Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯ ಕಾಪಾಡಲು ಅಲ್ಬೆಂಡಾಝೋಲ್ ಮಾತ್ರೆ ಉಚಿತ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯ ಕಾಪಾಡಲು ಅಲ್ಬೆಂಡಾಝೋಲ್ ಮಾತ್ರೆ ಉಚಿತ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಮಕ್ಕಳು ಪೌಷ್ಠಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಸಹ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆ. ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ 1 ರಿಂದ 19 ವರ್ಷದೊಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಕೈಗಾರಿಕಾ ಶಿಕ್ಷಣ ಮತ್ತು ಉದ್ಯೋಗ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

    ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ 1 ರಿಂದ 5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6 ರಿಂದ 19 ವರ್ಷದೊಳಗಿನವರಿಗೆ ಸರಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುತ್ತದೆ ಎಂದರು.

    ಅಂಗನವಾಡಿಯಲ್ಲಿ ದಾಖಲಾದ, ದಾಖಲಾಗದ ಮತ್ತು ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳಿಗೂ ಜಂತುಹುಳು ನಿವಾರಣಾ ಮಾತ್ರೆಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದ ಅವರು, ಜಂತುಹುಳು ನಿವಾರಣಾ ದಿನದಂದು ಜಂತುಹುಳು ಮಾತ್ರೆ ನೀಡದ ಮಕ್ಕಳಿಗೆ ಮಾಪ್ ಅಪ್ ಡೇ ದಿನವಾದ ಡಿಸೆಂಬರ್ 16 ರಂದು ನೀಡಲಾಗುವುದು ಎಂದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳು ಸರ್ವತೋಮುಖ ಅಭಿವೃದ್ಧಿ ಹೊಂದಲು ಆರೋಗ್ಯ ಅತೀ ಮುಖ್ಯವಾಗಿದೆ. ಜಂತುಹುಳದ ಸಮಸ್ಯೆಯಿಂದ ಮಕ್ಕಳಲ್ಲಿ ರಕ್ತ ಹೀನತೆ ಉಂಟಾಗಿ ಅಪೌಷ್ಠಿಕತೆ ಕಂಡುಬರುತ್ತಿದ್ದು, ಇದು ಅವರುಗಳ ಆಟ-ಪಾಠಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜಂತು ಹುಳದ ನಿವಾರಣೆಗೆ ಮಕ್ಕಳು ಮಾತ್ರೆ ಸೇವನೆಯಿಂದ ಮಾತ್ರವಲ್ಲದೇ ಕಡ್ಡಾಯವಾಗಿ ಶೌಚಾಲಯಗಳನ್ನು ಉಪಯೋಗಿಸಿದ ನಂತರ ಕೈತೊಳೆಯುವುದು, ಪರಿಸರದ ಸ್ವಚ್ಛತೆ ಕಾಪಾಡುವುದು, ಮಲವಿಸರ್ಜನೆಗೆ ಶೌಚಾಲಯವನ್ನೇ ಬಳಸುವುದು ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳಿಂದ ಜಂತುಹುಳು ಭಾದೆಯಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದ ಅವರು, ಜಿಲ್ಲೆಯಲ್ಲಿ ಒಟ್ಟು 269675 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ನೀಡಲಾಗುವುದು.ಈ ಬಗ್ಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರುಗಳಿಗೆ ತರಬೇತಿಯನ್ನು ಸಹ ನೀಡಲಾಗಿದೆ ಎಂದರು.  

    Click here

    Click here

    Click here

    Click Here

    Call us

    Call us

    ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮೈಸೂರು ವಿಭಾಗದ ವಿಭಾಗೀಯ ಆರೋಗ್ಯ ಮತ್ತು ಕು.ಕ ಸೇವೆಗಳ ನಿರ್ದೇಶನಾಲಯದ ಉಪನಿರ್ದೇಶಕಿ ಡಾ. ಮಲ್ಲಿಕಾ ಬಿ, ನಗರಸಭೆ ಕೌನ್ಸಿಲರ್ ಹರೀಶ್ ಶೆಟ್ಟಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸಾ ಬಿ.ಕೆ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತ ನಾಯಕ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಕುಸುಮಾ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್. ನಿರೂಪಿಸಿ, ಪ್ರೌಢಶಾಲಾ ಶಿಕ್ಷಕ ಗಣಪತಿ ಭಟ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    twelve − four =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.