Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚಾಯತ್‌ ಚುನಾವಣೆ: ಒಂದೂವರೆ ದಶಕದ ಬಳಿಕ ಕಾಂಗ್ರೆಸ್‌ – ಎಸ್‌ಡಿಪಿಐ ಬೆಂಬಲಿತರ ತೆಕ್ಕೆಗೆ ಗಂಗೊಳ್ಳಿ ಗ್ರಾಮ ಪಂಚಾಯತ್
    ಊರ್ಮನೆ ಸಮಾಚಾರ

    ಪಂಚಾಯತ್‌ ಚುನಾವಣೆ: ಒಂದೂವರೆ ದಶಕದ ಬಳಿಕ ಕಾಂಗ್ರೆಸ್‌ – ಎಸ್‌ಡಿಪಿಐ ಬೆಂಬಲಿತರ ತೆಕ್ಕೆಗೆ ಗಂಗೊಳ್ಳಿ ಗ್ರಾಮ ಪಂಚಾಯತ್

    Updated:13/12/2024No Comments
    Facebook Twitter Pinterest LinkedIn WhatsApp Reddit Tumblr Email
    filter: 0; fileterIntensity: 0.0; filterMask: 0; captureOrientation: 0; hdrForward: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: 0;weatherinfo: weather?null, icon:null, weatherInfo:100;temperature: 40;
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ,ಡಿ.13:
    ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿಗೆ ಡಿ.10ರಂದು ನಡೆದ ಚುನಾವಣೆಯ ಫಲಿತಾಂಶವು ಗುರುವಾರ ರಾತ್ರಿ ಹೊರಬಿದ್ದಿದ್ದು ಕಾಂಗ್ರೆಸ್‌ – ಎಸ್‌ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಒಟ್ಟು 33 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ 12, ಎಸ್‌ಡಿಪಿಐ ಬೆಂಬಲಿತ 7, ಬಿಜೆಪಿ ಬೆಂಬಲಿತ 12 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‌ – ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗಳ ಚುನಾವಣಾ ಮೈತ್ರಿ ಇದ್ದುದರಿಂದ ಒಂದೂವರೆ ದಶಕದ ಬಳಿಕ ಕಾಂಗ್ರೆಸ್‌ ಬೆಂಬಲಿತರು ಗಂಗೊಳ್ಳಿ ಗ್ರಾಮ ಪಂಚಾಯತಿಯ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ.

    Click Here

    Call us

    Click Here

    ಗಂಗೊಳ್ಳಿಯ ಒಟ್ಟು 8 ವಾರ್ಡ್‌ಗಳಲ್ಲಿ 1ನೇ ವಾರ್ಡಿನ ಒಟ್ಟು ಐದು ಸ್ಥಾನಗಳಲ್ಲಿ ಗುರುರಾಜ, ರೇಖಾ ಖಾರ್ವಿ ಸರೋಜಕೃಷ್ಣ ಪೂಜಾರಿ, ನಾಗರಾಜ ಖಾರ್ವಿ, ನಾಗರತ್ನ ಶೇರುಗಾ‌ರ್ ಗೆಲುವು ಸಾಧಿಸಿದ್ದಾರೆ. 2ನೇ ವಾರ್ಡಿನಲ್ಲಿ ತಬ್ರರೈಸ್, ಶರೀನಾ, ಅಬೂಬಕ್ಕರ್ ನಾಕುದಾ ಹಾಗೂ ರಜಬ್ ಗೆಲುವು ಸಾಧಿಸಿದ್ದಾರೆ. 3ನೇ ವಾರ್ಡಿನಲ್ಲಿ ದೀಪಾ, ಗೋಪಾಲ್ ಖಾರ್ವಿ, ಮಮತಾ ಎಸ್ ಗಾಣಿಗ, ಶ್ಯಾಮಲ ಶೆಡ್ತಿ ಗೆಲುವು ಸಾಧಿಸಿದರೆ 4ನೇ ವಾರ್ಡಿನಲ್ಲಿ ಮಹೇಶ್, ಅಮ್ಮು ಮೊಗೇರ್ತಿ, ಶೋಭಾ ಕೃಷ್ಣ ಬಿಲ್ಲವ, ದೇವೇಂದ್ರ ಖಾರ್ವಿ ಗೆಲುವು ಸಾಧಿಸಿದ್ದಾರೆ. 5ನೇ ವಾರ್ಡಿನಲ್ಲಿ ಲಕ್ಷ್ಮಿಪೂಜಾರಿ, ಜನ್ನಿ ಖಾರ್ವಿ, ಗಣೇಶ್ ಪೂಜಾರಿ, ಜಯೇಂದ್ರ ಖಾರ್ವಿ ಗೆಲುವು ಸಾಧಿಸಿದ್ದಾರೆ. 6ನೇ ವಾರ್ಡಿನಲ್ಲಿ ಮಂಜುಳಾ ದೇವಾಡಿಗ, ಮ್ಯಾಕ್ಸಿಮ್ ಆಲ್ಬರ್ಟ್, ಫೆರ್ನಾಂಡಿಸ್, ಮೊಮಿನ್ ಸಮೀರ್ ಅಹ್ಮದ್ ಗೆಲುವು ಸಾಧಿಸಿದ್ದಾರೆ. 7ನೇ ವಾರ್ಡಿನಲ್ಲಿ ಸುರೇಖಾ ಕಾನೋಜಿ, ಶ್ರೀನಾಥ್ ಖಾರ್ವಿ, ರಿಯಾಜ್ ಅಹ್ಮದ್ ಹಾಗೂ 8ನೇ ವಾರ್ಡಿನಲ್ಲಿ ಚಂದ್ರ ಖಾರ್ವಿ, ಅಕ್ಕಮ್ಮ ಯು ಕುಮಾ‌ರ್, ಅಶ್ವಿನಿ ಖಾರ್ವಿ, ರಾಜೇಂದ್ರ ಗೆಲುವಿನ ನಗೆ ಬೀರಿದ್ದಾರೆ. ಕುಂದಾಪ್ರ ಡಾಟ್‌ ಕಾಂ

    ಗಂಗೊಳ್ಳಿ ಗ್ರಾಮ ಪಂಚಾಯತಿಯ ಅಧಿಕಾರದ ಗದ್ದುಗೆ ಹಿಡಿಯಲು ಒಟ್ಟು 17 ಸ್ಥಾನಗಳು ಅಗತ್ಯವಿದ್ದು, ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗಳು ಜೊತೆಯಾಗಿ ಸೆಣಸಾಡಿ ಒಟ್ಟು 19 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.‌ ಕಾಂಗ್ರೆಸ್‌ ಬೆಂಬಲಿತರು ಅಧ್ಯಕ್ಷ ಹಾಗೂ ಎಸ್‌ಡಿಪಿಐ ಬೆಂಬಲಿತರು ಉಪಾಧ್ಯಕ್ಷರಾಗುವ ಸಾಧ್ಯತೆ ಇದೆ. ಗಂಗೊಳ್ಳಿ ಪಂಚಾಯತ್‌ ಕಳೆದ 15 ವರ್ಷಗಳಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪಾಲಾಗುತ್ತಿತ್ತು. ಕಾಂಗ್ರೆಸ್‌ ಹಾಗೂ ಎಸ್‌ಡಿಪಿಐ ಬೆಂಬಲಿತರು ಒಟ್ಟಾಗಿ ಚುನಾವಣೆ ಎದುರಿಸಿದ್ದು ಅವರ ಗೆಲುವಿಗೆ ದಾರಿಮಾಡಿಕೊಟ್ಟರೇ, ಬಿಜೆಪಿಯ ಬಣ ರಾಜಕೀಯ, ಹಿರಿಯರು ಹಾಗೂ ಹಿಂದಿನ ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಅವರಿಗೆ ಮುಳುವಾಯಿತು. /ಕುಂದಾಪ್ರ ಡಾಟ್‌ ಕಾಂ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    ten + 17 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.