Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು: ಜಿಲ್ಲಾಧಿಕಾರಿ

    Updated:11/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಹಾಗೂ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಿದಲ್ಲಿ ಮಾತ್ರ ಸುಗಮ ಸಂಚಾರ ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಅವೈಜ್ಞಾನಿಕವಾಗಿ ಕೈಗೊಳ್ಳದೇ ವೈಜ್ಞಾನಿಕವಾಗಿ ನಿರ್ಮಾಣ , ಅವುಗಳ ನಿರ್ವಹಣೆ ಮಾಡಿ ಸುವ್ಯವಸ್ಥಿತವಾಗಿ ಇಟ್ಟಾಗ ಮಾತ್ರ ಸಾರ್ವಜನಿಕ ವಾಹನಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತದೆ. ಇದಕ್ಕೆ ಅಧಿಕಾರಿಗಳು ಒತ್ತು ನೀಡಿ, ಜಿಲ್ಲೆಯಲ್ಲಿ ಉಂಟಾಗುತ್ತಿರುವ ಅಪಘಾತ ಗಳ ಪ್ರಮಾಣವನ್ನು ಇಳಿಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು.

    ಉಡುಪಿ ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ ವರದಿಯಾದ ರಸ್ತೆ ಅಪಘಾತ ಗಳನ್ನು ಆಧರಿಸಿ ರಾಷ್ಟ್ರೀಯ ಹೆದ್ದಾರಿಗಳ ಸ್ಥಳಗಳಲ್ಲಿ ಅಪಘಾತವಾಗುವ ಕಪ್ಪುಚುಕ್ಕೆ 20 ಸ್ಥಳಗಳನ್ನು ಗುರುತಿಸಲಾಗಿದೆ. ಕಳೆದ ಸಭೆಯಲ್ಲಿ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಸದರಿ ಸ್ಥಳಗಳಿಗೆ ಭೇಟಿ ನೀಡಿ ಅಪಘಾತಗಳು ಸಂಭವಿಸಲು ಕಾರಣ ಹಾಗೂ ಅವುಗಳ ತಡೆಗಟ್ಟಲು ಕೈ ಗೊಳ್ಳಬಹುದಾದ ವೈಜ್ಞಾನಿಕ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಲಾಗಿತ್ತು. ಅದರನ್ವಯ ಕ್ರಮ ಕೈಗೊಂಡ ಅನುಪಾಲನಾ ವರದಿಯನ್ನು ನೀಡಲಾಗಿದೆ. ಬಾಕಿ ಉಳಿದ ಸ್ಥಳಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು ಅನುಪಾಲನೆ ಮಾಡದೆ ಇರುವ ಅಧಿಕಾರಿಗಳಿಗೆ ಹಾಗೂ ಸಭೆಗೆ ಹಾಜರಾಗದೆ ಇರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು. ಅಲ್ಲಿ ಒಂದೊಮ್ಮೆ ಅಪಘಾತ ವಾದಲ್ಲಿ ಅವರನ್ನು ಮೇಲು ಸಹ ಪ್ರಕರಣ ದಾಖಲಿಸ ಬೇಕು ಎಂದು ಸೂಚನೆ ನೀಡಿದರು.

    ಉಡುಪಿ ನಗರಸಭೆಯ ವತಿಯಿಂದ ಮಣಿಪಾಲದ ಟೈಗರ್ ಸರ್ಕಲ್ ಸಮೀಪ ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಾಣವನ್ನು ಆದಷ್ಟು ಬೇಗ ಕೈಗೊಳ್ಳಬೇಕು. ಅದು ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಂಡಲ್ಲಿ ಮಾತ್ರ ಸಾರ್ವಜನಿಕರು ಅದನ್ನು ಬಳಕೆ ಮಾಡಿಕೊಳ್ಳುತ್ತಾರೆ. ಇಲ್ಲವಾದಲ್ಲಿ ಅದು ನಿರುಪಯುಕ್ತ ವಾಗುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸಿ, ನಿರ್ಮಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಿಡಿಯನ್ ಓಪನ್ ಗ ಳನ್ನು ಮಾಡುವಾಗ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ಯಾವುದೇ ರೀತಿಯಲ್ಲಿ ಅದೇ ತಡೆಯಾಗದಂತೆ ಹಾಗೂ ವಾಹನ ದಟ್ಟಣೆ ಆಗದೆ ಇರುವ ಸ್ಥಳಗಳನ್ನು ಗುರುತಿಸಿ, ಐ.ಆರ್ ಸಿ ಗೈಡ್ ಲೈನ್ ಬಳಸಿಕೊಂಡು ವರದಿ ತಯಾರಿಸಿ ಸಮಿತಿಯ ಅನುಮತಿ ಪಡೆದು ಮಾಡಬೇಕು. ನಿಯಮಗಳನ್ನು ಉಲ್ಲಂಘಿಸಿ ಮಾಡಿರುವ ಮೀಡಿಯನ್ ಓಪನ್ ಗಳನ್ನು ರದ್ದುಪಡಿಸುವುದು ಸೂಕ್ತ ಎಂದರು.

    ಕಳೆದ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯ ಯೋಜನೆಯ ಕಾಮಗಾರಿಗಳನ್ನು ಅನುಮೋದನೆ ಪಡೆಯುವುದರೊಂದಿಗೆ ಆದಷ್ಟು ಶೀಘ್ರದಲ್ಲಿಯೇ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್.  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ. ಶಾಂತಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    17 + 16 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.