು.

    Click Here

    Call us

    Click Here

    ಶುಕ್ರವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ ಗೃಹಲಕ್ಷ್ಮೀ ಯೋಜನೆಯಿಂದ 27,526 ಫಲಾನುಭವಿಗಳ ಸೆಪ್ಟೆಂಬರ್ ತಿಂಗಳ ತನಕ ಖಾತೆಗೆ ಪ್ರತಿತಿಂಗಂತೆ ಒಟ್ಟು ರೂ. 74.70 ಕೋಟಿ ಜಮಾ ಆಗಿದೆ. ತಾಂತ್ರಿಕ ಕಾರಣದಿಂದಾಗಿ 804 ಫಲಾನುಭವಿಗಳಿಗೆ ಬಾಕಿಯಿದೆ.  ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ಉಪಕೇಂದ್ರ ವ್ಯಾಪ್ತಿಯ 27,748 ಕುಟುಂಬಗಳಿಗೆ ನವೆಂಬರ್‌ ತಿಂಗಳ ತನಕ 26 ಕೋಟಿ ರೂ., ತಲ್ಲೂರು ಮೆಸ್ಕಾಂ ಉಪ ಕೇಂದ್ರ ವ್ಯಾಪ್ತಿಯ 1899 ಕುಟುಂಬಗಳಿಗೆ 1.71 ಕೋಟಿ ರೂ. ಸೇರಿದಂತೆ ಒಟ್ಟು 27.71ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182ಪಡಿತರ ಚೀಟಿಗಳಿಗೆ 1.90 ಕೋಟಿ ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಯುವನಿಧಿ ಯೋಜನೆಯಡಿ 339 ಫಲಾನುಭವಿಗಳಿಗೆ 37.53 ಲಕ್ಷ ರೂ. ಜಮಾ ಆಗಿದೆ. ಶಕ್ತಿ ಯೋಜನೆಯಡಿ ಇದುವರೆಗೆ 1 ಕೋಟಿಗೂ ಅಧಿಕ ಮಹಿಳೆಯರು (ಪುನರಾವರ್ತಿತ) ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು, 36.04 ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದರು.

    ಗೃಹಲಲಕ್ಷ್ಮೀ ಯೋಜನೆಯಡಿ 804 ಮಂದಿಗೆ ತಾಂತ್ರಿಕ ಕಾರಣದಿಂದ ಹಣ ಬರುವುದು ತಡೆಯಾಗಿದೆ. ಇದಕ್ಕೆ ತಕ್ಷಣ ಸ್ಪಂದಿಸುವ ಕಾರ್ಯವಾಗಬೇಕು ಎಂಬ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹೇಳಿದರು. ಇದಕ್ಕೆ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಅಧಿಕಾರಿ ಉತ್ತರಿಸಿ ಸಾಲ ಮೊದಲಾದ ಕಾರಣಕ್ಕೆ ಐಟಿಆರ್‌ ಮಾಡಿದವರ ಬಿ.ಪಿ.ಎಲ್‌ ಕಾರ್ಡ್‌ ರದ್ದಾಗಿದೆ. ಅಂತವರಿಂದ ಐ.ಟಿ.ಆರ್‌ ಹಾಗೂ ಜಿ.ಎಸ್.ಟಿ ಪಾವತಿದಾರರು ಅಲ್ಲ ಎಂಬ ಬಗ್ಗೆ ಸಿಎ ಅವರ ಶಿಪಾರಸ್ಸು ಪತ್ರ ಪಡೆದು ಬೆಂಗಳೂರಿಗೆ ಕಳುಹಿಸಿಕೊಡಲಾಗುತ್ತಿದೆ. ಸದ್ಯದಲ್ಲಿಯೇ ಅದು ಸರಿಯಾಗಲಿದೆ ಎಂದರು.

    ಕೊಲ್ಲೂರು ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಮತ್ತೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ಸದಸ್ಯರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಸ್‌ಆರ್‌ಟಿಸಿ ಅಧಿಕಾರಿ, ಈ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರದ ಬಗ್ಗೆ ಖಾಸಗಿ ಬಸ್ ಮಾಲೀಕರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದರಿಂದ ಸ್ಥಗಿತಗೊಳಿಸಲಾಗಿದೆ, ಇದು ತೆರವುಗೊಂಡ ಬಳಿಕ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು, ಅಲ್ಲದೇ ಬೈಂದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಪ್ರಗತಿಯಲ್ಲಿದ್ದು, ಶೀಘ್ರ ಪೂರ್ಣಗೊಳ್ಳಲಿದೆ ಎಂದರು.

    ಗ್ಯಾರೆಂಟಿ ಯೋಜನೆಯಿಂದ ಸಾರ್ವಜನಿಕರಿಗೆ ಉಪಯೋಗ:
    ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಯ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗುತ್ತಿದೆ ಎಂದು ಅಪಪ್ರಚಾರ ಮಾಡಲಾಗುತ್ತದೆ. ಆದರೆ ಇದು ಶುದ್ಧ ಸುಳ್ಳು. ರಾಜ್ಯದ ಸುಮಾರು 3.75 ಲಕ್ಷ ರೂ. ಗಾತ್ರದ ಬಜೆಟ್‌ನಲ್ಲಿ ಕೇವಲ 56 ಸಾವಿರ ಕೋಟಿ ರೂ. ಮಾತ್ರ ಗ್ಯಾರಂಟಿಗೆ ವೆಚ್ಚವಾಗುತ್ತಿದ್ದು, ಉಳಿದ ಅನುದಾನದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿದೆ, ಕೇಂದ್ರ ಸರ್ಕಾರವು ರಾಜ್ಯದ ತೆರಿಗೆಯ ಪಾಲನ್ನು ಸಮರ್ಪಕವಾಗಿ ನೀಡಿದರೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗುತ್ತದೆ ಎಂದರು.

    Click here

    Click here

    Click here

    Click Here

    Call us

    Call us

    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಡಾ. ರವಿಕುಮಾರ್ ಹುಕ್ಕೇರಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಪ್ರಭಾಕರ ನಾಯ್ಕ, ಮಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.