Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರತಿಯೊಬ್ಬರೂ ಗ್ರಾಹಕರ ರಕ್ಷಣೆಯ ಹಕ್ಕುಗಳ ಕುರಿತು ಮಾಹಿತಿ ಹೊಂದಿರುವುದು ಅವಶ್ಯ: ಅಪರ ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಪ್ರತಿಯೊಬ್ಬರೂ ಗ್ರಾಹಕರ ರಕ್ಷಣೆಯ ಹಕ್ಕುಗಳ ಕುರಿತು ಮಾಹಿತಿ ಹೊಂದಿರುವುದು ಅವಶ್ಯ: ಅಪರ ಜಿಲ್ಲಾಧಿಕಾರಿ

    Updated:26/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ
    : ಗ್ರಾಹಕರ ರಕ್ಷಣೆಗಾಗಿಯೇ ಅನೇಕ ಹಕ್ಕು ಮತ್ತು ಕಾನೂನುಗಳಿವೆ. ಇವುಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಾಗ ಮಾತ್ರ ದೈನಂದಿನ ಸರಕು ಮತ್ತು ಸೇವೆಗಳನ್ನು ಪಡೆಯುವಲ್ಲಿ ಕೆಲವೊಮ್ಮೆ ಎದುರಿಸುವ ವಂಚನೆ ಮತ್ತು ಮೋಸದಿಂದ ಪಾರಾಗಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಗ್ರಾಹಕರ ಸುರಕ್ಷತೆಯ ಕಾಯ್ದೆಯ ಪ್ರಕಾರ ಗ್ರಾಹಕರಾಗಿ ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ಅದರ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ದಿನಾಂಕವನ್ನು ಪರಿಶೀಲಿಸಿ, ಖರೀದಿಸಬೇಕು ಎಂದ ಅವರು, ಇ-ಕಾಮರ್ಸ್ ಮತ್ತು ಆನ್‌ಲೈನ್ ಮೂಲಕ ಸೇವೆ ಪಡೆಯುವ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಿ, ಸಂಪೂರ್ಣ ಮಾಹಿತಿಯೊಂದಿಗೆ ವ್ಯವಹರಿಸಬೇಕು ಎಂದರು.

    ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಯೋಗೀಶ್ ಮಾತನಾಡಿ, ಗ್ರಾಹಕರ ರಕ್ಷಣಾ ಕಾಯಿದೆಯನ್ನು 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿಂದೆ ವಸ್ತುಗಳನ್ನು ನೇರವಾಗಿ ಹಣ ಪಾವತಿಸಿ ಖರೀದಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಮೂಲಕ ವಸ್ತುಗಳ ಖರೀದಿ ಹಾಗೂ ಸೇವೆಯನ್ನು ಪಡೆಯುತ್ತಿದ್ದೇವೆ. ಹೊಸ ಸವಲತ್ತುಗಳೊಂದಿಗೆ ಹೊಸ ಸಮಸ್ಯೆಗಳು ಉದ್ಭವಿಸಿದ್ದರಿಂದ ಕೆಲವು ಬದಲಾವಣೆಗಳೊಂದಿಗೆ ಗ್ರಾಹಕರ ರಕ್ಷಣೆಗೆ 2019 ರಲ್ಲಿ ಹೊಸ ಕಾಯ್ದೆ ಜಾರಿ ಮಾಡಲಾಯಿತು ಎಂದರು.

    ಗ್ರಾಹಕ ತನ್ನ ಸೇವೆಯಿಂದ ವಂಚಿತನಾಗುತ್ತಿದ್ದಾನೆ ಎಂದು ಭಾವಿಸಿದಾಗ ತ್ವರಿತ ನ್ಯಾಯ ಪಡೆಯಲು ಮನೆಯಲ್ಲಿ ಕುಳಿತು ಆನ್‌ಲೈನ್ ಮೂಲಕ ಅಥವಾ ಬಳಕೆದಾರರ ವೇದಿಕೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇದರಿಂದ ಕಡಿಮೆ ಶುಲ್ಕ ಪಾವತಿಸುವುದರೊಂದಿಗೆ ಶೀಘ್ರವಾಗಿ ಅಂತಿಮ ತೀರ್ಮಾನ ದೊರಕಿಸಿಕೊಡುವಲ್ಲಿ ಬಳಕೆದಾರರ ವೇದಿಕೆಯು ಮಹತ್ವದ ಪಾತ್ರ ವಹಿಸುತ್ತದೆ ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಎ.ಪಿ.ಕೊಡಂಚ ಉಪನ್ಯಾಸ ನೀಡಿ ಮಾತನಾಡಿ, ಪ್ರಸ್ತುತ ಕಾಲದಲ್ಲಿ ಮಾರುಕಟ್ಟೆಯ ವ್ಯವಹಾರಗಳು ಬದಲಾಗುತ್ತಿದ್ದು, ಗ್ರಾಹಕರಲ್ಲಿ ನಿರಂತರ ಜಾಗೃತಿ ಅವಶ್ಯಕವಾಗಿದೆ. ಗ್ರಾಹಕರು ಕಾನೂನನ್ನು ಸಮರ್ಪಕವಾಗಿ  ಬಳಕೆಮಾಡಿಕೊಂಡಾಗ ಮಾತ್ರ ಅದರ ಶಕ್ತಿ ನಮ್ಮ ಅರಿವಿಗೆ ಬರುತ್ತದೆ. ಆದ್ದರಿಂದ ಗ್ರಾಹಕ ಕಾಯಿದೆಗಳ ಕುರಿತ ಮಾಹಿತಿಯನ್ನು ಪ್ರತಿಯೊಬ್ಬರು ಹೊಂದಿರಬೇಕು ಎಂದರು. 

    ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಸತ್ಯನಾರಾಯಣ ಪಿ ರಾವ್ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ತೆಂಕಪೇಟೆ ವಾರ್ಡ್ನ ನಗರಸಭೆ ಸದಸ್ಯೆ ಮಾನಸ.ಸಿ.ಪೈ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ಸುನಿಲ.ತಿ. ಮಾಸರಡ್ಡಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯೆ ಸುಜಾತಾ ಬಿ, ಬಳಕೆದಾರರ ವೇದಿಕೆಯ ಸಂಚಾಲಕ ಯು.ಜಿ ಕಾಮತ್, ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಿ.ಎಡ್ಕೆ, ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದ ಅಧ್ಯಾಪಕರುಗಳು, ಸಿಬ್ಬಂದಿಗಳು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಆಹಾರ ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ ಸ್ವಾಗತಿಸಿ, ಬಳಕೆಯ ವೇದಿಕೆಯ ಹರಿಕೃಷ್ಣ ಶಿವತ್ತಾಯ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    thirteen + sixteen =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.