Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗಳ ಉದ್ಘಾಟನೆ
    ಉಡುಪಿ ಜಿಲ್ಲೆ

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ ಕಾಂ ಸುದ್ದಿ.
    ಉಡುಪಿ:
    ಸಿರಿಧಾನ್ಯಗಳನ್ನು ಸಾರ್ವಜನಿಕರು ತಮ್ಮ ದೈನಂದಿನ ಆಹಾರ ಸೇವನೆಯಲ್ಲಿ ಬಳಕೆಮಾಡಿಕೊಂಡಲ್ಲಿ ಉತ್ತಮ ಆರೋಗ್ಯವನ್ನು ಹೊಂದಲು ಸಹಕಾರಿಯಾಗುತ್ತದೆ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

    ಸಿರಿಧಾನ್ಯಗಳನ್ನು ನಮ್ಮ ಪೂರ್ವಜರು ಈ ಹಿಂದೆ ಪಾರಂಪರಿಕ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಸಾವಯವ ಗೊಬ್ಬರವನ್ನು ಉಪಯೋಗಿಸಿ, ಅಲ್ಪ ಪ್ರಮಾಣದ ನೀರಿನ ಬಳಕೆಯೊಂದಿಗೆ ಬೆಳೆಗಳನ್ನು ಬೆಳೆಯುತ್ತಿದ್ದರು. ಇವುಗಳಲ್ಲಿ ಪೌಷ್ಠಿಕತೆಯು ಸತ್ವಗಳು ಸಹ ಹೆಚ್ಚು ಇರುತ್ತದೆ. ಇವುಗಳನ್ನು ಜನಸಾಮಾನ್ಯರು ಪ್ರತಿನಿತ್ಯದ ಆಹಾರ ಪದಾರ್ಥಗಳಲ್ಲಿ ಬಳಕೆಮಾಡಿಕೊಳ್ಳುವುದು ಒಳಿತು ಎಂದರು.

     ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಬಳಕೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ವಿವಿಧ ರೀತಿಯ ಸಿರಿಧಾನ್ಯಗಳ ಸ್ಪರ್ಧೆ ಹಾಗೂ ಸಿರಿಧಾನ್ಯಗಳ ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬಳಸುವ ಮೂಲಕ ನಮ್ಮ ನೆಲದ ಬೆಳೆಗಳ ಪ್ರಯೋಜನವನ್ನು ಪಡೆದುಕೊಳ್ಳುವುದರ ಜೊತೆಗೆ ಸಿರಿಧಾನ್ಯ ಕೃಷಿಕರಿಗೆ ಇನ್ನಷ್ಟು ಉತ್ತೇಜನ ನೀಡಿದಂತಾಗುತ್ತದೆ ಎಂದರು. 

    ಸಿರಿಧಾನ್ಯಗಳು ನಮ್ಮ ಪೂರ್ವಜರ ಜೀವನದ ಆಹಾರ ಪದ್ಧತಿಗಳಾಗಿದ್ದವು. ರಾಗಿ, ನವಣೆ, ಸಾಮೆ, ಸಜ್ಜೆ, ಹಾರಕ, ಕೊರಲೆ, ಬರಗು, ಉದಲು ಹಾಗೂ ಜೋಳ ಇವು ನಮ್ಮ ಸಾಂಪ್ರದಾಯಿಕ ಬೆಳೆಗಳಾಗಿದ್ದು, ನಮ್ಮ ಆಹಾರ ಸಂಸ್ಕೃತಿಯ ಅವಿಭಾಜ್ಯ ಅಂಗಗಳಾಗಿದ್ದವು. ಆಧುನಿಕತೆಗೆ ಮಾರುಹೋಗಿ ಇವುಗಳ ಉತ್ಪಾದನೆ ಹಿನ್ನೆಡೆಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಇವುಗಳ ಬಳಕೆಯ ಮಹತ್ವಗಳನ್ನು ಅರಿತು ಜನರು ಇವುಗಳ ಬಳಕೆಗೆ ಹೆಚ್ಚಿನ ಆಸಕ್ತಿ ತೋರಬೇಕು ಎಂದರು. 

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ಜನರ ಜೀವನಶೈಲಿ ಬದಲಾಗುತ್ತಿದ್ದಂತೆ ಆಹಾರ ಪದ್ದತಿಯಲ್ಲಿಯೂ ಬದಲಾವಣೆ ಕಂಡುಬರುವುದರಿಂದ ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯಗಳನ್ನು ಬಳಸುವವರ ಸಂಖ್ಯೆ ತೀರಾ ಇಳಿಕೆಯಾಗಿದೆ. ಪ್ರತಿಯೊಬ್ಬರು ಸಿರಿಧಾನ್ಯಗಳಿಂದ ದೊರೆಯುವ ಪೌಷ್ಠಿಕಾಂಶಗಳ ಕುರಿತು ಮಾಹಿತಿ ಹೊಂದಿ ಅವುಗಳನ್ನು ಬಳಸಬೇಕು.

    ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ. ಸ್ವಾಗತಿಸಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ನಿರೂಪಿಸಿ, ವಂದಿಸಿದರು.

    ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಮಹಿಳೆಯರು ಹಾಗೂ ಪುರುಷರು ಉತ್ಸಾಹದಿಂದ ಭಾಗವಹಿಸಿದರು. ಖಾರ ಸಿರಿಧಾನ್ಯ ಖಾದ್ಯಗಳು, ಸಿಹಿ ಸಿರಿಧಾನ್ಯ ಖಾದ್ಯಗಳು ಮತ್ತು ಮರೆತುಹೋದ ಸಿಹಿ ಸಿರಿಧಾನ್ಯ ಖಾದ್ಯಗಳು ಸ್ಪರ್ಧೆಯಲ್ಲಿ ಪ್ರದರ್ಶನದಲ್ಲಿ ಕಂಡು ಬಂದಿತು. 3 ವಿಭಾಗಗಳಲ್ಲಿ ಒಟ್ಟು 31 ಮಂದಿ ಭಾಗವಹಿಸಿ ವಿಶೇಷವಾಗಿ ಕುಚ್ಚಲಕ್ಕಿ ಲಡ್ಡು, ಊದಲು ಪಾಯಸ, ರಾಗಿ ಹಲ್ವಾ, ಗೋಧಿ ಮೋದಕ, ಸಜ್ಜೆಉಂಡೆ, ನವಣೆ ಚಿತ್ರಾನ್ನ, ಸಿರಿಧಾನ್ಯ ಪಲಾವ್, ದಾಸವಾಳ ಜ್ಯೂಸ್, ಅಗಸೆ ಮಜ್ಜಿಗೆ, ಬಾಳೆದಿಂಡು ಮೊಸರು ಬಜ್ಜಿ, ಅತ್ರಾಸ್, ಚಕ್ಕುಲಿ ಸೇರಿದಂತೆ 58 ವಿವಿಧ ಬಗೆಯ ಸಿರಿಧಾನ್ಯಗಳ ಖಾದ್ಯಗಳು ನೋಡುಗರನ್ನು ತನ್ನತ್ತ ಸೆಳೆಯುತ್ತಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    seventeen + 10 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.